Kalaburagi News: ಸಿಸಿ ರಸ್ತೆ ಕಾಮಗಾರಿ ಬಿಲ್ ಮಂಜೂರು ಮಾಡಲು ಕಮಿಷನ್‌ಗೆ ಬೇಡಿಕೆ; ಇಬ್ಬರು ಅಧಿಕಾರಿಗಳ ಅಮಾನತು
Kalaburagi News: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದ್ದ ಸಿಸಿ ರಸ್ತೆಯ ಕಾಮಗಾರಿಯ ಬಿಲ್ ಮಾಡಲು ಕಮಿಷನ್ ಬೇಡಿಕೆಯಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಸಾಂದರ್ಭಿಕ ಚಿತ್ರ.

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದ್ದ ಸಿಸಿ ರಸ್ತೆಯ ಕಾಮಗಾರಿಯ ಬಿಲ್ ಮಂಜೂರು ಮಾಡಲು ಕಮಿಷನ್‌ಗೆ ಬೇಡಿಕೆಯಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಲಬುರಗಿ (Kalaburagi News) ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಜೆಇ ಶ್ರೀಪಾದ್ ಬಾಪುರಾವ್ ಕುಲಕರ್ಣಿ ಹಾಗೂ ಪಿಡಿಒ ಮಂಜುಶ್ರೀ ಜಹಾಗಿರದಾರ್ ಅಮಾನತುಗೊಂಡವರು.
ಈ ಇಬ್ಬರು ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆದೇಶದ ಮೇರೆಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ ಸಿಂಗ್ ಮೀನಾ ಅವರು ಇಲಾಖೆ ವಿಚಾರಣೆ ಕಾಯ್ದಿರಿಸಿ, ಬುಧವಾರ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 15ನೇ ಹಣಕಾಸಿನ ಯೋಜನೆಯಡಿ ಸಿಸಿ ರಸ್ತೆ ಕಾಮಗಾರಿ ಬಿಲ್ ಮಂಜೂರು ಮಾಡಲು ಗುತ್ತಿಗೆದಾರರ ಬಳಿ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಈ ಸುದ್ದಿಯನ್ನೂ ಓದಿ | Physical Abuse: ಬೆಂಗಳೂರಿನಲ್ಲಿ ಹೀನ ಕೃತ್ಯ; ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್
ಕಮಿಷನ್ ಬೇಡಿಕೆಯಿಟ್ಟ ವಿಡಿಯೋ ವೈರಲ್
15ನೇ ಹಣಕಾಸಿನ ಯೋಜನೆಯಡಿಯಲ್ಲಿ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಸಿಸಿ ರಸ್ತೆ ಕಾಮಗಾರಿಯ ಬಿಲ್ ಮಾಡುವುದಕ್ಕೆ ಪಂಚಾಯತ್ ರಾಜ್ ಇಲಾಖೆಯ ಜೆಇ ಶ್ರೀಪಾದ್ ಕುಲಕರ್ಣಿ ಕಮಿಷನ್ ಬೇಡಿಕೆಯಿಟ್ಟ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ಸಿಸಿ ರಸ್ತೆಯ ಕಾಮಗಾರಿ ಬಿಲ್ ಗಳಿಗೆ 5 ಪರ್ಸೆಂಟ್ ಲಂಚ, ಪಿಡಿಓ 3 ಪರ್ಸೆಂಟ್ ಕೇಳುತ್ತಾರೆ ಅವರಿಗೂ ಕೊಡಬೇಕು ಎಂದು ವಿಡಿಯೋದಲ್ಲಿ ಜೆಇ ವೈರಲ್ ವಿಡಿಯೋದಲ್ಲಿ ಹೇಳಿರುವ ಮಾತುಗಳು ಇದೀಗ ಎಲ್ಲೆಡೆ ವೈರಲ್ ಆಗಿದೆ.