Mass Murder: ಕೌಟುಂಬಿಕ ಕಲಹದಿಂದ ಸಾಮೂಹಿಕ ಕಗ್ಗೊಲೆ; ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ಜೆಸ್ಕಾಂ ಅಧಿಕಾರಿ ಆತ್ಮಹತ್ಯೆ
ಜೆಸ್ಕಾಂ ಅಧಿಕಾರಿ ಸಂತೋಷ್ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಸಂತೋಷ್ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾನೆ.

ಸಾಂದರ್ಭಿಕ ಚಿತ್ರ

ಕಲಬುರಗಿ: ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು (Mass Murder case) ವ್ಯಕ್ತಿ ಆತ್ಮಹತ್ಯೆ (Self harming) ಮಾಡಿಕೊಂಡ ಘಟನೆ ಕಲಬುರಗಿ (Kalaburagi news) ನಗರದ ಹಳೆ ಜೇವರ್ಗಿ ರಸ್ತೆಯ ಗಾಬರಿ ಲೇಔಟ್ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ. ಪತ್ನಿ ಶ್ರುತಿ (35) ಮಕ್ಕಳಾದ ಮನೀಶ್ (9), ಮೂರು ತಿಂಗಳ ಮಗು ಅನೀಶ್‌ನನ್ನು ಕೊಲೆ ಮಾಡಿ ಸಂತೋಷ್ (45) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೆಸ್ಕಾಂನಲ್ಲಿ ಹಿರಿಯ ಸಹಾಯಕ ಲೆಕ್ಕಾಧಿಕಾರಿಯಾಗಿ ಸಂತೋಷ್ ಕಾರ್ಯನಿರ್ವಹಿಸುತ್ತಿದ್ದ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ, ಮಕ್ಕಳನ್ನು ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಸಂತೋಷ್ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಸಂತೋಷ್ ಡೆತ್ ನೋಟ್ ಕೂಡ ಬರೆದಿಟ್ಟಿದ್ದಾರೆ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇತ್ತೀಚೆಗೆ ಇಂಥ ಘಟನೆಗಳು ಮರುಕಳಿಸುತ್ತಿವೆ. ಚಿಕ್ಕಮಗಳೂರಿನಲ್ಲಿ ಕ್ಯಾಬ್ ಡ್ರೈವರ್ ಆಗಿದ್ದ ವ್ಯಕ್ತಿ ಹೆಂಡತಿ ದೂರವಾದ ಸಿಟ್ಟಿನಿಂದ ಅತ್ತೆ, ಮಗಳು, ನಾದಿನಿಯನ್ನು ಗುಂಡು ಹಾರಿಸಿ ಕೊಂದು ತಾನೂ ಅತ್ಮಹತ್ಯೆ ಮಾಡಿಕೊಂಡಿದ್ದ. ಕೊಡಗು ಜಿಲ್ಲೆಯಲ್ಲಿ ಹೆಂಡತಿಗೆ ಅಕ್ರಮ ಸಂಬಂಧ ಇದೆ ಎಂದು ಶಂಕಿಸಿ ನಾಲ್ವರನ್ನು ಕೊಚ್ಚಿ ಕೊಂದು ಪತಿಯೊಬ್ಬ ಪರಾರಿಯಾಗಿದ್ದ ಘಟನೆ ನಡೆದಿತ್ತು. ಬಳಿಕ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
ಇದನ್ನೂ ಓದಿ: Patiala Horror: ಐಫೋನ್‌ಗಾಗಿ ಅಪ್ರಾಪ್ತನನ್ನು ಕೊಲೆ ಮಾಡಿದ ಸ್ನೇಹಿತ; ಪಂಜಾಬ್‌ನಲ್ಲೊಂದು ದೇಶವೇ ಬೆಚ್ಚಿಬೀಳುವ ಘಟನೆ