ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಕಲಬುರಗಿಯಲ್ಲಿ ಘೋರ ಅಪಘಾತ, ಲಾರಿಗೆ ಮ್ಯಾಕ್ಸಿಕ್ಯಾಬ್‌ ಡಿಕ್ಕಿಯಾಗಿ ಐವರು ಸಾವು

ಮ್ಯಾಕ್ಸಿ ಕ್ಯಾಬ್‌ನಲ್ಲಿ 31 ಮಂದಿ ಪ್ರಯಾಣಿಸುತ್ತಿದ್ದರು, ವೇಗವಾಗಿ ಬರುತ್ತಿದ್ದ ಮ್ಯಾಕ್ಸಿ ಕ್ಯಾಬ್ ದಾರಿಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. 11 ಮಂದಿ ತೀವ್ರ ಗಾಯಗೊಂಡಿದ್ದಾರೆ.

ಕಲಬುರಗಿಯಲ್ಲಿ ಘೋರ ಅಪಘಾತ, ಲಾರಿಗೆ ಮ್ಯಾಕ್ಸಿಕ್ಯಾಬ್‌ ಡಿಕ್ಕಿ, ಐವರು ಸಾವು

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Apr 5, 2025 9:27 AM

ಕಲಬುರಗಿ: ಇಂದು ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಮತ್ತೊಂದು ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ (Death) ಸಾವನ್ನಪ್ಪಿದ್ದಾರೆ. ಕಲಬುರಗಿ (Kalaburagi news) ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ ಲಾರಿಗೆ ಮ್ಯಾಕ್ಸಿಕ್ಯಾಬ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹೂಬೂಬ್ ಎಂದು ಗುರುತಿಸಲಾಗಿದ್ದು, ಮೃತರು ಬಾಗಲಕೋಟೆ ಮೂಲದವರು ಎಂದು ತಿಳಿದುಬಂದಿದೆ.

ಮ್ಯಾಕ್ಸಿಕ್ಯಾಬ್ ನಲ್ಲಿ ಸುಮಾರು 31 ಮಂದಿ ಪ್ರಯಾಣಿಸುತ್ತಿದ್ದರು, ವೇಗವಾಗಿ ಬರುತ್ತಿದ್ದ ಮ್ಯಾಕ್ಸಿಕ್ಯಾಬ್ ದಾರಿಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಭೀಕರ ಅಪಘಾತದಲ್ಲಿ 11 ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ನೆಲೋಗಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಪ್ರವಾಸಕ್ಕೆಂದು ತೆರಳಿದ ಮೂವರು ನೀರುಪಾಲು

ಚಿಕ್ಕಬಳ್ಳಾಪುರ: ರಂಜಾನ್ ಹಬ್ಬದ (Ramadan Festival) ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ (Drowned) ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ (Srinivasanagara lake) ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ (35), ಬಶೀರ್ (35) ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ (45) ಎಂದು ಗುರುತಿಸಲಾಗಿದೆ. ನೀರಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಮಗುವನ್ನು ರಕ್ಷಿಸಲಾಗಿದ್ದು ನೀರಿನಲ್ಲಿ ಮುಳುಗಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಫರೀನಾ ಬೇಗಂ ಮತ್ತು ಸಂಬಂಧಿಕರು ರಜೆಯ ಕಾರಣ ಮೊದಲಿಗೆ ನಂದಿಬೆಟ್ಟಕ್ಕೆ ತೆರಳಲು ಮುಂದಾಗಿದ್ದರು. ಆದರೆ ನಂದಿಬೆಟ್ಟ ಬಂದ್ ಆಗಿದ್ದರಿಂದ ಜಲಾಶಯಕ್ಕೆ ಭೇಟಿ ನೀಡಿದ್ದರು. ಜಲಾಶಯದ ಬಂಡೆಯ ಮೇಲೆ ಕುಳಿತು ಊಟ ಮಾಡುತ್ತಿದ್ದ ವೇಳೆ ಮಗುವೊಂದು ಜಾರಿ ನೀರಿಗೆ ಬಿದ್ದಿದೆ. ಅದನ್ನು ರಕ್ಷಿಸಲು ಹೋದಾಗ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Vinay Somaiah death: ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ: ಕಾಂಗ್ರೆಸ್‌ ಶಾಸಕ ಸೇರಿ ಮೂವರ ಮೇಲೆ ಎಫ್‌ಐಆರ್