ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Kalaburagi shootout: ಕಲಬುರಗಿಯಲ್ಲಿ ಹಾಡಹಗಲೇ ಗುಂಡು ಹಾರಿಸಿ, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

Kalaburagi Murder: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ವ್ಯಕ್ತಿಯ ಭೀಕರ ಹತ್ಯೆ ನಡೆದಿದೆ. ಮಧ್ಯಾಹ್ನದ ವೇಳೆ ವ್ಯಕ್ತಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡು ಹಾರಿಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇದರಿಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮೃತ ಇರ್ಫಾನ್.

ಕಲಬುರಗಿ: ದುಷ್ಕರ್ಮಿಗಳು ಹಾಡಹಗಲೇ ಗುಂಡು ಹಾರಿಸಿ, ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ (Kalaburagi shootout) ಮಾಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಲರಾಮ್ ಚೌಕ ಬಳಿ ನಡೆದಿದೆ. ಭಾಯ್ ಭಾಯ್ ಗ್ರೂಪ್ ಮುಖಂಡ ಇರ್ಫಾನ್(42) ಕೊಲೆಯಾದವರು. ಹಳೇ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಡಿ ಪಟ್ಟಣದ ಬಲರಾಮ್ ಚೌಕ್ ಬಳಿಯ ಸೇವಾಲಾಲ್ ಮಂದಿರದ ಹತ್ತಿರ ಕೊಲೆ ನಡೆದಿದೆ. ಮಧ್ಯಾಹ್ನದ ವೇಳೆ ಇರ್ಫಾನ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು, ಮೊದಲು ಗುಂಡು ಹಾರಿಸಿದ್ದಾರೆ. ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಭೀಕರ ಹತ್ಯೆಯಿಂದ ವಾಡಿ ಪಟ್ಟಣದ ಜನತೆ ಬೆಚ್ಚಿಬಿದ್ದಿದ್ದಾರೆ. ಸದ್ಯ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಬೆಳಗಾವಿಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ

ಬೆಳಗಾವಿ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಗಾವಿಯ (Belagavi) ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರಿಲ್‌ಗೆ ವೇಲ್ ಬಿಗಿದುಕೊಂಡು ಗೃಹಿಣಿ ನೇಣಿಗೆ ಶರಣಾಗಿದ್ದಾರೆ.

Sirsi Doctor Murder Case: 2ನೇ ಮದುವೆಗೆ ರೆಡಿಯಾಗಿದ್ದ ಶಿರಸಿ ವೈದ್ಯನ ಹತ್ಯೆಗೆ ಕಾರಣ ಬಹಿರಂಗ; ಸ್ನೇಹಿತನೇ ಕೊಲೆಗಾರ!

ತವರು ಮನೆಯವರೊಂದಿಗೆ ಮಾತನಾಡಬಾರದೆಂದು ಮೊಬೈಲ್ ಫೋನ್ ಕಿತ್ತುಕೊಂಡಿದ್ದ ಎಂದು ಶ್ರೀನಿಧಿ ಕುಟುಂಬಸ್ಥರು ಆರೋಪಿಸಿದ್ದಾರೆ. ಗಂಡ, ಅತ್ತೆ ಹಾಗೂ ಇನ್ನಿಬ್ಬರೂ ಸಂಬಂಧಿಕರ ವಿರುದ್ಧ ಶ್ರೀನಿಧಿ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ. ಘಟನೆ ಸಂಬಂಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.