Self Harming: ಕಲಬುರಗಿಯಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ
ನಂದಿಕೂರ ಗ್ರಾಮದಲ್ಲಿ ಮಲ್ಲಿನಾಥ ಬಿರಾದಾರ್ ಎಂಬವರ ಮನೆಯಲ್ಲಿ ಜ್ಯೋತಿ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರೂ ಬಿಜೆಪಿ ಕಾರ್ಯಕರ್ತರು ಎಂದು ತಿಳಿದುಬಂದಿದೆ. ಜ್ಯೋತಿ ಪಾಟೀಲ್ ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ -
ಕಲಬುರಗಿ, ಡಿ.20 : ಕಲಬುರಗಿಯಲ್ಲಿ (Kalaburagi) ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ (35) ಎಂಬವರು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ಕಲಬುರಗಿ ತಾಲೂಕಿನ ನಂದಿಕೂರ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ. ನಂದಿಕೂರ ಗ್ರಾಮದಲ್ಲಿ ಮಲ್ಲಿನಾಥ ಬಿರಾದಾರ್ ಎಂಬವರ ಮನೆಯಲ್ಲಿ ಜ್ಯೋತಿ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಿಜೆಪಿ ಕಾರ್ಯಕರ್ತನಾಗಿರುವ ನಂದಿಕೂರ್ ಗ್ರಾಮದ ಮಲ್ಲಿನಾಥ್ ಮನೆಯಲ್ಲಿ ಇಲ್ಲದ ವೇಳೆ ಜ್ಯೋತಿ ಪಾಟೀಲ್ ಬಾಗಿಲು ಬಡಿದು ಎಬ್ಬಿಸಿದ್ದಾರೆ. ಮಲ್ಲಿನಾಥ ಬಿರಾದರ್ ಪತ್ನಿ, ಮೂವರು ಮಕ್ಕಳು ಮನೆಯಲ್ಲಿ ವಾಸವಿದ್ದರು. ಬಾಗಿಲು ತೆರೆದ ತಕ್ಷಣ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡಿದ್ದಾರೆ. ಜ್ಯೋತಿ ಪಾಟೀಲ್ ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಫರಹತಾಬಾದ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬಿಜೆಪಿ ಕಾರ್ಯಕರ್ತೆಯಾಗಿದ್ದ ಜ್ಯೋತಿ ಪಾಟೀಲ್ ಅವರು ಮಲ್ಲಿನಾಥ್ ಬಿರಾದಾರ್ ಅವರ ಮನೆಯ ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? ಇಬ್ಬರ ನಡುವೆ ಯಾವುದಾದರೂ ಹಣಕಾಸಿನ ವಿಚಾರ ಅಥವಾ ವೈಯಕ್ತಿಕ ಭಿನ್ನಾಭಿಪ್ರಾಯಗಳಿದ್ದವೇ ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮರ್ಯಾದೆ ಕೊಡಲಿಲ್ಲ ಎಂದು ಹೆಂಡತಿಯ ಕೊಲ್ಲಲು ಗಂಡನ ಸುಪಾರಿ
ಮೈಸೂರು: ಕ್ಷುಲ್ಲಕ ಕಾರಣಕ್ಕೆ ಸಂಬಂಧದ ನಡುವೆ ಕೊಲೆಗಳು ನಡೆಯುವುದು ಹೆಚ್ಚುತ್ತಿದೆ. ಇದೂ ಅಂಥದೇ ಇನ್ನೊಂದು ಪ್ರಕರಣ. ಪತಿಯೊಬ್ಬ ಹೆಂಡತಿ ತನಗೆ ಮರ್ಯಾದೆ ಕೊಡುವುದಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಕೊಲ್ಲಲು (Murder Attempt) ಸುಪಾರಿ ಕೊಟ್ಟ ಘಟನೆ ಮೈಸೂರಿನ (Mysuru crime news) ಬಿಎಂಶ್ರೀ ನಗರದಲ್ಲಿ ನಡೆದಿದೆ. ಗಂಡನ ಈ ಕೃತ್ಯಕ್ಕೆ ಆತನ ಸ್ನೇಹಿತರೂ ಸಾಥ್ ನೀಡಿದ್ದು, ಮಾಹಿತಿ ತಿಳಿದ ಮೇಟಗಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಆನೆ ಗುಂಪಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ, 8 ಆನೆಗಳ ದಾರುಣ ಸಾವು, ರೈಲು ಸಂಚಾರ ವ್ಯತ್ಯಯ
ಪಾನಿಪುರಿ ವ್ಯಾಪಾರ ಮಾಡುತ್ತಿದ್ದ ಮಹೇಶ್, ಕ್ಷುಲ್ಲಕ ಕಾರಣಕ್ಕೆ ಪತ್ನಿ ನಾಗರತ್ನ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ. ಗಂಡನ ಸಂಪಾದನೆಯನ್ನು ಬಡ್ಡಿಗೆ ಬಿಡುತ್ತಿದ್ದ ಪತ್ನಿ, ಮಹೇಶ್ಗೆ ಹಣ ನೀಡುತ್ತಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಮಹೇಶ್, ತನಗೆ ಕಿಂಚಿತ್ತೂ ಮರ್ಯಾದೆ ಕೊಡದ ಪತ್ನಿ ಕೊಲೆಗೆ ಸ್ಕೆಚ್ ಹಾಕಿದ್ದ. ಮನೆಗೆ ನುಗ್ಗಿ ಗ್ಯಾಸ್ ಪೈಪ್ ಕತ್ತರಿಸಿ ಪೆಟ್ರೋಲ್ ಸುರಿದು ಹೆಂಡತಿಯನ್ನು ಮುಗಿಸಿ ಎಂದು ಪ್ಲಾನ್ ರೂಪಿಸಿದ್ದ.
ಆತನ ಪ್ಲಾನ್ ಪ್ರಕಾರವೇ ವಿರಾಜಪೇಟೆ ಮೂಲದ ಭಾಸ್ಕರ್ ಮತ್ತು ಅಭಿಷೇಕ್ ಎನ್ನುವವರಿಬ್ಬರೂ ನಾಗರತ್ನ ಒಬ್ಬರೇ ಇರುವ ಸಮಯ ನೋಡಿಕೊಂಡು ಮನೆಗೆ ಬಂದಿದ್ದರು. ಈ ವೇಳೆ ಮಹಿಳೆಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೆ ಯತ್ನಿಸಿದ್ದರು. ಹಲ್ಲೆಯ ನಂತರ ಗ್ಯಾಸ್ ಸಿಲಿಂಡರ್‌ಗಳನ್ನು ಸೋರಿಕೆ ಮಾಡಿದ ಆರೋಪಿಗಳು , ಘಟನೆಯನ್ನು ಅಗ್ನಿ ಅವಘಡ ಎಂದು ಬಿಂಬಿಸಲು ಯತ್ನಿಸಿದ್ದರು. ಈ ವೇಳೆ ಮನೆಯ ಹಲವು ವಸ್ತುಗಳು ಬೆಂಕಿಗಾಹುತಿಯಾಗಿದ್ದವು.