ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ದುಬೈನಲ್ಲಿ ಸಂಕಷ್ಟದಲ್ಲಿರುವ ಪ್ರವಾಸಿಗರಿಗೆ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ ನೆರವು, ತುರ್ತು ಸಹಕಾರಕ್ಕಾಗಿ ಸರ್ಕಾರಕ್ಕೆ ಮನವಿ

ಯುಎಇನಲ್ಲಿರುವ ಸದ್ಯದ ಪರಿಸ್ಥಿತಿ, ಅಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರ ಮಾಹಿತಿ ಸಂಗ್ರಹಕ್ಕೆ ಅನಿವಾಸಿ ಕನ್ನಡಿಗರ ಪೋಷಕರಾದ ರೊನಾಲ್ಡ್ ಕೊಲಸೋ ಅವರ ನೇತೃತ್ವದ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡವು ಕರ್ನಾಟಕ ಸರ್ಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಯಾವುದೇ ರೀತಿಯ ಅಪಪ್ರಚಾರಗಳನ್ನು ನಂಬಬೇಡಿ, ಸುಳ್ಳು ಮಾಹಿತಿಗಳನ್ನು ಹರಡಬೇಡಿ ಎಂದು ಮನವಿ ಮಾಡಿದರು.

ದುಬೈ ಪ್ರವಾಸಿಗರ ನೆರವಿಗೆ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ

ಕನ್ನಡಿಗಾಸ್ ಹೆಲ್ಪ್ ಲೈನ್ ತಂಡ -

ದುಬೈ: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ (iran and israel conflict) ಕಾರಣದಿಂದ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ (Middle Eastern country) ಉಂಟಾಗಿರುವ ಅಸ್ಥಿರತೆಯ ಪರಿಣಾಮ ಸಾಕಷ್ಟು ದೇಶವಾಸಿಗಳು ಆತಂಕಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅನಿವಾಸಿ ಕನ್ನಡಿಗರ (Non-Resident Kannadigas) ಪೋಷಕರಾದ ರೊನಾಲ್ಡ್ ಕೊಲಸೋ ಅವರ ನೇತೃತ್ವದಲ್ಲಿ ಕನ್ನಡಿಗಾಸ್ ಹೆಲ್ಪ್ ಲೈನ್ ತಂಡವನ್ನು(Help line team) ರಚಿಸಲಾಗಿದ್ದು, ಈ ತಂಡವು ಯುಎಇಯಲ್ಲಿನ (UAE) ಸದ್ಯದ ಪರಿಸ್ಥಿತಿ ಕುರಿತು ಚರ್ಚಿಸಲು ಹಾಗೂ ಇಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರ ಮಾಹಿತಿ ಸಂಗ್ರಹಿಸಲು ಕರ್ನಾಟಕ ಸರ್ಕಾರದ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿತು.

ಸಭೆಯಲ್ಲಿ ಮಾತನಾಡಿದ ಯುಎಇಯ ಅನಿವಾಸಿ ಕನ್ನಡಿಗರಿಗೆ ಕರ್ನಾಟಕ ಎನ್ಆರೈ ಫೋರಂ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಯುಎಇಯಲ್ಲಿರುವ ಎಲ್ಲಾ ಅನಿವಾಸಿ ಕನ್ನಡಿಗರು ಸುರಕ್ಷಿತವಾಗಿದ್ದು, ಇಲ್ಲಿನ ಸರ್ಕಾರ ಎಲ್ಲ ಅನಿವಾಸಿಗಳ ಸುರಕ್ಷತೆಯನ್ನು ಸಮರ್ಪಕವಾಗಿ ಕಾಪಾಡುತ್ತಿದೆ. ಯಾವುದೇ ಆತಂಕಕ್ಕೆ ಒಳಗಾಗದೆ ಅನಧಿಕೃತ ಅಥವಾ ಅಪಪ್ರಚಾರದ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳು ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಳ್ಳಬಾರದು ಎಂದು ತಿಳಿಸಿದರು.

