ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಲಾಡ್ಜ್‌ನಲ್ಲಿ ವ್ಯಕ್ತಿಯನ್ನು ಕೂಡಿ ಹಾಕಿ ಹಲ್ಲೆ: ವಿಡಿಯೋ ವೈರಲ್

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಆನಂದ ಲಾಡ್ಜ್‌ನಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಕಾಂಗ್ರೆಸ್ ಮುಖಂಡ ಶೇಖರ ಕಾಶಿ ಹಾಗೂ ಅವರ ಪುತ್ರ ಸಂತೋಷ್ ಕಾಶಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಕಾಂಗ್ರೆಸ್ ಮುಖಂಡ ಶೇಖರ ಕಾಶಿ, ಪುತ್ರ ಸಂತೋಷ್ ಕಾಶಿ ವಿರುದ್ಧ ಆರೋಪ

ವೈರಲ್ ವಿಡಿಯೋ ಹಳೆಯದ್ದು ಎಂದ ಪೊಲೀಸರು

ಕಲಬುರಗಿ: ವ್ಯಕ್ತಿಯೊಬ್ಬರನ್ನು ಲಾಡ್ಜ್‌ನ ಕೊಠಡಿಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಲಾಗಿದೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚಿತ್ತಾಪುರದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಆನಂದ ಲಾಡ್ಜ್‌ನಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಕಾಂಗ್ರೆಸ್ ಮುಖಂಡ ಶೇಖರ ಕಾಶಿ ಹಾಗೂ ಅವರ ಪುತ್ರ ಸಂತೋಷ್ ಕಾಶಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇದನ್ನೂ ಓದಿ: Kalaburagi News: ಮಕ್ಕಳಾಗದ ವಿಚಾರಕ್ಕೆ ಗಲಾಟೆ; ಹೆಂಡತಿಯ ಕತ್ತು ಹಿಸುಕಿ ಕೊಲೆಗೈದ ಗಂಡ!

ವಿಡಿಯೋದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಕಂಡುಬಂದಿವೆ. ಆದರೆ, ಹಲ್ಲೆಗೊಳಗಾದ ವ್ಯಕ್ತಿ ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಅಲ್ಲದೆ, ಘಟನೆಗೆ ಸಂಬಂಧಿಸಿ ದಂತೆ ಹಲ್ಲೆಗೊಳಗಾದ ವ್ಯಕ್ತಿ ಯಾವುದೇ ದೂರು ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Halle

ವೈರಲ್ ಆಗಿರುವ ವಿಡಿಯೋ ಹಳೆಯದ್ದಾಗಿದ್ದು, ಸದ್ಯ ಹರಿದಾಡುತ್ತಿರುವ ವಿಡಿಯೋ ಆಧರಿಸಿ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಘಟನೆ ಚಿತ್ತಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.

ವಿಡಿಯೋ ವೈರಲ್ ಹಿನ್ನೆಲೆ ಪ್ರಕರಣ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಹಲ್ಲೆಗೊಳಗಾದ ವ್ಯಕ್ತಿ ಯಾರು ಹಾಗೂ ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ.