ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kalaburagi Central Jail: ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಎಣ್ಣೆ ಪಾರ್ಟಿ, ಇಸ್ಪೀಟ್‌ ಆಟ; ಕೈದಿಗಳ ಹೈಫೈ ಲೈಫ್‌ನ ವಿಡಿಯೊ ವೈರಲ್!

ವೈರಲ್ ವಿಡಿಯೊದಲ್ಲಿ ಕಲಬುರಗಿ ಜೈಲಿನ ಕೈದಿಗಳು ಬ್ರ್ಯಾಂಡೆಡ್ ಎಣ್ಣೆ ಸೇವಿಸುತ್ತಾ, ಸಿಗರೇಟ್ ಸೇದುತ್ತಾ, ಗುಂಪು ಗುಂಪಾಗಿ ಇಸ್ಪೀಟ್‌ ಆಟದಲ್ಲಿ ತೊಡಗಿರುವುದು ಸ್ಪಷ್ಟವಾಗಿ ಕಾಣುತ್ತದೆ. ಬಿಗಿ ಭದ್ರತೆ ಇರುವ ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಸಪ್ಲೈ ಆಗುತ್ತಿವೆ ಎಂಬ ಪ್ರಶ್ನೆ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ.

ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಕೈದಿಗಳ ಹೈಫೈ ಲೈಫ್; ವಿಡಿಯೊ ವೈರಲ್!

ಕಲಬುರಗಿ ಜೈಲಿನಲ್ಲಿ ಕೈದಿಗಳು ಮದ್ಯ, ಸಿಗರೇಟ್‌ ಸೇವಿಸುತ್ತಾ ಇಸ್ಪೀಟ್‌ ಆಡುತ್ತಿರುವುದು. -

Prabhakara R
Prabhakara R Dec 31, 2025 2:24 PM

ಕಲಬುರಗಿ, ಡಿ.31: ನಗರದ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅಕ್ರಮಗಳು ಒಂದೊಂದಾಗಿ ಬಯಲಾಗುತ್ತಿದ್ದು, ಇದೀಗ ಕೈದಿಗಳ ಹೈಫೈ ಜೀವನ ಶೈಲಿಯ ಮತ್ತೊಂದು ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಜೈಲು ಎನ್ನುವ ಗಂಭೀರ ಸ್ಥಳ ಕ್ಲಬ್‌ಗಳನ್ನು ಮೀರಿಸುವಂತೆ ಬಿಂದಾಸ್ ಲೈಫ್ ನಡೆಸುತ್ತಿರುವ ದೃಶ್ಯಗಳು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ವೈರಲ್ ವಿಡಿಯೊದಲ್ಲಿ ಕೈದಿಗಳು ಬ್ರ್ಯಾಂಡೆಡ್ ಎಣ್ಣೆ ಸೇವಿಸುತ್ತಾ, ಸಿಗರೇಟ್ ಸೇದುತ್ತಾ, ಗುಂಪು ಗುಂಪಾಗಿ ಇಸ್ಪೀಟ್‌ ಆಟದಲ್ಲಿ ತೊಡಗಿರುವುದು ಸ್ಪಷ್ಟವಾಗಿ ಕಾಣುತ್ತದೆ. ಬಿಗಿ ಭದ್ರತೆ ಇರುವ ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಸಪ್ಲೈ ಆಗುತ್ತಿವೆ ಎಂಬ ಪ್ರಶ್ನೆ ಇದೀಗ ಗಂಭೀರ ಚರ್ಚೆಗೆ ಕಾರಣವಾಗಿದೆ.

ಇಷ್ಟೊಂದು ಅಕ್ರಮಗಳು ಜೈಲಿನೊಳಗೆ ನಡೆಯುತ್ತಿದ್ದರೂ ಜೈಲ್ ಚೀಫ್ ಸೂಪರಿಂಟೆಂಡೆಂಟ್ ಡಾ. ಅನಿತಾ ಅವರು ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಮಂಗಳವಾರವಷ್ಟೇ ಆರ್.ಡಿ. ಪಾಟೀಲ್ ವಿಡಿಯೊ ವೈರಲ್ ಆಗಿದ್ದು, ಜೈಲ್ ಅಧಿಕ್ಷಕಿ ಡಾ. ಅನಿತಾ ವಿರುದ್ಧ 10 ಲಕ್ಷ ಲಂಚ ಆರೋಪವನ್ನು ಆತ ಮಾಡಿದ್ದ. ಅದರ ಬೆನ್ನಲ್ಲೇ ಬುಧವಾರ ಕೈದಿಗಳ ಹೈಫೈ ಲೈಫ್‌ಗೆ ಸಂಬಂಧಿಸಿದ ಮತ್ತೊಂದು ವಿಡಿಯೋ ವೈರಲ್ ಆಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

ಜೈಲಿನ ಭದ್ರತಾ ವ್ಯವಸ್ಥೆ, ಅಧಿಕಾರಿಗಳ ಪಾತ್ರ ಹಾಗೂ ನಿಷೇಧಿತ ವಸ್ತುಗಳ ಸರಬರಾಜು ಕುರಿತು ತಕ್ಷಣವೇ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಸಾರ್ವಜನಿಕ ವಲಯದಲ್ಲಿ ಒತ್ತಾಯ ಕೇಳಿಬರುತ್ತಿದೆ. ಈ ವಿಚಾರದಲ್ಲಿ ಜೈಲು ಇಲಾಖೆ ಹಾಗೂ ಜಿಲ್ಲಾ ಆಡಳಿತ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕಲಬುರಗಿ ಜೈಲಿನಲ್ಲಿ ಆರ್.ಡಿ. ಪಾಟೀಲ್ ಕಿರಿಕ್; ಸ್ಥಳಾಂತರಕ್ಕೆ ಜೈಲಾಧಿಕಾರಿ ಪತ್ರ

ಗೃಹ ಸಚಿವ ಪರಮೇಶ್ವರ್​​ ಪ್ರತಿಕ್ರಿಯೆ

ಕಲಬುರಗಿ ಜೈಲಿನಲ್ಲಿ ಎಣ್ಣೆ ಪಾರ್ಟಿ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಗೃಹ ಸಚಿವ ಪರಮೇಶ್ವರ್​ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಹಳೆಯ ವಿಡಿಯೊನಾ ಎಂದು ಚೆಕ್​​ ಮಾಡುತ್ತಿದ್ದಾರೆ. ಕೆಲವರು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಹೀಗೆ ಮಾಡುತ್ತಿದ್ದಾರೆ ಎಂದು ಪರಿಶೀಲನೆ ನಡೆಸಲಾಗುತ್ತಿದೆ. ಅದು ನಿನ್ನೆ, ಮೊನ್ನೆ ವಿಡಿಯೊ ಆಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.