Gnanesh passes away: ಕನ್ನಡ ಚಿತ್ರ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ನರಹಳ್ಳಿ ಜ್ಞಾನೇಶ್ ನಿಧನ
ಕಳೆದ ಎರಡು ದಶಕಗಳಿಂದ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಸಕ್ರಿಯರಾಗಿದ್ದ ಜ್ಞಾನೇಶ್ ಅವರು, ಹಿರಿಯ ಸಂಕಲನಕಾರ ಸುರೇಶ್ ಅರಸ್ ಅವರ ಗರಡಿಯಲ್ಲಿ ಪಳಗಿದ್ದರು. ತಮ್ಮ ವೃತ್ತಿಜೀವನದಲ್ಲಿ ಹಲವಾರು ಧಾರಾವಾಹಿಗಳು, ಸಾಕ್ಷ್ಯಚಿತ್ರಗಳು, ಕಿರುಚಿತ್ರಗಳು ಹಾಗೂ ಸಿನಿಮಾಗಳಿಗೆ ಸಂಕಲನಕಾರರಾಗಿ ಸೇವೆ ಸಲ್ಲಿಸಿದ್ದರು.
ನರಹಳ್ಳಿ ಜ್ಞಾನೇಶ್ -
ಮೈಸೂರು, ಮಾರ್ಚ್ 7: ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ಸಂಕಲನಕಾರರಾದ ನರಹಳ್ಳಿ ಜ್ಞಾನೇಶ್ (48) ಅವರು ಶುಕ್ರವಾರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನವರಾದ ಇವರು, ಕಾರ್ಯನಿಮಿತ್ತ ತಮ್ಮ ಸ್ವಗ್ರಾಮ ನರಹಳ್ಳಿಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಎರಡು ದಶಕಗಳಿಂದ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಸಕ್ರಿಯರಾಗಿದ್ದ ಜ್ಞಾನೇಶ್ ಅವರು, ಹಿರಿಯ ಸಂಕಲನಕಾರ ಸುರೇಶ್ ಅರಸ್ ಅವರ ಗರಡಿಯಲ್ಲಿ ಪಳಗಿದ್ದರು. ತಮ್ಮ ವೃತ್ತಿಜೀವನದಲ್ಲಿ ಹಲವಾರು ಧಾರಾವಾಹಿಗಳು, ಸಾಕ್ಷ್ಯಚಿತ್ರಗಳು, ಕಿರುಚಿತ್ರಗಳು ಹಾಗೂ ಸಿನಿಮಾಗಳಿಗೆ ಸಂಕಲನಕಾರರಾಗಿ ಸೇವೆ ಸಲ್ಲಿಸಿದ್ದರು. ವಿಶೇಷವಾಗಿ, ನಟ ಜಗ್ಗೇಶ್ ಅಭಿನಯದ ‘ಎದ್ದೇಳು ಮಂಜುನಾಥ’ ಚಿತ್ರದ ಅತ್ಯುತ್ತಮ ಸಂಕಲನಕ್ಕಾಗಿ ಇವರು ಪ್ರತಿಷ್ಠಿತ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದರು.
ಇತ್ತೀಚೆಗಷ್ಟೇ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಚುನಾವಣೆಯಲ್ಲಿ ನಿರ್ಮಾಪಕರ ವಲಯದಿಂದ ಸ್ಪರ್ಧಿಸಿದ್ದ ಇವರು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳನ್ನು ಪ್ರತಿನಿಧಿಸುವ ಮೂಲಕ ವಾಣಿಜ್ಯ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿ ಗಮನ ಸೆಳೆದಿದ್ದರು.
ಕೇಂದ್ರದ ಮಾಜಿ ಸಚಿವ ಕೆ.ಪಿ. ಉಣ್ಣಿಕೃಷ್ಣನ್ ಇನ್ನಿಲ್ಲ; ವಯೋಸಹಜ ಕಾಯಿಲೆಯಿಂದ 89ನೇ ವಯಸ್ಸಿನಲ್ಲಿ ನಿಧನ