ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Srikanth Shetty Karkala entry banned: ಕಲಬುರಗಿ ಕೋಟೆ ಎದುರಿನ ಗಣೇಶೋತ್ಸವದಲ್ಲಿ ಭಾಗವಹಿಸದಂತೆ ಅ.4ರವರೆಗೆ ಆದೇಶ

ಹಿಂದೂ ಮಹಾಗಣಪತಿ ಸಮಿತಿ ವತಿಯಿಂದ ನಗರದ ಕೋಟೆ ಎದುರು ಸೆ.14ರಿಂದ ಅ.4ರವರೆಗೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಅ.1ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಶ್ರೀಕಾಂತ್ ಶೆಟ್ಟಿ ಅವರನ್ನು ಆಹ್ವಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಚೌಕ್ ಪೊಲೀಸ್ ಠಾಣೆ ಸಲ್ಲಿಸಿದ ವರದಿ ಹಾಗೂ ಎಸಿಪಿ ನಾರ್ತ್ ಉಪವಿಭಾಗದ ವರದಿಯನ್ನು ಆಧರಿಸಿ ನಿರ್ಬಂಧದ ಕ್ರಮ ಕೈಗೊಳ್ಳಲಾಗಿದೆ.

ಕಲಬುರಗಿ: ನಗರದ ಕೋಟೆ ಎದುರು ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಆಗಮಿಸಲಿದ್ದ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಕಾರ್ಯಾ ಚರಣೆ ಸದಸ್ಯ ಶ್ರೀಕಾಂತ್ ಶೆಟ್ಟಿ ಕಾರ್ಕಳ(Srikanth Shetty Karkala) ಅವರಿಗೆ ಕಲಬುರಗಿ ನಗರ ಪ್ರವೇಶ ನಿರ್ಬಂಧಿಸಲಾಗಿದೆ.

ಕಲಬುರಗಿ ನಗರ ಉಪ ಪೊಲೀಸ್ ಆಯುಕ್ತರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಗಳು ಅ.1ರಂದು ಆದೇಶ ಹೊರಡಿಸಿದ್ದು, ಅ.1ರಿಂದ ಅ.4ರವರೆಗೆ ಶ್ರೀಕಾಂತ್ ಶೆಟ್ಟಿ ಅವರು ನಗರ ಪ್ರವೇಶಿಸದಂತೆ ಸೂಚಿಸಿದ್ದಾರೆ.

ಇದನ್ನೂ ಓದಿ: Kalaburagi News: ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಜಪ್ತಿ: ಗೃಹ ಸಚಿವರ ತವರಿನಲ್ಲಿಯೇ ಪೊಲೀಸರಿಂದ ಕಳ್ಳ ಪೊಲೀಸ್ ಆಟ?

ಹಿಂದೂ ಮಹಾಗಣಪತಿ ಸಮಿತಿ ವತಿಯಿಂದ ನಗರದ ಕೋಟೆ ಎದುರು ಸೆ.14ರಿಂದ ಅ.4ರವರೆಗೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಅ.1ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಶ್ರೀಕಾಂತ್ ಶೆಟ್ಟಿ ಅವರನ್ನು ಆಹ್ವಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಚೌಕ್ ಪೊಲೀಸ್ ಠಾಣೆ ಸಲ್ಲಿಸಿದ ವರದಿ ಹಾಗೂ ಎಸಿಪಿ ನಾರ್ತ್ ಉಪವಿಭಾಗದ ವರದಿಯನ್ನು ಆಧರಿಸಿ ನಿರ್ಬಂಧದ ಕ್ರಮ ಕೈಗೊಳ್ಳಲಾಗಿದೆ.

Karkala 2

ಶ್ರೀಕಾಂತ್ ಶೆಟ್ಟಿ ಅವರು ಈ ಹಿಂದೆ ವಿವಿಧೆಡೆ ಕಾರ್ಯಕ್ರಮಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದು, ಇದರಿಂದ ಕಾನೂನು ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ ಎಂದು ಪೊಲೀಸ್ ವರದಿಯಲ್ಲಿ ತಿಳಿಸಲಾಗಿದೆ.

ಅವರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ವಿವರಗಳನ್ನೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಬಂಧ ವಿಧಿಸಲಾಗಿದೆ.