ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

street dog Attack: ಐದು ಮಕ್ಕಳಿಗೆ ಯದ್ವಾತದ್ವಾ ಕಚ್ಚಿ ಗಾಯಗೊಳಿಸಿದ ರಕ್ಕಸ ಬೀದಿ ನಾಯಿಗಳು

ಘಟನೆಯ ನಂತರ ದೇವಿನಗರ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಮಕ್ಕಳು ಹೊರಗೆ ಆಟವಾಡಲು ಹೆದರುತ್ತಿದ್ದಾರೆ. ಸ್ಥಳೀಯರು ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಹಲವಾರು ಬಾರಿ ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐದು ಮಕ್ಕಳಿಗೆ ಯದ್ವಾತದ್ವಾ ಕಚ್ಚಿ ಗಾಯಗೊಳಿಸಿದ ರಕ್ಕಸ ಬೀದಿ ನಾಯಿಗಳು

ಬೀದಿ ನಾಯಿ ದಾಳಿಯಿಂದ ಗಾಯಗೊಂಡ ಮಕ್ಕಳು -

ಹರೀಶ್‌ ಕೇರ
ಹರೀಶ್‌ ಕೇರ Feb 20, 2026 12:46 PM

ಕಲಬುರಗಿ, ಫೆ.20: ನಗರದಲ್ಲಿ (kalaburagi) ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದೇವಿನಗರ ಬಡಾವಣೆಯಲ್ಲಿ ಐದು ಮಕ್ಕಳ ಮೇಲೆ ನಾಯಿ ದಾಳಿ (street dog Attack) ನಡೆಸಿದ ಘಟನೆ ಆತಂಕಕ್ಕೆ ಕಾರಣವಾಗಿದೆ. ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ಬೀದಿ ನಾಯಿ, ಮಕ್ಕಳ ಕಣ್ಣು, ಕಿವಿ ಹಾಗೂ ಎದೆ ಭಾಗಗಳಿಗೆ ಕಚ್ಚಿದ ಪರಿಣಾಮ ಗಂಭೀರ ಗಾಯಗಳಾಗಿವೆ.

ಗಾಯಗೊಂಡ ಮಕ್ಕಳನ್ನು ತಕ್ಷಣವೇ ಜೀಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಘಟನೆಯ ನಂತರ ದೇವಿನಗರ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಮಕ್ಕಳು ಹೊರಗೆ ಆಟವಾಡಲು ಹೆದರುತ್ತಿದ್ದಾರೆ. ಸ್ಥಳೀಯರು ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಹಲವಾರು ಬಾರಿ ಪಾಲಿಕೆ ಅಧಿಕಾರಿಗಳಿಗೆ ದೂರು ನೀಡಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೀದಿ ನಾಯಿಗಳ ಹಾವಳಿ ತಕ್ಷಣ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು, ನಿರಂತರವಾಗಿ ನಾಯಿ ಹಿಡಿಯುವ ಕಾರ್ಯಾಚರಣೆ ನಡೆಸಬೇಕು ಹಾಗೂ ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ. ಈ ಸಂಬಂಧ ನಗರ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.

ಬೀದಿ ನಾಯಿಗಳ ಪರ ಹೇಳಿಕೆ: ಮೇನಕಾ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್