ವಿದೇಶ ಫ್ಯಾಷನ್‌ ಲೋಕ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್‌ ಹೌಸ್‌ ಸಂಪಾದಕೀಯ

Kalaburagi News: ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ: ವಿವಿಧ ದಾಖಲೆಗಳ ಪರಿಶೀಲನೆ

ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಗುರುವಾರ (ಫೆ. 27) ಬೆಳಗ್ಗೆ ಲೋಕಾಯುಕ್ತದ 5 ತಂಡಗಳು ದಾಳಿ ನಡೆಸಿವೆ. ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ್ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಈ ವೇಳೆ ವಿವಿಧ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ದಾಳಿ

Profile Siddalinga Swamy Feb 27, 2025 3:51 PM

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯದ (Kalaburagi News) ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತದ 5 ತಂಡಗಳು ದಾಳಿ (Lokayukta Raid) ನಡೆಸಿ, ವಿವಿಧ ದಾಖಲೆಗಳ ಪರಿಶೀಲನೆ ನಡೆಸಿವೆ. ವಿದ್ಯಾರ್ಥಿಗಳಿಗೆ ಅಂಕಪಟ್ಟಿ (Marks Card) ನೀಡಲು ವಿಳಂಬ, ನಕಲಿ ಪದವಿ ಪ್ರಮಾಣ ಪತ್ರ, ಅಂಕಪಟ್ಟಿ ನೀಡಲು ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ್ ಅವರ ನೇತೃತ್ವದಲ್ಲಿ ಏಕಕಾಲಕ್ಕೆ 5 ತಂಡಗಳಾಗಿ ದಾಳಿ ನಡೆಸಿ, ಪರಿಶೀಲನೆ ನಡೆಸಲಾಗುತ್ತಿದೆ.

ಗುರುವಾರ ಬೆಳಗ್ಗೆ 10.30 ಗಂಟೆಯ ಸುಮಾರಿಗೆ ಏಕಕಾಲಕ್ಕೆ 5 ತಂಡಗಳಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ದಾಳಿ ನಡೆಸಿ, ಹಾಜರಿ ಪುಸ್ತಕ, ಚಲನವಲನ ರಿಜಿಸ್ಟರ್ ಸೇರಿದಂತೆ ಹಲವು ರೀತಿಯಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನೂ ಓದಿ | Dinesh Gundu Rao: ರಾಜ್ಯದ ಹೋಟೆಲ್​, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ​ ನಿಷೇಧ: ಸಚಿವ ದಿನೇಶ್ ಗುಂಡೂರಾವ್

ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ್ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಲೋಕಾಯುಕ್ತ ಡಿವೈಎಸ್ಪಿಗಳಾದ ಗೀತಾ ಬೇನಾಳ ಹಾಗೂ ಹನುಮಂತರಾಯ ಹಾಗೂ ಇನ್ಸ್‌ಪೆಕ್ಟರ್ ಸಂತೋಷ್, ಅರುಣ್ ಕುಮಾರ್, ಸಿದ್ದರಾಯ, ರಾಜಶೇಖರ್ ಪಾಲ್ಗೊಂಡಿದ್ದರು.