ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕಲಬುರಗಿ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ: ವಿಜ್ಞಾನ–ತಂತ್ರಜ್ಞಾನ, ಸಾಮಾಜಿಕ ಸೇವೆ, ಶಿಕ್ಷಣ ಕ್ಷೇತ್ರದ ಸಾಧಕರಿಗೆ ರಾಜ್ಯದ ಗೌರವ

Rajyotsava Award 2026: ಕಲಬುರಗಿ ಜಿಲ್ಲೆಯ ಮೂವರು ಸಾಧಕರು 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

ಕಲಬುರಗಿ, ಅ.30: 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು (Rajyotsava Award 2026) ರಾಜ್ಯ ಸರ್ಕಾರ ಘೋಷಿಸಿದ್ದು, ಕಲಬುರಗಿ ಜಿಲ್ಲೆಯ ಮೂವರು ಸಾಧಕರು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಗಣನೀಯ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

ಕಲಬುರಗಿ ಜಿಲ್ಲೆಯ ಪ್ರೊ. ರಾಜಾಸಾಬ್ ಎ.ಎಚ್. ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿಜ್ಞಾನ–ತಂತ್ರಜ್ಞಾನ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆಯನ್ನು ಗುರುತಿಸಿ ಸರ್ಕಾರ ಈ ಗೌರವ ನೀಡಿದೆ.

ಜೇವರ್ಗಿ ತಾಲೂಕಿನ ಸೊನ್ನ ಮಠದ ಡಾ. ಶ್ರೀ ಶಿವಾನಂದ ಮಹಾಸ್ವಾಮಿ ಅವರು ಸಾಮಾಜಿಕ ಸೇವೆ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಮಾಜಮುಖಿ ಸೇವೆ ಹಾಗೂ ಜನಪರ ಕಾರ್ಯಗಳನ್ನು ಗುರುತಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಆರ್ಥಿಕ ತಜ್ಞೆ ಸಂಗೀತಾ ಎನ್. ಕಟ್ಟೀಮನಿ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ ಹಾಗೂ ಸೇವೆಯನ್ನು ಪರಿಗಣಿಸಿ ಸರ್ಕಾರ ಗೌರವಿಸಿದೆ.‌

Rajyotsava Award 2026: ಬಿ.ವಿ.ಆಚಾರ್ಯ, ಕಾಗೋಡು ತಿಮ್ಮಪ್ಪ, ಜಿಮ್‌ ರವಿ ಸೇರಿ 71 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ರಾಜ್ಯೋತ್ಸವದ ಅಂಗವಾಗಿ ಸರ್ಕಾರ ಒಟ್ಟು 71 ಸಾಧಕರನ್ನು ವಿವಿಧ ಕ್ಷೇತ್ರಗಳಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಕಲಬುರಗಿ ಜಿಲ್ಲೆಯ ಮೂವರು ಸಾಧಕರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಜಿಲ್ಲೆಯ ಹೆಗ್ಗಳಿಕೆಗೆ ಪಾತ್ರವಾಗಿದೆ.