ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Priyank Kharge: ಕೆಪಿಎಸ್‌ಸಿ ತನಿಖೆ ಹಳ್ಳ ಹಿಡಿಯಲು ಬಿಡಲ್ಲ: ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ ಅಕ್ರಮಕ್ಕೆ ಸಂಬಂಧಿಸಿದಂತೆ ನಮ್ಮ ಪೊಲೀಸ್ ಇಲಾಖೆಯವರೇ ಐಎಎಸ್ ಅಧಿಕಾರಿಯನ್ನು ಬಂಧಿಸಿರುವ ಉದಾಹರಣೆ ಇದೆ. ಕಳೆದ ಹಲವು ವರ್ಷಗಳಿಂದ ಕೆಪಿಎಸ್‌ಸಿಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪಗಳಿವೆ. ಈ ಬಾರಿ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಹಿಂದಿನ ಅಕ್ರಮದ ಆರೋಪಿಗಳ ಮೇಲೂ ನಿಗಾ ಇಡಲಾಗಿದೆ ಎಂದರು.

35 ಲಕ್ಷ ಅಭ್ಯರ್ಥಿಗಳ ಭವಿಷ್ಯದೊಂದಿಗೆ ಆಟವಾಡಲು ಅವಕಾಶವಿಲ್ಲ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾಗಿದೆ

ಕಲಬುರಗಿ: ಕೆಪಿಎಸ್‌ಸಿ ನೇಮಕಾತಿ ಅಕ್ರಮ(KPSC recruitment scam) ಕುರಿತು ಸಿಐಡಿ ತನಿಖೆ ನಡೆಸುತ್ತಿದ್ದು, ಯಾವುದೇ ಕಾರಣಕ್ಕೂ ತನಿಖೆ ಹಳ್ಳ ಹಿಡಿಯಲು ಬಿಡುವುದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ(Home Minister Priyank Kharge) ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 74 ಸಾವಿರ ಹುದ್ದೆ ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸುಮಾರು 35 ಲಕ್ಷ ಜನ ಪರೀಕ್ಷೆ ಬರೆದಿದ್ದಾರೆ. ಅವರೆಲ್ಲ ಬಡತನದಿಂದ ಬಂದ ಮಕ್ಕಳು. ಅವರ ಭವಿಷ್ಯದೊಂದಿಗೆ ಆಟವಾಡಲು ನಾನು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಪಿಎಸ್‌ಸಿ ಅಕ್ರಮಕ್ಕೆ ಸಂಬಂಧಿಸಿದಂತೆ ನಮ್ಮ ಪೊಲೀಸ್ ಇಲಾಖೆಯವರೇ ಐಎಎಸ್ ಅಧಿಕಾರಿ ಯನ್ನು ಬಂಧಿಸಿರುವ ಉದಾಹರಣೆ ಇದೆ. ಕಳೆದ ಹಲವು ವರ್ಷಗಳಿಂದ ಕೆಪಿಎಸ್‌ಸಿಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪಗಳಿವೆ. ಈ ಬಾರಿ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಹಿಂದಿನ ಅಕ್ರಮದ ಆರೋಪಿಗಳ ಮೇಲೂ ನಿಗಾ ಇಡಲಾಗಿದೆ ಎಂದರು.

ಇದನ್ನೂ ಓದಿ: KPSC Recruitment Scam: ಕೆಪಿಎಸ್‌ಸಿ ಹಗರಣ: ಜ್ಞಾನೇಂದ್ರ ಅಮಾನತು: ಕರ್ಮಕಾಂಡಕ್ಕೆ ಮತ್ತೊಂದು ಬಲಿ

ಈ ಬಾರಿ ಕೇವಲ 908 ಹುದ್ದೆಗಳನ್ನು ಕೆಪಿಎಸ್‌ಸಿಗೆ ನೀಡಲಾಗಿದೆ. ಗಂಗ್ವಾರ್ ಅವರ ಅವಧಿಯಲ್ಲಿ ಎಲ್ಲವೂ ಲೀಕ್ ಆಗಿದೆ ಎಂಬ ವದಂತಿ ಇದೆ. ಆದರೆ ಈ ಬಗ್ಗೆ ನಾನು ಹೇಳಲು ಸಾಧ್ಯವಿಲ್ಲ ಎಂದರು.

ಹುದ್ದೆಗಳನ್ನು ರದ್ದುಗೊಳಿಸುವ ಅಧಿಕಾರಯಾರಿಗಿದೆ.?

ಕುಮಾರಸ್ವಾಮಿ ಅವರು ಹತ್ತು ಪ್ರಶ್ನೆ ಕೇಳಿದ್ದಾರೆ. ಅವರ ಪ್ರಶ್ನೆಗಳಿಗೆ ನನ್ನದೊಂದೇ ಪ್ರಶ್ನೆ. ಕೆಪಿಎಸ್‌ಸಿ ಹುದ್ದೆಗಳನ್ನು ರದ್ದುಪಡಿಸುವ ಅಧಿಕಾರ ಯಾರಿಗಿದೆ ಎಂಬುದನ್ನು ಅವರು ಹೇಳಲಿ. ನಮ್ಮ ಕೈಯಲ್ಲಿ ಎಲ್ಲ ಅಧಿಕಾರವೂ ಇರುವುದಿಲ್ಲ. ಕೆಪಿಎಸ್‌ಸಿಯಲ್ಲಿ ಈ ಹಿಂದೆ ಅಕ್ರಮ ಮಾಡಿದ ಆರೋಪಿಗಳ ಮೇಲೂ ನಿಗಾ ಇಡಲಾಗಿದೆ. ಕಳೆದ ಹಲವು ವರ್ಷಗಳಿಂದ ಅಕ್ರಮಗಳು ನಡೆಯುತ್ತಿವೆ. ಈ ಬಾರಿ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಂದ ಸಿಬ್ಬಂದಿಗೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಬ್ಬಂದಿ ಮೇಲೆ ಕೈದಿಗಳು ಹಲ್ಲೆ ನಡೆಸಿರುವ ಘಟನೆ ಕುರಿತು ಸಂಪೂರ್ಣ ಮಾಹಿತಿ ಇನ್ನೂ ಬಂದಿಲ್ಲ. ಹಲ್ಲೆಗೆ ಕಾರಣವೇನು ಎಂಬುದನ್ನು ತಿಳಿದುಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದರು.

