Kalaburagi News: ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಮಂಗಳವಾರ ವಿವಿಧ ದಲಿತ ಸಂಘಟನೆ ಹಾಗೂ ಇತರೆ ಸಂಘಟನೆಗಳು ಕಲಬುರಗಿ ಬಂದ್‌ಗೆ ಕರೆ ನೀಡಿದ್ದು, ಈ ವೇಳೆ ಕೇಂದ್ರ ಸಚಿವ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ, ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. (Kalaburagi News) ಈ ಕುರಿತ ವಿವರ ಇಲ್ಲಿದೆ.
Vishwavani News
December 24, 2024
ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಮಂಗಳವಾರ ವಿವಿಧ ದಲಿತ ಸಂಘಟನೆ ಹಾಗೂ ಇತರೆ ಸಂಘಟನೆಗಳು ಕಲಬುರಗಿ ಬಂದ್‌ಗೆ ಕರೆ ನೀಡಿದ್ದು, (Kalaburagi News) ಈ ವೇಳೆ ಕೇಂದ್ರ ಸಚಿವ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ, ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿ ಬಂದ್ ಅಂಗವಾಗಿ ನಗರದ ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ತಿಮ್ಮಾಪುರ ವೃತ್ತ ಸೇರಿದಂತೆ ನಗರದ ಇತರೆಡೆ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು.
ಈ ಸುದ್ದಿಯನ್ನೂ ಓದಿ | Consumer Rights day 2024: ರಾಷ್ಟ್ರೀಯ ಗ್ರಾಹಕ ಹಕ್ಕುಗಳ ದಿನ: ಜಾಗೃತಿಯೇ ರಕ್ಷಾ ಕವಚ
ಬಂದ್ ಪ್ರಯುಕ್ತ ಬಸ್ ನಿಲ್ದಾಣ ಹಾಗೂ ರೈಲ್ವೇ ನಿಲ್ದಾಣಕ್ಕೆ ಬೇರೆ ಊರುಗಳಿಂದ ಆಗಮಿಸಿದ ಪ್ರಯಾಣಿಕರು ನಗರದ ಬಸ್, ಆಟೋ ಹಾಗೂ ಬಾಡಿಗೆ ಕಾರ್ ಸೇವೆ ಇಲ್ಲದೇ, ಬಸ್‌ಗಾಗಿ ಕಾದು ಕುಳಿತು ಪರದಾಡುವಂತಾಯಿತು. ಇನ್ನು ಕಲಬುರಗಿ ಬಂದ್ ಹಿನ್ನೆಲೆ ಸೂಪರ್ ಮಾರ್ಕೆಟ್, ಕಣ್ಣಿ ಮಾರ್ಕೆಟ್, ಗಂಜ್ ಮಾರ್ಕೆಟ್ ಸೇರಿದಂತೆ ಮಾರ್ಕೆಟ್‌ಗಳನ್ನು ಮುಚ್ಚಲಾಗಿತ್ತು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ, ವಿವಿಧ ದಲಿತಪರ ಸಂಘಟನೆ ಹಾಗೂ ಇತರೆ ಸಂಘಟನೆಗಳ ಮುಖಂಡರು, ಕೇಂದ್ರ ಸಚಿವ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ, ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿಯನ್ನೂ ಓದಿ | Karnataka Film Chamber of Commerce: ಸಿಎಂ ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನೂತನ ಪದಾಧಿಕಾರಿಗಳು
ಬಂದ್ ವೇಳೆ ರಸ್ತೆಗಿಳಿದ ಲಾರಿಯ ಗಾಜು ಪೀಸ್ ಪೀಸ್
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕುರಿತು ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ಮಂಗಳವಾರ ವಿವಿಧ ದಲಿತಪರ ಸಂಘಟನೆಗಳು, ಇತರೆ ಸಂಘಟನೆಗಳು ಕರೆ ನೀಡಿದ್ದ ಕಲಬುರಗಿ ಬಂದ್ ವೇಳೆ ನಗರದ ಹೊರವಲಯದ ಬೇಲೂರು ಕ್ರಾಸ್ ಬಳಿ ರಸ್ತೆಗಿಳಿದ ಲಾರಿಯ ಗ್ಲಾಸ್ ಪೀಸ್ ಪೀಸ್ ಮಾಡಲಾಗಿದೆ ಎಂದು ತಿಳಿದುಬಂದಿದೆ.