ಇರಾನ್ ಸಂಘರ್ಷದಲ್ಲಿ ಮೂರು ಅಮೆರಿಕನ್‌ ಸೈನಿಕರು ಸಾವು, ಐವರಿಗೆ ಗಂಭೀರ ಗಾಯ: ದೃಢಪಡಿಸಿದ ಯುಎಸ್

ರೊನಾಲ್ಡ್ ಕೊಲಸೋ ಅವರು ಮಾತನಾಡಿ, ಯುಎಇ ಅತ್ಯಂತ ಸುರಕ್ಷಿತ ದೇಶ, ಪರಿಸ್ಥಿತಿ ಶೀಘ್ರದಲ್ಲೇ ಮೊದಲಿನಂತೆ ಆಗುತ್ತದೆ. ಎಲ್ಲರೂ ಯುಎಇ ಸರ್ಕಾರದ ಮಾರ್ಗದರ್ಶನ ಪಾಲಿಸಿ ಸಹಕರಿಸಬೇಕು ಎಂದ ಅವರು, ಈಗ ಸಂಕಷ್ಟದಲ್ಲಿರುವ ಪ್ರವಾಸಿಗರಿಗೆ ತುರ್ತು ವ್ಯವಸ್ಥೆಯನ್ನು ಕಲ್ಪಿಸಬೇಕಿದೆ. ಇದಕ್ಕೆ ಬೇಕಾದ ವೆಚ್ಚವನ್ನು ಭರಿಸಲು ನಾನು ತಯಾರಿದ್ದೇನೆ. ಅದೇ ರೀತಿ ಕರ್ನಾಟಕ ಸರ್ಕಾರ ತುರ್ತು ಪರಿಹಾರ ಸಹಾಯಧನ ಘೋಷಣೆ ಮಾಡಲು ಒತ್ತಾಯಿಸುತ್ತೇನೆ ಎಂದು ಹೇಳಿದರು.

ದುಬೈನಲ್ಲಿ ಸಿಲುಕಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೆಗೌಡ ಅವರು ಮಾತನಾಡಿ, ಪರಿಸ್ಥಿತಿ ಬೇಗನೆ ತಿಳಿಯಾಗಲಿದೆ. ಸಂಕಷ್ಟದಲ್ಲಿರುವ ಪ್ರವಾಸಿ ಕನ್ನಡಿಗರಿಗೆ ಸಹಾಯ ಹಸ್ತವಾಗಿ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ 2 ಕೋಟಿ ತುರ್ತು ಪರಿಹಾರ ಘೋಷಿಸಿ ಎಂದು ಒತ್ತಾಯಿಸಿದ್ದೇವೆ. ಅವರು ಮುಖ್ಯಮಂತ್ರಿ ಜೊತೆ ಕೂಡಲೇ ಮಾತನಾಡಿ ಪರಿಹಾರ ಘೋಷಿಸುವ ಭರವಸೆ ನೀಡಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯೆ, ಕೆಎನ್ಆರೈ ಉಪಾಧ್ಯಕ್ಷೆ ಆರತಿ ಕೃಷ್ಣ ಮಾತನಾಡಿ, ಯುಎಇ ಸೇರಿದಂತೆ ಗಲ್ಫ್ ರಾಷ್ಟ್ರಗಳ ಎಲ್ಲಾ ದೂತಾವಾಸಗಳೊಂದಿಗೆ, ಅಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗ ರೊಂದಿಗೆ ನಾನು ನಿರಂತರ ಸಂಪರ್ಕದಲ್ಲಿ ಇದ್ದೇನೆ. ರಾಜ್ಯ ಸರ್ಕಾರದೊಂದಿಗೂ ಮಾಹಿತಿ ಹಂಚಿಕೊಳ್ಳುತ್ತಿರುವೆ. ಕನ್ನಡಿಗಾಸ್ ಹೆಲ್ಪ್ ಲೈನ್ ತಂಡಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ತಿಳಿಸಿದರು.