ಕೈದಿಗಳಿಗೆ ಕಾಲಕಾಲಕ್ಕೆ ಕೌನ್ಸಲಿಂಗ್ ನೀಡಲಾಗುತ್ತಿದೆ. ಕೆಲವೊಮ್ಮೆ ಅವರ ಮಾನಸಿಕ ಸ್ಥಿತಿ ಸಹಜವಾಗಿರುವುದಿಲ್ಲ. ಅಂತಹ ಸಂದರ್ಭದಲ್ಲಿ ಜಗಳ, ಹಲ್ಲೆಯಂತಹ ಘಟನೆಗಳು ನಡೆಯುತ್ತವೆ. ಕೈದಿಗಳು ಕೇಳಿದ್ದನ್ನು ನೀಡದಿದ್ದಾಗಲೂ ಈ ರೀತಿ ವರ್ತಿಸುವ ಸಾಧ್ಯತೆಯಿದೆ. ಹೀಗಾಗಿ ಜೈಲು ಇಲಾಖೆಯ ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ. ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಸಂಖ್ಯೆ ಹೆಚ್ಚಾಗಿದೆ ಎಂದರು.

ಇನ್ನು, ಗೃಹ ಇಲಾಖೆ ಬಹಳ ದೊಡ್ಡ ಇಲಾಖೆಯಾಗಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಇಲಾಖೆಯ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ್ದೇನೆ. ಸಿಬ್ಬಂದಿಗೆ ಕ್ಯೂಆರ್ ಕೋಡ್ ನೀಡಿದ್ದು, ಅದರ ಮೂಲಕವೇ ತಮ್ಮ ಸಮಸ್ಯೆಗಳನ್ನು ತಿಳಿಸುವಂತೆ ಸೂಚಿಸಿದ್ದೇವೆ ಎಂದು ಹೇಳಿದರು.

ಬರ ಘೋಷಣೆ ಕೇಂದ್ರದ ಮಾನದಂಡದಂತೆ ಆಗಬೇಕು

ಬರ ಘೋಷಣೆ ಮಾಡಬೇಕಾದರೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡದ ಪ್ರಕಾರವೇ ಮಾಡಬೇಕು. ಆದರೆ ಇದನ್ನು ಬಿಟ್ಟು ಕಲಬುರಗಿಯಲ್ಲಿ ಬಿಜೆಪಿ ಪ್ರತಿಭಟನೆ ಹೆಸರಿನಲ್ಲಿ ಗುಂಡಾಗಿರಿ ಮಾಡುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಬಿಜೆಪಿಯವರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ. ಒಬ್ಬ ಉದ್ಯಮಿಯ ₹22 ಸಾವಿರ ಕೋಟಿ ಸಾಲವನ್ನು ₹6 ಕೋಟಿಗೆ ಸೆಟ್ಲ್ ಮಾಡುತ್ತೀರಿ. ಆದರೆ ರೈತರಿಗೆ ಪರಿಹಾರ ನೀಡಲು ಹಿಂದೇಟು ಹಾಕುತ್ತೀರಿ ಏಕೆ ಎಂದು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಶ್ರೀರಾಮುಲು ಮೊದಲು ಕನ್ನಡ ಕಲಿಯಲಿ

ಮಾಜಿ ಸಚಿವ ಶ್ರೀರಾಮುಲು ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜೈಲಿಗೆ ಹೋಗಿ ಬಂದವರು ‘ನಾನು ಜೈಲಿಗೆ ಹೋಗುತ್ತೇನೆ’ ಎಂದು ಹೇಳುತ್ತಾರೆ. ಶ್ರೀರಾಮುಲು ಅವರಿಗೆ ಮೊದಲು ಸರಿಯಾಗಿ ಕನ್ನಡ ಕಲಿಯಲು ಹೇಳಿ. ಕೆಪಿಎಸ್‌ಸಿಯ ಪೂರ್ಣ ರೂಪವೇನು ಎಂಬುದನ್ನು ಅವರ ಬಳಿ ಕೇಳಿ. ಅಂತಹವರಿಂದ ನಾನು ಕಲಿಯಬೇಕಾ ಎಂದು ಪ್ರಶ್ನಿಸಿದರು. ‘ರಿಪಬ್ಲಿಕ್ ಬಳ್ಳಾರಿ’ಯನ್ನು ಮಾಡಿದವರು ಅವರೇ ಎಂದು ಟೀಕಿಸಿದರು.

image

ಇಡ್ಲಿ ಮಾರುವ ನಿಂಗಮ್ಮಳ ಬಂಡಿ ತೆರವು ಮಾಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್‌ ಕೀ ಬಾತ್’ನಲ್ಲಿ ವಿಷಯ ಬಂದ ತಕ್ಷಣವೇ ಬಂಡಿ ತೆರವು ಮಾಡಿಲ್ಲ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ತೆರವು ಮಾಡಿರಬಹುದು.

- ಪ್ರಿಯಾಂಕ್ ಖರ್ಗೆ, ಗೃಹ ಸಚಿವ