ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Harish Rai Death: ʼಕೆಜಿಎಫ್ ಚಾಚಾʼ ಹರೀಶ್ ರಾಯ್ ನಿಧನ, ಕ್ಯಾನ್ಸರ್‌ಗೆ ನಟ ಬಲಿ

Harish Rai no more: ʼಓಂʼ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಜಿಎಫ್ ಚಿತ್ರದ ನಂತರ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಂಡಿದ್ದು, ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಹರೀಶ್‌ ರಾಯ್‌ ಇನ್ನಿಲ್ಲ

ಬೆಂಗಳೂರು: ʼಕೆಜಿಎಫ್ ಚಾಚಾʼ ಎಂದೇ ಖ್ಯಾತರಾಗಿದ್ದ ಕನ್ನಡದ ಖಳನಟ ಹರೀಶ್ ರಾಯ್ (Harish Rai Death) ನಿಧನರಾಗಿದ್ದಾರೆ. ಅವರು ಬಹು ಕಾಲದಿಂದ ಬೆಂಗಳೂರಿನ ಕಿದ್ವಾಯಿ ಹಾಸ್ಪಿಟಲ್‌ನಲ್ಲಿ ಥೈರಾಯಡ್‌ ಕ್ಯಾನ್ಸರ್‌ (Thyroid Cancer) ಕಾಯಿಲೆಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ 55 ವರ್ಷ ವಯಸ್ಸಾಗಿತ್ತು.

ʼಓಂʼ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಜಿಎಫ್ ಚಿತ್ರದ ನಂತರ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಂಡಿದ್ದು, ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಹುಟ್ಟೂರು ಉಡುಪಿಯ ಅಂಬಲಪಾಡಿಯಲ್ಲಿ ಅಂತ್ಯ ಕ್ರಿಯೆ ನಡೆಯಲಿದ್ದು, ಬೆಂಗಳೂರಿನಲ್ಲಿರುವ ಅಂಜನಾಪುರದ ಮನೆಗೆ ಪಾರ್ಥವ ಶರೀರ ರವಾನೆ ಮಾಡಲಾಗಿದ್ದು, ಅಲ್ಲಿಂದ ಮಧ್ಯಾಹ್ನ ಉಡುಪಿಗೆ ತೆಗೆದುಕೊಂಡು ಹೋಗಲಾಗುತ್ತದೆ ಎಂದು ತಿಳಿದುಬಂದಿದೆ.

ಕನ್ನಡ ಹಾಗೂ ತಮಿಳಿನಲ್ಲೂ ನಟನೆ

ತಮಿಳಿನಲ್ಲೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಅಂಡರ್​ ವರ್ಲ್ಡ್, ಮೀಂದುಮ್ ಒರು ಕಾದಲ್ ಕಧೈ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್​ವುಡ್​ನ ಟಾಪ್ ಸಿನಿಮಾ ಕೆಜಿಎಫ್​​ ಚಾಪ್ಟರ್ ೧ ಹಾಗೂ ಕೆಜಿಎಫ್​​ ಚಾಪ್ಟರ್ ೨ರಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: Dhruva Sarja: ಹರೀಶ್‌ ರಾಯ್‌ ಚಿಕಿತ್ಸೆಗೆ ನಟ ಧ್ರುವ ಸರ್ಜಾ ಸಹಾಯ ಹಸ್ತ; 11 ಲಕ್ಷ ರೂಪಾಯಿ ನೀಡಿದ ಆ್ಯಕ್ಷನ್ ಪ್ರಿನ್ಸ್

ಹರೀಶ್‌ ರಾಯ್‌ ಅವರು ಸೋಶಿಯಲ್‌ ಮೀಡಿಯಾ ಅಕೌಂಟ್‌ನಲ್ಲಿ ತಮ್ಮ ಮಚಿಕಿತ್ಸೆಯ ವಿಡಿಯೋವನ್ನೂ ಶೇರ್‌ ಮಾಡಿಕೊಂಡಿದ್ದರು. ಅದು ಇಲ್ಲಿದೆ:



ಅವರು ಹೆಂಡತಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ಸಹಾಯದ ಅಗತ್ಯವಿದ್ದ ಅವರಿಗೆ ಶಿವಣ್ಣ, ಧ್ರುವ, ದರ್ಶನ್, ಯಶ್ ಸೇರಿದಂತೆ ಅನೇಕ ನಟರು ಹಣ ಸಹಾಯ ಮಾಡಿದ್ದರು. ಅವರು 17 ಕೀಮೋಥೆರಪಿ ಇಂಜೆಕ್ಷನ್ ಪಡೆಯಬೇಕಿತ್ತು. ಒಂದು ಇಂಜೆಕ್ಷನ್ ಬೆಲೆ 3.5 ಲಕ್ಷ ರೂ. ಆಗುತ್ತಿತ್ತು. ಹಣ ಸಂಗ್ರಹ ಆಗುತ್ತಿದ್ದಂತೆ ಹಾಸ್ಪಿಟಲ್‌ಗೆ ಅಡ್ಮಿಟ್ ಆಗಿ ಒಂದು ಇಂಜೆಕ್ಷನ್ ಹಾಕಲಾಗಿತ್ತು. ಆದರೆ ಇಂಜೆಕ್ಷನ್‌ಗೆ ಸಹಕರಿಸದ ದೇಹದಲ್ಲಿ ನಂತರ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ನಿಶ್ಯಕ್ತಿಯಿಂದ ಐಸಿಯುನಲ್ಲಿ ಸುಮಾರು ದಿನಗಳಿಂದ ಚಿಕಿತ್ಸೆ ನೀಡಲಾಗಿತ್ತು.

ಹರೀಶ್‌ ಕೇರ

View all posts by this author