ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kannada New Movie: ತಿಲಕ್ ಶೇಖರ್ ನಟನೆಯ ‘ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’ ಚಿತ್ರ ತೆರೆಗೆ ಬರಲು ಸಜ್ಜು

Kannada New Movie: ತಿಲಕ್ ಶೇಖರ್ (ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ ಹಾಗೂ ಗಿರೀಶ್ ಕುಮಾರ್ ನಿರ್ದೇಶನದೊಂದಿಗೆ ಪ್ರಮುಖ ಪಾತ್ರದಲ್ಲೂ ನಟಿಸಿರುವ ʼಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್ʼ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ.

‘ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’ ಚಿತ್ರ ತೆರೆಗೆ ಬರಲು ಸಜ್ಜು

Profile Siddalinga Swamy Apr 7, 2025 5:55 PM

ಬೆಂಗಳೂರು: ವುಡ್ ಕ್ರೀಪರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ತಿಲಕ್ ಶೇಖರ್ (ಉಗ್ರಂ ಖ್ಯಾತಿ) ನಾಯಕರಾಗಿ ನಟಿಸಿರುವ ಹಾಗೂ ಗಿರೀಶ್ ಕುಮಾರ್ ನಿರ್ದೇಶನದೊಂದಿಗೆ ಪ್ರಮುಖ ಪಾತ್ರದಲ್ಲೂ ನಟಿಸಿರುವ ʼಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್ʼ ಚಿತ್ರವನ್ನು (Gangster Alla Prankster Movie) ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. ತಿಲಕ್ ಶೇಖರ್, ಗಿರೀಶ್ ಕುಮಾರ್, ವಿರಾನಿಕ ಶೆಟ್ಟಿ, ಬಾಲ ರಾಜವಾಡಿ, ಗಿರೀಶ್ ಬಿಜ್ಜಳ್, ಹೊನವಳ್ಳಿ ಕೃಷ್ಣ, ಸಂಗೀತ ಅನಿಲ್, ಸುಂದರ್, ರತೀಶ್ ಕುಮಾರ್, ಮಜಾಟಾಕೀಸ್ ಪವನ್, ಹನುಮಂತೇಗೌಡ, ಭವಾನಿ ಪ್ರಕಾಶ್ ಮುಂತಾದವರು ʼಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್ʼ ತಾರಾಬಳಗದಲ್ಲಿದ್ದಾರೆ.

ಚಿತ್ರದ ಬಗ್ಗೆ ನಟ, ನಿರ್ದೇಶಕ ಗಿರೀಶ್ ಕುಮಾರ್ ಮಾತನಾಡಿ,‌ ಈ ಹಿಂದೆ ನಾನು ʼಭಾವಚಿತ್ರʼ ಎಂಬ ಚಿತ್ರವನ್ನು ನಿರ್ದೇಶಿಸಿದ್ದೆ. ಇದು ನನ್ನ ಮೂರನೇ ನಿರ್ದೇಶನದ ಚಿತ್ರ. ಈ ಚಿತ್ರದಲ್ಲಿ ನಿರ್ದೇಶನದ ಜೊತೆಗೆ ಪ್ರಮುಖಪಾತ್ರದಲ್ಲಿ ನಟನೆಯನ್ನು ಮಾಡಿದ್ದೇನೆ.‌ ತಿಲಕ್ ಶೇಖರ್ ಅವರು ʼಗ್ಯಾಂಗ್ ಸ್ಟರ್ʼ ಆಗಿ, ನಾನು ʼಫ್ರಾಂಕ್ ಸ್ಟರ್ʼ ಆಗಿ ನಟಿಸಿದ್ದೇವೆ. ಇದು ಯೂಟ್ಯೂಬರ್ ಒಬ್ಬನ ಸುತ್ತ ನಡೆಯುವ ಕಥೆಯಾಗಿದೆ. ತಿಲಕ್ ಅವರು ಬಹಳ ದಿನಗಳ ನಂತರ ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಸಹ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಅತೀ ಶೀಘ್ರದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದು ತಿಳಿಸಿದ್ದಾರೆ.

ತಿಲಕ್ ಶೇಖರ್, ಗಿರೀಶ್ ಕುಮಾರ್, ವಿರಾನಿಕ ಶೆಟ್ಟಿ, ಬಾಲ ರಾಜವಾಡಿ, ಗಿರೀಶ್ ಬಿಜ್ಜಳ್, ಹೊನವಳ್ಳಿ ಕೃಷ್ಣ, ಸಂಗೀತ ಅನಿಲ್, ಸುಂದರ್, ರತೀಶ್ ಕುಮಾರ್ , ಮಜಾಟಾಕೀಸ್ ಪವನ್, ಹನುಮಂತೇಗೌಡ, ಭವಾನಿ ಪ್ರಕಾಶ್ ಮುಂತಾದವರು "ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್" ತಾರಾಬಳಗದಲ್ಲಿದ್ದಾರೆ.

ಈ ಸುದ್ದಿಯನ್ನೂ ಓದಿ | Sheer Fashion: ಬೇಸಿಗೆಯಲ್ಲಿ ಶೀರ್‌ ಫ್ಯಾಷನ್‌ ವೇರ್ಸ್ ಹಂಗಾಮ

ಜಾನ್ ಕೆನಡಿ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಅಜಯ್ ಕುಮಾರ್ ಛಾಯಾಗ್ರಹಣ ಹಾಗೂ ರತೀಶ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.