ಕಲಬುರಗಿ: ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅವರ ತಾಯಿ ಭೂದೇವಿ ಗಂಗಾಧರ್ ನಮೋಶಿ (94) ಅವರು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಶನಿವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಮೃತರ ಅಂತ್ಯಕ್ರಿಯೆ ಅ.4ರಂದು (ಇಂದು) ಸಂಜೆ 4 ಗಂಟೆಗೆ ಕಲಬುರಗಿ ನಗರದ ಶಹಾಬಾದ್ ರಸ್ತೆಯಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಇದನ್ನೂ ಓದಿ: MLC Shashil G Namoshi: ಒಡ ಹುಟ್ಟಿದ ಸಹೋದರನಿಗೇ ವಂಚಿಸಿದ್ರಾ ಬಿಜೆಪಿ ಎಂಎಲ್‌ಸಿ ಶಶೀಲ್ ನಮೋಶಿ?
ಅಗಲಿದ ಭೂದೇವಿ ಗಂಗಾಧರ್ ನಮೋಶಿ ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.