ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mogalli Ganesh: ಕಥೆಗಾರ, ವಿಮರ್ಶಕ ಮೊಗಳ್ಳಿ ಗಣೇಶ್‌ ಇನ್ನಿಲ್ಲ

Mogalli Ganesh: ಬಡ, ದಲಿತ ಕುಟುಂಬದಲ್ಲಿ ಜನಿಸಿದ ಮೊಗಳ್ಳಿ ಗಣೇಶ್‌, ಕನ್ನಡದ ಮುಖ್ಯ ಕತೆಗಾರರಲ್ಲಿ ಒಬ್ಬರಾಗಿ ಗುರುತಿಸಲ್ಪಟ್ಟಿದ್ದಾರೆ. ಅವರು ಬುಗುರಿ ಕತೆ ಸಾಕಷ್ಟು ಮೆಚ್ಚುಗೆ ಪಡೆದಿದೆ. ಅವರ ಆತ್ಮಕತೆ ʼನಾನೆಂಬುದು ಕಿಂಚಿತ್ತುʼ ಇತ್ತೀಚೆಗೆ ಬಿಡುಗಡೆಯಾಗಿದೆ. ಅವರು ಹಂಪಿ ವಿವಿಯಲ್ಲಿ ಪ್ರಧ್ಯಾಪಕರಾಗಿದ್ದರು.

ಕಥೆಗಾರ, ವಿಮರ್ಶಕ ಮೊಗಳ್ಳಿ ಗಣೇಶ್‌ ಇನ್ನಿಲ್ಲ

-

ಹರೀಶ್‌ ಕೇರ ಹರೀಶ್‌ ಕೇರ Oct 5, 2025 10:32 AM

ಬೆಂಗಳೂರು: ಕಥೆಗಾರ, ವಿಮರ್ಶಕ, ಕವಿ, ಹಂಪಿ ಯೂನಿವರ್ಸಿಟಿಯ ಪ್ರಾಧ್ಯಾಪಕರಾಗಿದ್ದ ಮೊಗಳ್ಳಿ ಗಣೇಶ್‌ (Mogalli Ganesh) ಇನ್ನಿಲ್ಲ. ಅಲ್ಪಕಾಲದ ಅಸೌಖ್ಯದಿಂದ ಅವರು ನಿಧನರಾಗಿದ್ದಾರೆ. ಇತ್ತೀಚೆಗೆ ತಾನೇ ಅವರ ಆತ್ಮಕತೆ ʼನಾನೆಂಬುದು ಕಿಂಚಿತ್ತುʼ ಬಿಡುಗಡೆಯಾಗಿತ್ತು. ಕನ್ನಡ ಕಥನ (Kannada literature) ಪರಂಪರೆಗೆ ಹೊಸತನ ನೀಡಿದ ಮೊಗಳ್ಳಿ ಗಣೇಶ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದ ಜಾನಪದ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು.

ಮೊಗಳ್ಳಿ ಗಣೇಶ್ 1963ರ ಜುಲೈ 1 ರಂದು ಚನ್ನಪಟ್ಟಣ ತಾಲ್ಲೂಕಿನ ಸಂತೆಮೊಗೇನ ಹಳ್ಳಿಯಲ್ಲಿ ಜನಿಸಿದರು. ಮೊಗಳ್ಳಿ ಗಣೇಶರು ಓದಿದ್ದು ಮೈಸೂರು ಮಹಾರಾಜಾ ಕಾಲೇಜಿನಲ್ಲಿ ಅರ್ಥಶಾಸ್ತ್ರ. ಅವರ ಬುಗುರಿ, ನನ್ನಜ್ಜನಿಗೊಂದಾಸೆಯಿತ್ತು, ಒಂದು ಹಳೆಯ ಚಡ್ಡಿ ಇತ್ಯಾದಿ ಕಥೆಗಳು ಕನ್ನಡದ ಅತ್ಯುತ್ತಮ ಸಣ್ಣ ಕಥೆಗಳಾಗಿ ಗುರುತಿಸಲ್ಪಟ್ಟಿವೆ. ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಯಲ್ಲಿ ಅವರ ಕಥೆಗಳು ನಾಲ್ಕು ಬಾರಿ ಬಹುಮಾನ ಪಡೆದಿದ್ದವು.

ಇದನ್ನೂ ಓದಿ: SL Bhyrappa: ಎಸ್‌ಎಲ್‌ ಭೈರಪ್ಪನವರ ಚಿತಾಭಸ್ಮ ಕಾವೇರಿ ನದಿಯಲ್ಲಿ ವಿಸರ್ಜನೆ

‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಅವರ ಕಾವ್ಯ ಸಂಕಲನಗಳು. ಬುಗುರಿ, ಮಣ್ಣು, ಅತ್ತೆ, ಭೂಮಿ, ಕನ್ನೆಮಳೆ, ದೇವರ ದಾರಿ, ಮೊಗಳ್ಳಿ ಕಥೆಗಳು (ಆವರೆಗಿನ ಬಹುಪಾಲು ಕಥೆಗಳ ಸಂಕಲನ) ಮುಂತಾದವು ಮೊಗಳ್ಳಿ ಗಣೇಶ್ ಅವರ ಕಥಾ ಸಂಕಲನಗಳು. ತೊಟ್ಟಿಲು, ಕಿರೀಟ ಅವರ ಕಾದಂಬರಿಗಳು. ‘ಬೇರು’ ಎಂಬ 986 ಅವರ ಬೃಹತ್ ಕಾದಂಬರಿ ತಯಾರಾಗಿದೆ. ‘ಕಥನ’ ಅವರ ಪ್ರಬಂಧ ಸಂಕಲನ. ‘ಸೊಲ್ಲು’, ‘ವಿಮರ್ಶೆ’, ‘ಶಂಬಾ ಭಾಷಿಕ ಸಂಶೋಧನೆ’, ‘ತಕರಾರು’ ಅವರ ವಿಮರ್ಶಾ ಕೃತಿಗಳು. ‘ಅಂಬೇಡ್ಕರ್ ಎಂಬ ಮಹಾನದಿ ಮತ್ತು ದಲಿತೀಕರಣಗೊಂಡ ಗಾಂಧೀಜಿ’ ಅವರ ಚಿಂತನ ಕೃತಿ.