Kalaburagi News: ಕಲಬುರಗಿಯಲ್ಲಿ ರಾಷ್ಟ್ರ ಧ್ವಜಕ್ಕೆ ಅಪಮಾನ; ತ್ರಿವರ್ಣ ಧ್ವಜದ ಸ್ತಂಭದಲ್ಲಿ ಮುಸ್ಲಿ ಧ್ವಜ ಹಾರಾಟ!

Kalaburagi News: ಕಲಬುರಗಿಯ ಶೇಖ್ ರೋಜಾ ದರ್ಗಾದ ಆವರಣದಲ್ಲಿ ಈ ಘಟನೆ ನಡೆದಿದೆ. ಮುಸ್ಲಿಂ ಧ್ವಜದ ಕೆಳಗೆ ರಾಷ್ಟ್ರಧ್ವಜವನ್ನು ಇರಿಸಲಾಗಿದ್ದು, ಇದರ ಫೋಟೊ ಹಾಗೂ ವಿಡಿಯೊಗಳು ವೈರಲ್ ಆಗಿವೆ.

image-8b915510-b60b-43c0-b400-b17916c6a572.jpg
Profile Prabhakara R January 11, 2025
ಕಲಬುರಗಿ: ರಾಷ್ಟ್ರಧ್ವಜದ ಸ್ತಂಭದಲ್ಲಿ ಮುಸ್ಲಿಂ ಧ್ವಜ ಹಾರಿಸುವ ಮೂಲಕ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ರಾಷ್ಟ್ರಧ್ವಜ ಯಾವಾಗಲೂ ಉಳಿದ ಎಲ್ಲಾ ಧ್ವಜಗಳಿಗಿಂತ ಮೇಲಕ್ಕೆ ಇರಬೇಕು ಎನ್ನುವುದು ನಿಯಮ. ಆದರೆ, ಕಲಬುರಗಿಯಲ್ಲಿ ಧ್ವಜ ಸಂಹಿತೆ ಉಲ್ಲಂಘಿಸಿರುವ (National flag insulted) ಆರೋಪ ಕೇಳಿಬಂದಿದೆ. ಮುಸ್ಲಿಂ ಧ್ವಜದ ಕೆಳಗೆ ರಾಷ್ಟ್ರಧ್ವಜವನ್ನು ಇರಿಸಲಾಗಿದ್ದು, ಇದರ ಫೋಟೊ ಹಾಗೂ ವಿಡಿಯೊಗಳು ವೈರಲ್ ಆಗಿದ್ದರಿಂದ ಹಿಂದು ಸಂಘಟನೆಗಳು ಆಕ್ರೋಶ ಹೊರಹಾಕಿದೆ. ಘಟನೆಯನ್ನು ಖಂಡಿಸಿರುವ ಕೆಲ ಮುಸ್ಲಿಂ ಮುಖಂಡರೇ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಮತ್ತೊಂದೆಡೆ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವವರಿಗೆ ಶಿಕ್ಷೆ ನೀಡುವಂತೆ ಹಿಂದು ಜಾಗೃತಿ ಸೇನೆ ಆಗ್ರಹಿಸಿದೆ. ಕಲಬುರಗಿಯ ಶೇಖ್ ರೋಜಾ ದರ್ಗಾದ ಆವರಣದಲ್ಲಿ ಈ ಘಟನೆ ನಡೆದಿದೆ. ನೆನ್ನೆ ಶೇಖ್ ರೋಜಾದಲ್ಲಿ ಸಾಮೂಹಿಕ ವಿವಾಹ ನಡೆದಿತ್ತು. ಈ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎನ್ನಲಾಗಿದೆ. ರಾಷ್ಟ್ರಧ್ವಜದ ಸ್ತಂಭದಲ್ಲಿ ಮುಸ್ಲಿಂ ಧ್ವಜ ಹಾರಾಡಿದ್ದಲ್ಲದೇ, ಮುಸ್ಲಿಂ ಧ್ವಜದ ಕೆಳಗಡೆ ರಾಷ್ಟ್ರ ದ್ವಜ ಇಟ್ಟು ಅಪಮಾನ ಮಾಡಿದ ಆರೋಪ ಕೇಳಿ ಬಂದಿದೆ. ಈ ಘಟನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಕೆಲ ಮುಸ್ಲಿಂ ಮುಖಂಡರೂ ಖಂಡಿಸಿ ಚೌಕ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಇನ್ನು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದು ಜಾಗೃತಿ ಸೇನೆ ಆಗ್ರಹಿಸಿದೆ. ಈ ಸುದ್ದಿಯನ್ನೂ ಓದಿ | Assam Mine Accident: ಅಸ್ಸಾಂ ಗಣಿ ದುರಂತ- 4 ಕಾರ್ಮಿಕರ ಶವ ಪತ್ತೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ! ಗೌರಿ ಲಂಕೇಶ್‌ ಹತ್ಯೆ; ಜೈಲಿನಲ್ಲಿದ್ದ ಕೊನೆಯ ಆರೋಪಿಗೂ ಜಾಮೀನು ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ (Gauri Lankesh Murder‌ Case) ಪ್ರಕರಣದಲ್ಲಿ ಜೈಲಿನಲ್ಲಿದ್ದ ಕೊನೆಯ ಆರೋಪಿಗೂ ಜಾಮೀನು (Bail) ನೀಡಲಾಗಿದೆ. 10ನೇ ಆರೋಪಿ ಶರದ್ ಬಾವುಸಾಹೇಬ್ ಕಲಾಸ್ಕರ್‌ಗೆ ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ಬುಧವಾರ ಜಾಮೀನು ನೀಡಿದ್ದು, ಇದರೊಂದಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಎಲ್ಲಾ 17 ಆರೋಪಿಗಳಿಗೂ ಜಾಮೀನು ಸಿಕ್ಕಂತಾಗಿದೆ. ಮಹಾರಾಷ್ಟ್ರದ ಶರದ್‌ ಬಾಹುಸಾಹೇಬ್‌ ಕಾಲಸ್ಕರ್‌ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ ಪ್ರಧಾನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ ಮುರಳೀಧರ್‌ ಪೈ ಅವರು ಪುರಸ್ಕರಿಸಿದ್ದು, ಸಮಾನತೆಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಿದ್ದಾರೆ, ಸಂವಿಧಾನದ 21ರ ಅಡಿ ಬದುಕುವುದು ಮೂಲಭೂತ ಹಕ್ಕು. ಆರೋಪಿಗಳ ವಿರುದ್ಧ ವಿಚಾರಣೆ ಬಾಕಿಯಿರುವ ಸಂದರ್ಭದಲ್ಲಿ ಅವರ ವೈಯಕ್ತಿಕ ಹಕ್ಕು ಕಸಿದುಕೊಳ್ಳಲಾಗುವುದಿಲ್ಲ. ಅನಗತ್ಯ ವಿಳಂಬವು ಬದುಕುವ ಹಕ್ಕನ್ನು ಮೊಟಕುಗೊಳಿಸಿದಂತಾಗಲಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ. ಅರ್ಜಿದಾರ 2018ರ ಏಪ್ರಿಲ್‌ನಿಂದ ಬಂಧನದಲ್ಲಿದ್ದು, ಜಾಮೀನು ಮಂಜೂರು ಮಾಡಬಹುದಾಗಿದೆ ಎಂದು ನ್ಯಾಯಾಧೀಶರು ಹೇಳಿದರು. ವಿಚಾರಣೆ ವೇಳೆ ಅರ್ಜಿದಾರ ಆರೋಪಿಗೆ ಜಾಮೀನು ಮಂಜೂರು ಮಾಡಿದರೆ ಮತ್ತೆ ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗುತ್ತಾರೆ. ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಾರೆ ಎಂಬುದಾಗಿ ಪ್ರಾಸಿಕ್ಯೂಷನ್ ಪರ ವಕೀಲರು ಆತಂಕ ವ್ಯಕ್ತಪಡಿಸಿ ಜಾಮೀನು ನಿರಾಕರಿಸಬೇಕು ಎಂದು ಕೋರಿದ್ದರು. ಆದರೆ, ಪ್ರಕರಣದ ಸಾಕ್ಷಿಗಳ ಹೆಸರುಗಳನ್ನು ಆರೋಪಿಗಳಿಗೆ ತಿಳಿಯದಂತೆ ಮರೆ ಮಾಚಲಾಗಿದೆ. ಅಂತಹ ಸಾಕ್ಷಿಗಳನ್ನು ನಾಶ ಮಾಡುವ ಆತಂಕ ಇರುವುದಿಲ್ಲ. ಅಲ್ಲದೇ, ಈಗಾಗಲೇ 164 ಸಾಕ್ಷಿಗಳನ್ನು ಪರಿಶೀಲಿಸಿದೆ. ಇನ್ನುಳಿದ ಸಾಕ್ಷಿಗಳಲ್ಲಿ ಹೆಚ್ಚಿನದಾಗಿ ಪೊಲೀಸ್ ಅಧಿಕಾರಿಗಳು ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳಿದ್ದಾರೆ. ಹೀಗಾಗಿ ಪ್ರಾಸಿಕ್ಯೂಷನ್ ಆತಂಕ ಪರಿಗಣಿಸಲಾಗದು ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಅಲ್ಲದೆ, 2 ಲಕ್ಷ ರೂ.ಗಳ ಬಾಂಡ್ ಮತ್ತು ಎರಡು ಶ್ಯೂರಿಟಿಗಳನ್ನು ನೀಡಬೇಕು ಎಂದು ತಿಳಿಸಿ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದರು. ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5, 2017 ರ ರಾತ್ರಿ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅವರ ಮನೆಯ ಹೊರಗೆ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಪ್ರಕರಣ ಸಂಬಂಧ ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಅಮೂಲ್ ಕಾಳೆ, ರಾಜೇಶ್ ಡಿ ಬಂಗೇರಾ, ವಾಸುದೇವ್ ಸೂರ್ಯವಂಶಿ, ರುಷಿಕೇಶ್ ದೇವ್ಡೇಕರ್, ಪರಶುರಾಮ್ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ರಾಮಚಂದ್ರ ಬುಡ್ಡಿ ಮತ್ತು ಮನೋಹರ್ ದುಂಡೀಪ ಯಡವೆ ಅವರಿಗೆ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಅಲ್ಲದೆ, ಆರೋಪಿಗಳಾದ ಭರತ್ ಕುರಾನೆ, ಶ್ರೀಕಾಂತ್ ಪಂಗರ್ಕರ್, ಸುಜಿತ್ ಕುಮಾರ್ ಮತ್ತು ಸುಧನ್ವ ಅವರಿಗೆ ಸೆಪ್ಟೆಂಬರ್ 4ರಂದು, 11ನೇ ಆರೋಪಿ ಎನ್ ಮೋಹನ್ ನಾಯಕ್ ಅಲಿಯಾಸ್ ಸಂಪಜೆ ಎಂಬುವರಿಗೆ 2023ರ ಡಿಸೆಂಬರ್ 7ರಂದು, ಅಮಿತ್ ದಿಗ್ವೇಕರ್, ಕೆ.ಟಿ.ನವೀನ್ ಕುಮಾರ್ ಮತ್ತು ಸುರೇಶ್ ಹೆಚ್.ಎಲ್ ಅವರಿಗೆ ಜುಲೈ 16ರಂದು ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿತ್ತು. ಪ್ರಕರಣದಲ್ಲಿ ಒಟ್ಟು 18 ಮಂದಿ ಆರೋಪಿಗಳಿದ್ದು, 15ನೇ ಆರೋಪಿ ವಿಕಾಸ್ ಪಟೇಲ್ ಅಲಿಯಾಸ್ ದಾದಾ ಅಲಿಯಾಸ್ ನಿಹಾಲ್ ಎಂಬವರು ಪರಾರಿಯಾಗಿದ್ದಾರೆ. ಇದನ್ನೂ ಓದಿ: Prakash Raj: ʻಗೌರಿ ಹತ್ಯೆ ಮತ್ತು ಮಗನ ಅಗಲಿಕೆ ಬದುಕಿನ ಅತಿ ದೊಡ್ಡ ದುರಂತ…ʼ ಭಾರೀ ವೈರಲ್‌ ಆಗ್ತಿದೆ ಪ್ರಕಾಶ್‌ ರಾಜ್ ಈ ವಿಡಿಯೋ
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