ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Lokayukta Raid: ಲಂಚ ಸ್ವೀಕರಿಸುತ್ತಿದ್ದ ಸಿಎಂ ಪದಕ ವಿಜೇತ ಅಧಿಕಾರಿ ಲೋಕಾಯುಕ್ತ ಬಲೆಗೆ

ಅಕ್ಕಿ ವ್ಯಾಪಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಕಾರ ನೀಡಲು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ವಿಶೇಷ ಶಾಖೆ (ಎಸ್‌ಬಿ) ಸಿಬ್ಬಂದಿ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಚ್ಚರಿ ಎಂದರೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಈ ಹಿಂದೆ ಗಂಭೀರ ಪ್ರಕರಣಗಳ ತನಿಖೆ ಹಾಗೂ ಆರೋಪಿಗಳ ಬಂಧನದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರ್ಪಡಿಸಿದ್ದರು.

ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ, ಎಸ್‌ಬಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಬಲೆಗೆ ಬಿದ್ದ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ, ಎಸ್‌ಬಿ ಸಿಬ್ಬಂದಿ -

Profile
Siddalinga Swamy Jun 18, 2026 10:51 PM

ಕಲಬುರಗಿ, ಜೂ.18: ಅಕ್ಕಿ ವ್ಯಾಪಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಸಹಕಾರ ನೀಡಲು ಉದ್ಯಮಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ವಿಶೇಷ ಶಾಖೆ (ಎಸ್‌ಬಿ) ಸಿಬ್ಬಂದಿ ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಯಡ್ರಾಮಿ ಪೊಲೀಸ್ ಠಾಣೆಯ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಹಾಗೂ ಎಸ್‌ಬಿ ಸಿಬ್ಬಂದಿ ಸಿದ್ದಣ್ಣ ಬಿರಾದಾರ ಲೋಕಾಯುಕ್ತ ದಾಳಿಗೆ (Lokayukta Raid) ಒಳಗಾದ ಅಧಿಕಾರಿಗಳಾಗಿದ್ದಾರೆ.

ಆನಂದ ಕುಸ್ತಿ ಎಂಬವವರ ಅಕ್ಕಿ ವ್ಯಾಪಾರಕ್ಕೆ ಸಂಬಂಧಿಸಿದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತರೆ ಸಹಕಾರ ನೀಡಲು ಆರೋಪಿಗಳು ಒಟ್ಟು 50 ಸಾವಿರ ರುಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ ಜೂನ್ 12ರಂದು ಮುಂಗಡವಾಗಿ 20,000 ರುಪಾಯಿ ಫೋನ್‌ಪೇ (PhonePe) ಮೂಲಕ ಸ್ವೀಕರಿಸಿದ್ದರು.

ಬಾಕಿ ಉಳಿದ ಹಣದಲ್ಲಿ ಗುರುವಾರ ಯಡ್ರಾಮಿ ಪೊಲೀಸ್ ಠಾಣೆಯ ಆವರಣದಲ್ಲೇ ದೂರುದಾರರಿಂದ ಮತ್ತೊಮ್ಮೆ 20,000 ರುಪಾಯಿ ಹಣವನ್ನು ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ಜಂಟಿ ದಾಳಿ ನಡೆಸಿ, ಇಬ್ಬರನ್ನೂ ರೆಡ್‌ಹ್ಯಾಂಡಾಗಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಪದಕ ವಿಜೇತನೇ ಈಗ ಭ್ರಷ್ಟಾಚಾರದ ಆರೋಪಿ!

ಲೋಕಾಯುಕ್ತ ಬಲೆಗೆ ಬಿದ್ದಿರುವ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಈ ಹಿಂದೆ ಗಂಭೀರ ಪ್ರಕರಣಗಳ ತನಿಖೆ ಹಾಗೂ ಆರೋಪಿಗಳ ಬಂಧನದಲ್ಲಿ ಅತ್ಯುತ್ತಮ ಕಾರ್ಯಕ್ಷಮತೆ ತೋರ್ಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ 2024-25ನೇ ಸಾಲಿನ ಪ್ರತಿಷ್ಠಿತ 'ಮುಖ್ಯಮಂತ್ರಿ ಚಿನ್ನದ ಪದಕ'ನೀಡಿ ಅಂದಿನ ಸಿಎಂ ಸಿದ್ದರಾಮಯ್ಯ ಗೌರವಿಸಿದ್ದರು. ಮುಖ್ಯಮಂತ್ರಿಯಿಂದ ಪದಕ ಪಡೆದ ದಕ್ಷ ಅಧಿಕಾರಿಯೇ ಈಗ ಲಂಚದ ಹಣದೊಂದಿಗೆ ಸಿಕ್ಕಿಬಿದ್ದಿರುವುದು ಇಲಾಖೆಯಲ್ಲಿ ತೀವ್ರ ಮುಖಭಂಗ ಉಂಟುಮಾಡಿದೆ.‌

ಮದುವೆಯಾದ ಕೇವಲ 48 ದಿನಗಳಲ್ಲೇ ನವವಧು ಆತ್ಮಹತ್ಯೆಗೆ ಶರಣು

ಲೋಕಾಯುಕ್ತ ಯಶಸ್ವಿ ಕಾರ್ಯಾಚರಣೆ

ಲೋಕಾಯುಕ್ತ ಎಸ್‌ಪಿ ಸಿದ್ಧರಾಜು ಮಾರ್ಗದರ್ಶನದಲ್ಲಿ, ಇನ್‌ಸ್ಪೆಕ್ಟರ್ ಅರುಣ್ ಮರಗುಂಡಿ ನೇತೃತ್ವದಲ್ಲಿ ಈ ಯಶಸ್ವಿ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಸಿಬ್ಬಂದಿ ಮಲ್ಲಿನಾಥ, ರಾನೋಜಿ, ಬಸವರಾಜ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು. ಠಾಣೆಯ ಆವರಣದಲ್ಲೇ ನಡೆದ ಈ ಲೋಕಾಯುಕ್ತ ಬೇಟೆ ಪೊಲೀಸ್ ಇಲಾಖೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ಹಾಗೂ ಚರ್ಚೆಗೆ ಗ್ರಾಸವಾಗಿದೆ.