Karnataka Weather: ಆರೆಂಜ್ ಅಲರ್ಟ್; ಇಂದು ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಸಾಧ್ಯತೆ!
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಪ್ರಮುಖವಾಗಿ ಶುಭ್ರ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಡಿ.21: ತೀವ್ರ ಶೀತ ಗಾಳಿ (Cold Wave Alert) ಹಿನ್ನೆಲೆಯಲ್ಲಿ ಇಂದು (ಡಿ.21) ಹವಾಮಾನ ಇಲಾಖೆಯು ರಾಜ್ಯದ (Karnataka Weather) 7 ಜಿಲ್ಲೆಗಳಿಗೆ ಆರೆಂಜ್ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಇದೆ. ಹಾಗೆಯೇ ಧಾರವಾಡ, ಕೊಪ್ಪಳ, ಹಾವೇರಿ, ಗದಗ, ವಿಜಯನಗರ, ಬಳ್ಳಾರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ತುಮಕೂರು, ಹಾಸನ, ಕೋಲಾರ, ಚಿಕ್ಕಮಗಳೂರು ಸೇರಿ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಶೀತ ಗಾಳಿ ಬೀಸಲಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಪ್ರಮುಖವಾಗಿ ಶುಭ್ರ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 14°C ಇರುವ ಸಾಧ್ಯತೆ ಇದೆ.
ಇನ್ನು ಡಿ.22ರಂದು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಶೀತ ಮಾರುತದ ಪರಿಸ್ಥಿತಿಗಳು ಉಂಟಾಗುವ ಸಾಧ್ಯತೆಯಿದೆ.
ಒಳನಾಡಿನಲ್ಲಿ ಉಷ್ಣಾಂಶದಲ್ಲಿ 5-7 ಡಿಗ್ರಿ ಸೆ. ಇಳಿಕೆ
ಒಳನಾಡಿನ ಹಲವೆಡೆ ಶುಕ್ರವಾರ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5-7°C ರಷ್ಟು ಕಡಿಮೆಯಾಗಿತ್ತು. ದಕ್ಷಿಣ ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ದಟ್ಟ ಮಂಜು ಕವಿದಿತ್ತು.
Health Tips: ಚಳಿಗಾಲದಲ್ಲಿ ಶ್ವಾಸಕೋಶದ ಆರೋಗ್ಯ ಕಾಪಾಡಿಕೊಳ್ಳಲು ಈ ಹಣ್ಣುಗಳು ಬೆಸ್ಟ್
ಮುಂದಿನ 2 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ, ನಂತರದ ದಿನಗಳಲ್ಲಿ ಕ್ರಮೇಣ 2-3°C ಏರಿಕೆಯಾಗಲಿದೆ. ಮುಂದಿನ 5 ದಿನಗಳವರೆಗೆ ಕರಾವಳಿ ಕರ್ನಾಟಕದ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.