ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಾಜಿ ಸಿಎಂ ಸಿದ್ದರಾಮಯ್ಯ ಮೂರ್ತಿ ತೆರವು ಖಂಡಿಸಿ ಕಲಬುರಗಿಯಲ್ಲಿ ಅಭಿಮಾನಿಗಳ ಬಳಗದಿಂದ ಪ್ರತಿಭಟನೆ

Kalaburagi News: ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ತೆರವುಗೊಳಿಸಿರುವ ಸ್ಥಳದಲ್ಲಿಯೇ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಮರಳಿ ಪ್ರತಿಷ್ಠಾಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಮೂರ್ತಿ ತೆರವು ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ

ಸಂಗ್ರಹ ಚಿತ್ರ -

Profile
Siddalinga Swamy Sep 18, 2026 2:07 PM

ಕಲಬುರಗಿ, ಸೆ.18: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ (Former CM Siddaramaiah) ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಖಂಡಿಸಿ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ನಗರದಲ್ಲಿ (Kalaburagi News) ಪ್ರತಿಭಟನೆ ನಡೆಸಲಾಯಿತು. ನಗರದ ಹೈಕೋರ್ಟ್ ಸರ್ಕಲ್ ಸಮೀಪದ ಸಿದ್ದರಾಮಯ್ಯ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಮಹಾನಗರ ಪಾಲಿಕೆಯ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿ ತೆರವುಗೊಳಿಸಿರುವುದನ್ನು ಖಂಡಿಸಿ ಅಫಜಲಪುರಕ್ಕೆ ತೆರಳುವ ರಸ್ತೆಯ ಬಳಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ತೆರವುಗೊಳಿಸಿರುವ ಸ್ಥಳದಲ್ಲಿಯೇ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಮರಳಿ ಪ್ರತಿಷ್ಠಾಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಮಹಾನಗರ ಪಾಲಿಕೆ ಕೂಡಲೇ ಕ್ರಮ ಕೈಗೊಂಡು ಮೂರ್ತಿಯನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಪ್ರತಿಭಟನೆಯ ಹಿನ್ನೆಲೆ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪರಿಸ್ಥಿತಿ ನಿಯಂತ್ರಿಸಿದರು.