ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: 3 ತಿಂಗಳಿಂದ ಸಂಬಳ ದೊರೆಯದ್ದಕ್ಕೆ ಗ್ರಂಥಪಾಲಕಿ ಆತ್ಮಹತ್ಯೆ

Kalaburagi news: ವೇತನ ಕೇಳಲು ತೆರಳಿದಾಗ ಕೀಳಾಗಿ ಕಾಣುತ್ತಿದ್ದರು. ಸಂಬಂಧಿಸಿದ ಅಧಿಕಾರಿಗಳ ಕೈ, ಕಾಲು ಮುಗಿದರೂ ಕರುಣೆ ಬರಲಿಲ್ಲ. ನನ್ನ ಪರಿಸ್ಥಿತಿ ಬೇರೆ ಗ್ರಂಥಪಾಲಕರಿಗೆ ಬರಬಾರದು. ಹೀಗಾಗಿ ಇಂತಹ ನಿರ್ಧಾರ ಮಾಡಿರುವೆ ಎಂದು ಭಾಗ್ಯವತಿ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.

ಮೃತ ಭಾಗ್ಯವತಿ

ಕಲಬುರಗಿ: ಕಳೆದ 3 ತಿಂಗಳಿನಿಂದ ಸಂಬಳ ನೀಡದ ಕಾರಣಕ್ಕೆ ಬೇಸತ್ತ ಗ್ರಂಥಪಾಲಕಿಯೊಬ್ಬರು ಡೆತ್ ನೋಟ್ (Death note) ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self harming) ಶರಣಾಗಿರುವ ಘಟನೆ ಕಲಬುರಗಿ (Kalaburagi news) ಜಿಲ್ಲೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಂಥಪಾಲಕಿ ಭಾಗ್ಯವತಿ ವಿಶ್ವೇಶ್ವರಯ್ಯ ಅಗ್ಗಿಮಠ (38) ಡೆತ್ ನೋಟ್ ಬರೆದಿಟ್ಟು ಗ್ರಂಥಾಲಯದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡೆತ್ ನೋಟ್‌ನಲ್ಲಿ ಏನಿದೆ?

ʼ20 ವರ್ಷಗಳಿಂದ ಗ್ರಂಥಾಲಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಸಕಾಲಕ್ಕೆ ವೇತನ ಪಾವತಿಯಾಗದ ಕಾರಣಕ್ಕೆ ಸಾಲ ಮಾಡಿಕೊಂಡಿದ್ದೆ. ಸಾಲ ಪಾವತಿಸದೇ, ಮಕ್ಕಳ ಫೀಸ್ ಕಟ್ಟದೆ ಮಾನಸಿಕವಾಗಿ ಕುಗ್ಗಿ ಹೋಗಿದ್ದೇನೆ. ವೇತನ ಕೇಳಲು ತೆರಳಿದಾಗ ಕೀಳಾಗಿ ಕಾಣುತ್ತಿದ್ದರು. ಸಂಬಂಧಿಸಿದ ಅಧಿಕಾರಿಗಳ ಕೈ, ಕಾಲು ಮುಗಿದರೂ ಕರುಣೆ ಬರಲಿಲ್ಲ. ನನ್ನ ಪರಿಸ್ಥಿತಿ ಬೇರೆ ಗ್ರಂಥಪಾಲಕರಿಗೆ ಬರಬಾರದು. ಹೀಗಾಗಿ ಇಂತಹ ನಿರ್ಧಾರ ಮಾಡಿರುವೆ‘ ಎಂದು ಭಾಗ್ಯವತಿ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Self Harming: ಬೇರೊಬ್ಬಳ ಜೊತೆ ಗಂಡನ ಚಾಟಿಂಗ್, ನೊಂದು ನವವಿವಾಹಿತೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌, ಯುವಕ ಆತ್ಮಹತ್ಯೆ

ಕಾರ್ಕಳ: ಖಾಸಗಿ ವಿಡಿಯೋ ಇಟ್ಟುಕೊಂಡು ಗೆಳೆಯರು ಮಾಡುತ್ತಿದ್ದ ಬ್ಲ್ಯಾಕ್‌ಮೇಲ್‌ನಿಂದ (Blackmail) ಆಘಾತಗೊಂಡು ಯುವಕನೊಬ್ಬ ಆತ್ಮಹತ್ಯೆಗೆ (Self Harming) ಶರಣಾದ ಘಟನೆ ಉಡುಪಿ (Udupi news) ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಳಣ್ಣಿನ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ನಿಟ್ಟೆ ಗ್ರಾಮದ ಅಭಿಷೇಕ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಪ್ರೀತಿಸಿದ ಯುವತಿ ಜತೆಗಿದ್ದ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಗೆಳೆಯರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಅಭಿಷೇಕ್‌ ಆಚಾರ್ಯ ಬರೆದಿಟ್ಟ ಡೆತ್ ನೋಟ್‌ನಲ್ಲಿ ಬ್ಲ್ಯಾಕ್‌ಮೇಲ್ ಮಾಡಿದ ನಾಲ್ವರು ಸ್ನೇಹಿತರ ಹೆಸರು ಉಲ್ಲೇಖಿತವಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ. ಮೃತ ಯುವಕನ ಮೊಬೈಲ್ ಮತ್ತು ತಾಂತ್ರಿಕ ಆಯಾಮದಲ್ಲಿ ಪರಿಶೀಲನೆ ನಡೆಯುತ್ತಿದೆ. ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹೆಸರಿಸಿದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹರೀಶ್‌ ಕೇರ

View all posts by this author