Karnataka Weather: ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
Karnataka Weather: ಬೆಂಗಳೂರು ಮತ್ತು ಸುತ್ತಲಿನ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27° C ಮತ್ತು 18° C ಇರುವ ಸಾಧ್ಯತೆ ಇದೆ.
Prabhakara R
December 25, 2024
ಬೆಂಗಳೂರು: ಡಿ.26ರಂದು ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದ್ದು, ಉಳಿದೆಡೆ ಒಣ ಹವಾಮಾನ ಇರಲಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather) ತಿಳಿಸಿದೆ.
ಇನ್ನು ಡಿ.27ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಾಮರಾಜನಗರ, ಕೊಡಗು, ದಾವಣಗೆರೆ, ಮೈಸೂರು, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆ ಹೊರತುಪಡಿಸಿ, ರಾಜ್ಯದಾದ್ಯಂತ ಒಣ ಹವಾಮಾನ ಇರಲಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆಯಿದೆ. ಡಿ.28, 29, 30 ಹಾಗೂ 31ರಂದು ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ
ಡಿ.27ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27° C ಮತ್ತು 18° C ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಕೆಲವು ಕಡೆಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು/ದಟ್ಟ ಮಂಜು ಇರುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 18° C ಇರುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Poonch Accident: ಜಮ್ಮುವಿನ ಪೂಂಛ್ ಬಳಿ ಅಪಘಾತ; ಕರ್ನಾಟಕದ ಮೂವರು ಯೋಧರ ಸಾವು