Road Accident: ಶಾಲಾ ವಾಹನಕ್ಕೆ ಟ್ಯಾಂಕರ್ ಡಿಕ್ಕಿ; ಆರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಸಿಮೆಂಟ್ ತುಂಬಿದ್ದ ಟ್ಯಾಂಕರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಆರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಸದ್ಯ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

-

ಕಲಬುರಗಿ: ಸಿಮೆಂಟ್ ತುಂಬಿದ್ದ ಟ್ಯಾಂಕರ್ ಹಾಗೂ ಶಾಲಾ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಆರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ನಾಗನಹಳ್ಳಿ ರಿಂಗ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಚಂದ್ರಕಾಂತ ಪಾಟೀಲ ಪಬ್ಲಿಕ್ ಶಾಲೆಗೆ ಸೇರಿದ ಶಾಲಾ ವಾಹನ ರಾಮಮಂದಿರ ಕಡೆಯಿಂದ ನಾಗನಹಳ್ಳಿ ರಿಂಗ್ ರಸ್ತೆಯತ್ತ ಬರುತ್ತಿತ್ತು. ವಾಡಿಯಿಂದ ಸಿಮೆಂಟ್ ತುಂಬಿಕೊಂಡು ಹೊರಟ್ಟಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಮೂಲಗಳು ಹೇಳಿವೆ. ಅಪಘಾತದಲ್ಲಿ ಶಾಲಾ ವಾಹನದ ಮುಂಭಾಗ ನಜ್ಜುಗುಜ್ಜಾಗಿದ್ದು, ಮುಂದಿನ ಗಾಜು ಒಡೆದಿದೆ. ಘಟನೆ ಕಲಬುರಗಿ ನಗರ ಸಂಚಾರ ಪೊಲೀಸ್ ಠಾಣೆ-2ರ ವ್ಯಾಪ್ತಿಯಲ್ಲಿ ನಡೆದಿದೆ.
ಸದ್ಯ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದಲ್ಲಿ ಪ್ರೀತಂ ನಿಂಗಣ್ಣ (6 ವರ್ಷ), ಸುಪ್ರೀತ್ (9 ವರ್ಷ), ಆದಿತ್ಯ (12 ವರ್ಷ), ವಿಕ್ರಾಂತ (14 ವರ್ಷ) ಸಾಯಿನಾಥ (13), ದಕ್ಷಿತ್ (7 ವರ್ಷ), ಗಾಯಕೊಂಡ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ.
ಈ ಸುದ್ದಿಯನ್ನೂ ಓದಿ: Bike accident: ಚನ್ನರಾಯಪಟ್ಟಣದಲ್ಲಿ 3 ಬೈಕ್‌ಗಳ ನಡುವೆ ಸರಣಿ ಅಪಘಾತ; ವೃದ್ಧ ಸಾವು, ಮೂವರಿಗೆ ಗಂಭೀರ ಗಾಯ
ವಿದ್ಯುತ್ ತಂತಿ ಮೇಲೆತ್ತುವಾಗ ಶಾಕ್ ಬಡಿದು ಯುವಕ ಸಾವು
ಜಯಪುರ ನಗರದ ಗಾಂಧಿಚೌಕ್ ವೃತ್ತದ ಬಳಿಯ ಟಾಂಗಾ ಸ್ಟ್ಯಾಂಡ್ ಬಳಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಶಾಕ್ ಬಡಿದು ಯುವಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಗಣೇಶನ ಮೂರ್ತಿ ಸಾಗಲು ಕೋಲಿನಿಂದ ವಿದ್ಯುತ್ ತಂತಿ ಮೇಲೆತ್ತುವ ವೇಳೆ ವಿದ್ಯುತ್ ಪ್ರವಹಿಸಿ ವಿಜಯಪುರ ನಗರದ ಡೋಬಲೆ ಗಲ್ಲಿ ನಿವಾಸಿ ಶುಭಂ ಸಂಕಳ (21) ಮೃತಪಟ್ಟಿದ್ದಾರೆ. ಘಟನೆ ನಡೆದ ಕೂಡಲೇ ಎಲ್ಲ ಗಣೇಶನ ಮೂರ್ತಿಗಳನ್ನು ಕಳುಹಿಸಿದ ಪೊಲೀಸರು, ಸ್ಥಳದಲ್ಲಿ ಮುನ್ನೆಚ್ಚರಿಕೆ ವಹಿಸಿದ್ದಾರೆ. ಡಿವೈಎಸ್ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ನಿಂತು ಇತರ ಗಣೇಶ ವಿಸರ್ಜನೆ ಮೆರವಣಿಗೆಗಳಿಗೆ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ.