Car Accident: ಅಫಜಲಪುರದಲ್ಲಿ ಭೀಕರ ಕಾರು ಅಪಘಾತ; 2 ವರ್ಷದ ಮಗು ಸೇರಿ ಮೂವರ ದುರ್ಮರಣ
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರು ಗ್ರಾಮದ ಬಳಿ ಅಪಘಾತ ನಡೆದಿದೆ. ರಸ್ತೆ ಮೇಲೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿನ ಕಂಬಗಳಿಗೆ ವಾಹನ ಡಿಕ್ಕಿ ಹೊಡೆದು ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.


ಕಲಬುರಗಿ: ರಸ್ತೆಯಲ್ಲಿ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿಯಾದ ಪರಿಣಾಮ, ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರು ಗ್ರಾಮದ ಬಳಿ ನಡೆದಿದೆ.
ಕಲಬುರಗಿಯ ಆಯೇಷಾ(70), ಅಜ್ಮೇರಾ (30) ಜೈನಬ್ (2) ಮೂವರು ಮೃತ ದುದೈವಿಗಳಾಗಿದ್ದು, ರಸ್ತೆ ಮೇಲೆ ಅಡ್ಡ ಬಂದ ನಾಯಿಯನ್ನು ಉಳಿಸಲು ಹೋಗಿದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿನ ಕಂಬಗಳಿಗೆ ವಾಹನ ಡಿಕ್ಕಿ ಹೊಡೆದು ಅಪಘಾತ ನಡೆದಿದೆ.
ಮೃತರು ಕಲಬುರಗಿಯ ಮಿಲ್ಲತ್ ನಗರದಿಂದ ಸಂಬಂಧಿಕರ ಮಗುವಿನ ಜಾವಳ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಹಾರಾಷ್ಟ್ರದ ಗಡಿ ಭಾಗದ ಹೈದ್ರಾ ದರ್ಗಾಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಈ ಕುರಿತು ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ | Pahalgam Terror attack: ಉಗ್ರ ಪೋಷಕ ಪಾಕ್‌ಗೆ ಶಾಕ್ ಮೇಲೆ ಶಾಕ್! ಪಾಕಿಸ್ತಾನ ಸರ್ಕಾರದ ಎಕ್ಸ್ ಅಕೌಂಟ್ ಬ್ಲಾಕ್
ಸಿಗರೇಟ್ ಸೇದಬೇಡಿ ಎಂದ ಆರ್‌ಎಸ್‌ಎಸ್ ಮುಖಂಡನ ಮನೆಗೇ ನುಗ್ಗಿ ಥಳಿಸಿದ ಪುಂಡರು!

ಧಾರವಾಡ: ಆರ್‌ಎಸ್‌ಎಸ್ ಮುಖಂಡನ (RSS Leader) ಮನೆಗೇ ನುಗ್ಗಿ ನಾಲ್ವರು ಮುಸ್ಲಿಂ ಪುಂಡರು (Muslim Youths) ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳು ಕುಟುಂಬಸ್ಥರ ಮೇಲೂ ಹಲ್ಲೆ (Assault Case) ಮಾಡಿದ್ದಾರೆ. ಧಾರವಾಡ (Dharwad news) ನಗರದ ಗಾಂಧಿ ಚೌಕ್ ಬಳಿ ಈ ಘಟನೆ ನಡೆದಿದೆ. ಸಿಗರೇಟು ಸೇದಬೇಡಿ (Cigarette smoking) ಎಂದು ಬುದ್ಧಿವಾದ ಹೇಳಿದ್ದಕ್ಕೆ ನಾಲ್ವರು ಯುವಕರು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಆರ್‌ಎಸ್‌ಎಸ್ ಮುಖಂಡ ಶಿರೀಶ್ ಬಳ್ಳಾರಿ ಮತ್ತು ಕುಟುಂಬಸ್ಥರ ಮೆಲೆ ಹಲ್ಲೆ ನಡೆದಿದ್ದು, ಈ ಬಗ್ಗೆ ದೂರು ದಾಖಲಾಗಿದೆ.
ಸಿಗರೇಟು ಸೇದಬೇಡಿ ಎಂದು ಬುದ್ದಿ ಹೇಳಿದ್ದಕ್ಕೆ ರೊಚ್ಚಿಗೆದ್ದ ಮುಸ್ಲಿಂ ಪುಂಡರು,ಆರ್‌ಎಸ್‌ಎಸ್ ಮುಖಂಡ ಶಿರೀಶ್ ಬಳ್ಳಾರಿ ಮನೆಗೇ ಹುಡುಕಿಕೊಂಡು ಬಂದು ಒಳನುಗ್ಗಿ ಹಲ್ಲೆ ಎಸಗಿದ್ದಾರೆ. ತಡೆಯಲು ಬಂದ ಕುಟುಂಬಸ್ಥರ ಮೇಲೂ ಹಲ್ಲೆ ನಡೆಸಲಾಗಿದೆ. ನಾಲ್ವರು ಮುಸ್ಲಿಂ ಯುವಕರು ಶಿರೀಶ್ ಬಳ್ಳಾರಿ ಅವರ ಮನೆಯವರ ಮೇಲೂ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಹಲ್ಲೆ ಮಾಡಿದ ಬಳಿಕ ನಾಲ್ವರು ನಾಪತ್ತೆಯಾಗಿದ್ದಾರೆ.
ಘಟನೆ ಸಂಬಂಧ ಶಿರೀಶ್ ಬಳ್ಳಾರಿ ಅವರು ಧಾರವಾಡ ಶಹರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಪಡೆದ ಪೊಲೀಸರು ಹಲ್ಲೆ ನಡೆಸಿದ ನಾಲ್ವರು ದುಷ್ಕರ್ಮಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಆರ್‌ಎಸ್‌ಎಸ್ ಮುಖಂಡನ ಮೇಲಿನ ಹಲ್ಲೆಗೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಶಹರ ಪೋಲಿಸ್ ಠಾಣೆಯ ಎದುರು ಸೇರಿದ ನೂರಾರು ಹಿಂದೂ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.