ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chief Jail Superintendent Suspend: ‘ಕೈದಿಗಳ ಬಿಂದಾಸ್ ಲೈಫ್’ ವಿಡಿಯೊ ಪ್ರಕರಣ: ಕರ್ತವ್ಯಲೋಪ ಮೇಲ್ನೋಟಕ್ಕೆ ಸಾಬೀತು: ಜೈಲು ಮುಖ್ಯ ಅಧೀಕ್ಷಕಿ ಅನಿತಾ ಆರ್. ಅಮಾನತು

ಅಮಾನತು ಅವಧಿಯಲ್ಲಿ ಅನಿತಾ ಆರ್. ಅವರ ಕೇಂದ್ರ ಸ್ಥಾನವನ್ನು ವಿಜಯಪುರದ ನೂತನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಅವರು ಮೈಸೂರಿನ ಕಾರಾಗೃಹ ಸಿಬ್ಬಂದಿ ತರಬೇತಿ ಸಂಸ್ಥೆ ಯಲ್ಲಿ ಮುಖ್ಯ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸರ್ಕಾರದ ಮುಂದಿನ ಆದೇಶದವರೆಗೆ ಆ ಕರ್ತವ್ಯದಿಂದ ಬಿಡುಗಡೆಗೊಂಡು ವಿಜಯಪುರದ ನೂತನ ಕೇಂದ್ರ ಕಾರಾಗೃಹ ದಲ್ಲಿ ಅಮಾನತು ಅವಧಿಯ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಜೈಲು ಮುಖ್ಯ ಅಧೀಕ್ಷಕಿ ಅನಿತಾ ಆರ್. ಅಮಾನತು

-

Profile
Ashok Nayak Sep 6, 2026 11:21 AM

ಕಲಬುರಗಿ: ಕೇಂದ್ರ ಕಾರಾಗೃಹದ ಕೈದಿಗಳ ಚಟುವಟಿಕೆಗಳಿಗೆ ಸಂಬಂಧಿಸಿದ ‘ಕೈದಿಗಳ ಬಿಂದಾಸ್ ಲೈಫ್’ ಎಂಬ ಶೀರ್ಷಿಕೆಯ ವಿಡಿಯೊಗಳು ವಿವಿಧ ದೃಶ್ಯ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಆರೋಪ ಎದುರಿಸುತ್ತಿರುವ ಕಲಬುರಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಡಾ.ಅನಿತಾ ಆರ್. ಅವರನ್ನು ಅಮಾನತು ಗೊಳಿಸಲಾಗಿದೆ.

ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಸರ್ಕಾರದ ಸೆ.3ರ ಆದೇಶದ ಅನ್ವಯ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಆದೇಶ ಹೊರಡಿಸಿ ದ್ದಾರೆ.

ಇದನ್ನೂ ಓದಿ: Kalaburagi Breaking: ಕಪನೂರ ಕೈಗಾರಿಕಾ ಪ್ರದೇಶದಲ್ಲಿ ದಾಲ್‌ಮಿಲ್‌ನಲ್ಲಿ ಪರವಾನಗಿ ಇಲ್ಲದೆ ಸಂಗ್ರಹ: ಅಕ್ರಮ ಯೂರಿಯಾ ದಂಧೆ ಪತ್ತೆ; 1,250 ಚೀಲ ವಶ

ಅಮಾನತು ಅವಧಿಯಲ್ಲಿ ಅನಿತಾ ಆರ್. ಅವರ ಕೇಂದ್ರ ಸ್ಥಾನವನ್ನು ವಿಜಯಪುರದ ನೂತನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಸದ್ಯ ಅವರು ಮೈಸೂರಿನ ಕಾರಾಗೃಹ ಸಿಬ್ಬಂದಿ ತರಬೇತಿ ಸಂಸ್ಥೆಯಲ್ಲಿ ಮುಖ್ಯ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸರ್ಕಾರದ ಮುಂದಿನ ಆದೇಶದವರೆಗೆ ಆ ಕರ್ತವ್ಯದಿಂದ ಬಿಡುಗಡೆಗೊಂಡು ವಿಜಯಪುರದ ನೂತನ ಕೇಂದ್ರ ಕಾರಾಗೃಹ ದಲ್ಲಿ ಅಮಾನತು ಅವಧಿಯ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಅಮಾನತು ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ತೊರೆಯಬಾರದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಕರ್ನಾಟಕ ನಾಗರಿಕ ಸೇವಾ ನಿಯಮ ಗಳ ನಿಯಮ 98ರ ಅನ್ವಯ ಜೀವನಾಧಾರ ಭತ್ಯೆ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿಜಯಪುರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೂ ಸೂಚಿಸಲಾಗಿದೆ.

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳ ಚಟುವಟಿಕೆಗಳಿಗೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಹರಿದಾಡಿದ ಬಳಿಕ ಪ್ರಕರಣ ತೀವ್ರ ಚರ್ಚೆಗೆ ಗ್ರಾಸ ವಾಗಿತ್ತು. ಇದೀಗ ಮುಖ್ಯ ಅಧೀಕ್ಷಕರ ವಿರುದ್ಧ ಅಮಾನತು ಕ್ರಮ ಜರುಗಿರುವುದರಿಂದ ಪ್ರಕರಣ ಮತ್ತಷ್ಟು ಮಹತ್ವ ಪಡೆದಿದ್ದು, ಇಲಾಖಾ ವಿಚಾರಣೆ ಮುಂದುವರಿಯಲಿದೆ.