ಕಲಬುರಗಿ, ಡಿ.27: ದೆವ್ವ ಹಿಡಿದಿದೆ ಎಂದು ಮಹಿಳೆಯನ್ನು ಬೇವಿನ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮುರುಮ್ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ವೆಂಕಟೇಶ್ವರ ನಗರ ನಿವಾಸಿ ಮುಕ್ತಬಾಯಿ ಎಂದು ಗುರುತಿಸಲಾಗಿದೆ.
ಸುಮಾರು 6 ವರ್ಷಗಳ ಹಿಂದೆ ಮುಕ್ತಬಾಯಿಗೆ ಮುರುಮ್ ಗ್ರಾಮದ ಗಿಡ್ಡೆಪ್ಪ ಎಂಬಾತನ ಜತೆ ಮದುವೆ ನಡೆದಿತ್ತು. ದಂಪತಿಗೆ ಐದು ವರ್ಷದ ಗಂಡು ಮಗ ಇದ್ದಾನೆ. ಇತ್ತೀಚೆಗೆ ಮುಕ್ತಬಾಯಿಗೆ ದೆವ್ವ ಹಿಡಿದಿದೆ ಎಂದು ಆರೋಪಿಸಿದ ಗಂಡನ ಮನೆಯವರು, ಆಕೆಯ ಮೇಲೆ ಪದೇಪದೇ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಮೃತಳ ತಾಯಿ ತಿಪ್ಪವ್ವ, ಮಗಳಿಗೆ ಯಾವುದೇ ದೆವ್ವ ಹಿಡಿದಿಲ್ಲ. ಅವಳನ್ನು ಹಿಂಸಿಸಬೇಡಿ ಎಂದು ಮನವಿ ಮಾಡಿದರೂ ಮಾತು ಕೇಳಲಿಲ್ಲ. ನೆನ್ನೆ ಗಂಡ ಮನೆಯಲ್ಲಿ ಇಲ್ಲದ ವೇಳೆ, ಐದು ವರ್ಷದ ಮಗನ ಎದುರಲ್ಲೇ ಮುಕ್ತಬಾಯಿಯ ಮೇಲೆ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಮಹಿಳೆಯನ್ನು ಗಾಣಗಾಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಪೂಜೆ, ನದಿ ಸ್ನಾನ ಮಾಡಿಸಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಚಿಕಿತ್ಸೆ ಫಲಿಸದೇ ಮುಕ್ತಬಾಯಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
ಮೃತಳ ಸಹೋದರಿ ಶ್ರೀದೇವಿ, ಇದು ಮೂಢನಂಬಿಕೆಯ ಹೆಸರಿನಲ್ಲಿ ಮಾಡಿರುವ ಕೊಲೆ ಎಂದು ಆರೋಪಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆಳಂದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ತನಿಖೆಯನ್ನು ಮಹಾರಾಷ್ಟ್ರದ ಮುರುಮ್ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿದೆ.
Murder Case: ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಪ್ರಿಯಕರನಿಂದ ಸ್ಟಾಫ್ ನರ್ಸ್ ಕೊಲೆ
ಬೆಂಗಳೂರಿನಲ್ಲಿ ಪತ್ನಿಯ ಕತ್ತು ಸೀಳಿ ಕೊಲೆಗೈದ ಗಂಡ!
ಬೆಂಗಳೂರು: ಕೆಲಸ ವಿಚಾರಕ್ಕೆ ಪತ್ನಿಯನ್ನು ಪತಿ ಭೀಕರವಾಗಿ ಹತ್ಯೆ ಮಾಡಿರುವುದು ರಾಜಧಾನಿಯಲ್ಲಿ ನಡೆದಿದೆ. ಪತ್ನಿಯ ಕೆಲಸದ ವಿಚಾರವಾಗಿ ನಡೆದ ಜಗಳ ಕೊನೆಗೆ ಕೊಲೆಯಲ್ಲಿ ಅಂತ್ಯಯಾಗಿದೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಗ್ರಹಾರ ಲೇಔಟ್‌ನಲ್ಲಿ ಪ್ರಕರಣ (Bengaluru Murder Case) ನಡೆದಿದೆ. ಆಯೇಷಾ ಸಿದ್ದಿಕಿ (39) ಕೊಲೆಯಾದ ಮಹಿಳೆ. ಪತಿ ಸೈಯ್ಯದ್ ಜಬಿ ಕೊಲೆ ಆರೋಪಿಯಾಗಿದ್ದು, ಕೊಲೆ ಮಾಡಿದ ಬಳಿಕ ಆರೋಪಿಯು ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
ಆಯೇಷಾ ಸಿದ್ದಿಕಿ ಮಸಾಜ್ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಇದು ಪತಿ ಸೈಯ್ಯದ್ ಜಬಿಗೆ ಇಷ್ಟವಿರಲಿಲ್ಲ. ಆ ಕೆಲಸಕ್ಕೆ ಹೋಗಬೇಡ ಎಂದು ಪದೇಪದೇ ಹೇಳುತ್ತಿದ್ದ, ಈ ವಿಚಾರಕ್ಕೆ ಸಂಬಂಧಿಸಿ ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ. ಡಿ.26ರ ರಾತ್ರಿ ಇದೇ ವಿಚಾರಕ್ಕೆ ಪತಿ-ಪತ್ನಿ ನಡುವೆ ಜಗಳ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ, ಗಂಡನು ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ.
ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಹಲ್ಲೆ: ಆಘಾತಕಾರಿ ಘಟನೆಗೆ ನೆಟ್ಟಿಗರ ಆಕ್ರೋಶ!
ಮೃತ ಆಯೇಷಾ ಸಿದ್ದಿಕಿಗೆ ಸೈಯ್ಯದ್ ಜಬಿ ಮೂರನೇ ಗಂಡನಾಗಿದ್ದು, ಸೈಯ್ಯದ್ ಜಬಿಗೆ ಆಯೇಷಾ ಸಿದ್ದಿಕಿ ಎರಡನೇ ಪತ್ನಿಯಾಗಿದ್ದರು. ವಿವಾಹವಾದ ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿತ್ತು. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ. ಕೊಲೆ ಮಾಡಿದ ಬಳಿಕ ಆರೋಪಿ ಸೈಯ್ಯದ್ ಜಬಿ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.