ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ತುಂಬು ಗರ್ಭಿಣಿ ಸಹೋದರಿಯನ್ನು ಜೀವಂತವಾಗಿ ಸುಟ್ಟ ಸಹೋದರರಿಗೆ ಮರಣ ದಂಡನೆ; ಹೈಕೋರ್ಟ್‌ನ ಕಲಬುರಗಿ ಪೀಠದಿಂದ ಮಹತ್ವದ ತೀರ್ಪು

High Court Of Karnataka Kalaburagi Bench: ಸಹೋದರಿಯನ್ನು ಮರ್ಯಾದೆ ಹತ್ಯೆಗೈದ ಇಬ್ಬರು ಸಹೋದರರಿಗೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ಮರಣ ದಂಡನೆ ಶಿಕ್ಷೆ ವಿಧಿಸಿದೆ. ಸಹೋದರರ ತಾಯಿ ಸೇರಿದಂತೆ ಕುಟುಂಬದ ಇನ್ನೂ ಐವರಿಗೆ ಜೀವಾವಧಿ ಶಿಕ್ಷೆ ಸಹ ವಿಧಿಸಲಾಗಿದೆ. ದ್ವಿ ಸದಸ್ಯ ಪೀಠದಿಂದ ಐತಿಹಾಸಿಕ ತೀರ್ಪು ಹೊರಬಿದ್ದಿದೆ.

ಕಲಬುರಗಿ: ಸಹೋದರಿಯನ್ನು ಮರ್ಯಾದೆ ಹತ್ಯೆಗೈದ ಇಬ್ಬರು ಸಹೋದರರಿಗೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ (High Court Of Karnataka Kalaburagi Bench) ಮರಣ ದಂಡನೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಜತೆಗೆ ಸಹೋದರರ ಕುಟುಂಬದ ಇನ್ನೂ ಐವರಿಗೆ ಜೀವಾವಧಿ ಶಿಕ್ಷೆ ಸಹ ವಿಧಿಸಲಾಗಿದೆ (Kalaburagi News). ದ್ವಿ ಸದಸ್ಯ ಪೀಠದಿಂದ ಐತಿಹಾಸಿಕ ತೀರ್ಪು ಹೊರಬಿದ್ದಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗುಂಡಕನಲ್ ಗ್ರಾಮದ ಇಬ್ರಾಹಿಂ ಸಾಬ್ (31) ಹಾಗೂ ಈತನ ಸಹೋದರ ಲಾರಿ ಚಾಲಕ ಅಕ್ಬರ್‌ (28) ಮರಣ ದಂಡನೆ ಶಿಕ್ಷೆಗೊಳಗಾದವರು ಎಂದು ಗುರುತಿಸಲಾಗಿದೆ.

ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾಳೆ ಎನ್ನುವ ಕಾರಣಕ್ಕೆ ಈ ನೀಚ ಸಹೋದರರು ತಂಗಿ ಬಾನು ಬೇಗಂ ಅವರಿಗೆ ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದರು. 2017ರಲ್ಲಿ ನಡೆದ ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿ ಇಡೀ ದೇಶದ ಗಮನ ಸೆಳೆದಿತ್ತು. ಇಬ್ರಾಹಿಂ ಸಾಬ್ ಮತ್ತು ಅಕ್ಬರ್‌ ಈ ಕ್ರೂರ ಕೃತ್ಯ ಎಸಗುವ ವೇಳೆ ಬಾನು ಬೇಗಂ ಒಂಬತ್ತು ತಿಂಗಳ ತುಂಬು ಗರ್ಭಿಣಿಯಾಗಿದ್ದರು. ಮಾನವೀಯತೆಯನ್ನೇ ಮರೆತು ಸಹೋದರರು ಕ್ರೂರ ಕೃತ್ಯ ಎಸಗಿದ್ದು ತಿಳಿದು ದೇಶವೇ ಬೆಚ್ಚಿ ಬಿದ್ದಿತ್ತು.

ಈ ಕೊಲೆ ಪ್ರಕರಣದ ಬಗ್ಗೆ ಬಸವನಬಾಗೇವಾಡಿ ಪೊಲೀಸರು ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ವಿಜಯಪುರ ಜಿಲ್ಲಾ ಕೋರ್ಟ್ ಈ ಇಬ್ಬರು ಸಹೋದರರಿಗೆ ಮರಣ ದಂಡನೆ ಹಾಗೂ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದೀಗ ಕಲಬುರಗಿ ಹೈಕೋರ್ಟ್ ದ್ವಿ ಸದಸ್ಯ ಪೀಠ ಈ ತೀರ್ಪುನ್ನು ಎತ್ತಿ ಹಿಡಿದಿದೆ. ಕೊಲೆಯಾದ ಬಾನು ಬೇಗಂನ ತಾಯಿಗೂ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Murder Case: ಹಳೇ ದ್ವೇಷಕ್ಕೆ ಒಂದೇ ಕುಟುಂಬದ ಆರು ಮಂದಿಯನ್ನು ಕೊಂದ ಪಾಪಿ; ಮರಣದಂಡನೆ ವಿಧಿಸಿದ ಕೋರ್ಟ್‌

ಬಾಲಕಿ ಮೇಲೆ ಅತ್ಯಾಚಾರ; ಕೊಲೆ ಆರೋಪಿಗೆ ಮರಣ ದಂಡನೆ

ಬೆಳಗಾವಿ: ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ವ್ಯಕ್ತಿಗೆ ಪೋಸ್ಕೊ (POCSO) ಕಾಯ್ದೆಯಡಿ ನ್ಯಾಯಾಲಯ ಕೆಲವು ದಿನಗಳ ಗಿಂದೆ ಮರಣ ದಂಡನೆ ವಿಧಿಸಿತ್ತು. 2019ರ ಅಕ್ಟೋಬರ್‌ನಲ್ಲಿ ಬೆಳಗಾವಿಯ ರಾಯ್‌ಬಾಗ್ ತಾಲೂಕಿನ ಭರತೇಶ್ ರಾವ್ ಸಾಬ್ ಮಿರ್ಜಿ (28) ಎಂಬಾತ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ. ಬಾಲಕಿ ಮನೆಗೆ ಹಿಂತಿರುಗುತ್ತಿದ್ದಾಗ ಅಪರಾಧಿಯು ಆಕೆಯನ್ನು ಅಪಹರಿಸಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ.

ಭರತೇಶ್ ರಾವ್ ಸಾಬ್ ಮಿರ್ಜಿ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಕೊಲೆ ಮಾಡಿದ್ದ. ಬಳಿಕ ಆಕೆಯ ಶವವನ್ನು ಕಲ್ಲಿನಲ್ಲಿ ಕಟ್ಟಿ ಬಾವಿಗೆ ಎಸೆದಿದ್ದಾನೆ ಎಂದು ಆರೋಪಿಸಲಾಗಿತ್ತು. ಬಾಲಕಿ ಮನೆಗೆ ಹಿಂತಿರುಗದ ಕಾರಣ ಆಕೆಯ ತಂದೆ ಕುಡುಚಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ತನಿಖೆಯ ಬಳಿಕ ಭರತೇಶ್ ರಾವ್ ಸಾಬ್ ಮಿರ್ಜಿಯನ್ನು ಬಂಧಿಸಲಾಗಿದ್ದು ಬಳಿಕ ನ್ಯಾಯಾಲಯವು ಅವನನ್ನು ತಪ್ಪಿತಸ್ಥನೆಂದು ಘೋಷಿಸಿತ್ತು. ನ್ಯಾಯಾಲಯವು ಆರೋಪಿಗೆ 45,000 ರೂ. ದಂಡವನ್ನು ಸಹ ವಿಧಿಸಿದೆ.