ಕನ್ನಡಿಗಾಸ್ ಹೆಲ್ಪ್ ಲೈನ್ ಸಂಯೋಜಕರು, ಬಿಸಿಸಿಐ ಯುಎಇ ಅಧ್ಯಕ್ಷರಾದ ಹಿದಾಯತ್ ಅಡ್ಡೂರು ಮಾತನಾಡಿ, ಸಂಕಷ್ಟದಲ್ಲಿದ್ದ ಹಲವಾರು ಪ್ರವಾಸಿ ಕನ್ನಡಿಗರನ್ನು ಭೇಟಿಯಾಗಿ ಧೈರ್ಯ ತುಂಬುವ ಕೆಲಸ ಮಾಡುತಿದ್ದು, ತಾಯ್ನಾಡಿಗೆ ವಾಪಸ್ ತೆರಳದೇ ಸಿಲುಕಿರುವ ಕನ್ನಡಿಗರಿಗೆ ಯಾವುದೇ ವೈದ್ಯಕೀಯ ಸೇವೆ ಬೇಕಿದ್ದಲ್ಲಿ ಕನ್ನಡಿಗಾಸ್ ಹೆಲ್ಪ್ ಲೈನ್ ಸಂಪೂರ್ಣವಾಗಿ ಮಾಡಿಕೊಡಲಿದೆ ಎಂದು ತಿಳಿಸಿದರು.

ಕರ್ನಾಟಕ ಸಂಘ ದುಬೈ ಅಧ್ಯಕ್ಷ ಶಶಿಧರ ನಾಗರಾಜಪ್ಪ ಅವರು, ಯುಎಇಯಲ್ಲಿ ಸಿಲುಕಿರುವ ಕನ್ನಡಿಗರು ಕನ್ನಡಿಗಾಸ್ ಹೆಲ್ಪ್ ಲೈನ್ ತಂಡವನ್ನು ಸಂಪರ್ಕಿಸಿ. ದುಬೈ, ಶಾರ್ಜ, ಅಬುಧಾಬಿ, ಅಜ್ಮಾನ್ ಎಲ್ಲೇ ಇದ್ದರೂ ನಮ್ಮ ತಂಡ ನಿಮ್ಮನ್ನು ಸಂಪರ್ಕಿಸಿ, ಸಹಕರಿಸಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಈ ಕೆಲಸದಲ್ಲಿ ನಿರತವಾಗಿದೆ ಎಂದು ತಿಳಿಸಿದರು.

ಅನಿಶ್ಚಿತತೆ, ಆತಂಕ: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆ ವಿಮಾನಯಾನ ಪುನಾರಂಭಕ್ಕೆ ಕಾಯುತ್ತಿರುವ ಸಾವಿರಾರು ಭಾರತೀಯರು

ಸಭೆಯಲ್ಲಿ ಹೆಲ್ಪ್ ಲೈನ್ ತಂಡದ ದಯಾ ಕಿರೋಡಿಯನ್, ಚಂದ್ರು ಲಿಂಗದಳ್ಳಿ, ಮಲ್ಲಿಕಾರ್ಜುನ ಗೌಡ, ಇಮ್ರಾನ್ ಖಾನ್, ಶ್ವೇತಾ ಜಾಧವ್, ಮನೋಹರ್ ಹೆಗ್ಡೆ, ನಾಗರಾಜ ರಾವ್, ಸಮದ್ ಬಿರಾಲಿ, ಸಲೀಂ ಮೂಡಬಿದ್ರೆ, ಸಂಶುದ್ದೀನ್ ಪಿಲಿಗೂಡು, ರಾಕ್ ಕರ್ನಾಟಕ ಸಂಘದ ಅಧ್ಯಕ್ಷ ರಮೇಶ್ ರಂಗಪ್ಪ, ಕನ್ನಡ ಪಾಠಶಾಲೆ ದುಬೈಯ ಗಿರೀಶ್ ವೊರಟೆ, ಗಿರೀಶ್ ಪಟ್ವಾರಿ, ಗವಾಸ್ಕರ್, ಸಿದ್ಧಲಿಂಗೇಶ್, ರೂಪ ಶಶಿಧರ್, ಫಿರೋಜ್ ಉಪಸ್ಥಿತರಿದ್ದರು.