ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Book Award: ಲೇಖಕರೇ ಗಮನಿಸಿ, ʼಕನ್ನಡ ಪುಸ್ತಕ ಸೊಗಸು’ ಬಹುಮಾನಗಳಿಗೆ ಅರ್ಜಿ ಆಹ್ವಾನ

“ಕನ್ನಡ ಪುಸ್ತಕ ಸೊಗಸು ಬಹುಮಾನ” ನೀಡಲು (Book Award) ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಈ ಪ್ರಶಸ್ತಿಗಳು 2022-2023 ಮತ್ತು 2024ರ ಸಾಲಿನ ಪ್ರಕಟಣೆಗಳಿಗೆ ಸಂಬಂಧಿಸಿವೆ.

ಲೇಖಕರೇ ಗಮನಿಸಿ, ʼಕನ್ನಡ ಪುಸ್ತಕ ಸೊಗಸು’ ಬಹುಮಾನಗಳಿಗೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ

ಹರೀಶ್‌ ಕೇರ ಹರೀಶ್‌ ಕೇರ Mar 11, 2025 12:21 PM

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರದ (Kannada Pustaka Pradhikara) ವತಿಯಿಂದ 2022-2023 ಮತ್ತು 2024ರ ಕ್ಯಾಲೆಂಡರ್ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್) ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟ ಪರಿಗಣಿಸಿ ವಿವಿಧ “ಕನ್ನಡ ಪುಸ್ತಕ ಸೊಗಸು ಬಹುಮಾನ” ನೀಡಲು (Book Award) ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪ್ರಕಾಶಕರು/ ಮುದ್ರಕರು/ಕಲಾವಿದರು/ ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ.

ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಳಾಸ/ದೂರವಾಣಿ ಸಂಖ್ಯೆ- ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾರ್ಚ್ 29ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560 002 – ಈ ವಿಳಾಸಕ್ಕೆ ಕಳುಹಿಸಿಕೊಡಬಹುದು. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ. ಹಾಗೂ ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ,ಸಿ,ರಸ್ತೆ, ಬೆಂಗಳೂರು 560002-ವೆಬ್‍ಸೈಟ್ https://kpp.karnataka.gov.in ದೂರವಾಣಿ ಸಂಖ್ಯೆ: 080- 22482516ನ್ನು ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿದ್ದಾರೆ.

ಇದನ್ನೂ ಓದಿ: ಪುಸ್ತಕ ಓದಲು ಸಮಯ ಇಲ್ಲವೇ ? ಹೀಗೂ ಓದಬಹುದು ಪುಸ್ತಕ !