ಬೆಂಗಳೂರು, ಡಿ.27: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ (Temperature) ಕನಿಷ್ಠ ಮಟ್ಟಕ್ಕೆ ಕುಸಿಯುತ್ತಿದೆ. ಡಿಸೆಂಬರ್ 31 ಹಾಗೂ ಜನವರಿ 1ರಂದು ಹಲವು ಜಿಲ್ಲೆಗಳಲ್ಲಿ (Karnakata Weather) ಹಗುರವಾಗಿ ಮಳೆಯಾಗುವ (Rain) ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಏರಿಕೆ ಕಾಣಲಿದೆ. ರಾಜ್ಯದ ಬಯಲು ಪ್ರದೇಶಗಳ ಪೈಕಿ ವಿಜಯಪುರದಲ್ಲಿ 9.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ (cold) ದಾಖಲಾಗಿದೆ.
ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಂಜು ಕವಿದಿತ್ತು. ಒಳನಾಡಿನ ಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4-6 ಡಿಗ್ರಿ ಸೆಲ್ಸಿಯಸ್‌ವರೆಗೆ ಕಡಿಮೆಯಾಗಿದೆ. ಬಂಗಾಳಕೊಲ್ಲಿಯ ನೈಋತ್ಯ ಮತ್ತು ಅದಕ್ಕೆ ಹೊಂದಿಕೊಂಡ ಉತ್ತರ ತಮಿಳುನಾಡಿನ ಮೇಲೆ ವಾಯುವ್ಯ ಚಂಡಮಾರುತದ ಪ್ರಸರಣವು ದಕ್ಷಿಣ ತಮಿಳುನಾಡಿನ ಮೇಲೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿ ಕಡಿಮೆಯಾಗಿದೆ. ಕೆಳ ಉಷ್ಣವಲಯದ ಮಟ್ಟದಲ್ಲಿ ರಾಜ್ಯದಾದ್ಯಂತ ದಕ್ಷಿಣ ಪೂರ್ವ ದಿಕ್ಕಿನ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹೇಳಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 31 ಹಾಗೂ ಜನವರಿ 1ರಂದು ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಮಂಡ್ಯ, ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆಯೊಂದಿಗೆ ತುಸು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಚಳಿ ಚಳಿ ತಾಳೆನು ಈ ಚಳಿಯ...ಚಳಿಯಿಂದ ನಿಮ್ಮ ಅರೋಗ್ಯವನ್ನು ಹೀಗೆ ಕಾಪಾಡಿಕೊಳ್ಳಿ
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ವಾತಾವರಣ ಮುಂದುವರಿಯಲಿದೆ. ಉತ್ತರ ಆಂತರಿಕ ಕರ್ನಾಟಕದ ಬೀದರ್‌ನಲ್ಲಿ ಶೀತ ಅಲೆಗಳ ಪರಿಸ್ಥಿತಿ ಇದೆ. ನೈಜ ಸಮಯದ ಮಾಹಿತಿಯ ಆಧಾರದ ಮೇಲೆ, ವಿಜಯಪುರ, ಬೀದರ್, ಬೆಳಗಾವಿಯಲ್ಲಿ ಕನಿಷ್ಠ ತಾಪಮಾನವು 8-12 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ. ಬೆಳಗಾವಿ ವಿಮಾನ ನಿಲ್ದಾಣ, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಒಳ ಕರ್ನಾಟಕದ ರಾಯಚೂರು ಮತ್ತು ಹಾಸನ, ಮೈಸೂರು, ಶಿವಮೊಗ್ಗ, ಮಂಡ್ಯ, ದಕ್ಷಿಣ ಆಂತರಿಕ ಕರ್ನಾಟಕದ ದಾವಣಗೆರೆ, ಕಲಬುರಗಿ ಮತ್ತು ಕೊಪ್ಪಳದ ಉತ್ತರ ಒಳಭಾಗ, ಚಿಂತಾಮಣಿ, ಚಿತ್ರದುರ್ಗ, ಬೆಂಗಳೂರು ಏರ್‌ಪೋರ್ಟ್, ಬೆಂಗಳೂರು ನಗರ, ಕರಾವಳಿ ಕರ್ನಾಟಕದ ಹೊನ್ನಾವರ, ಕಾರವಾರ, ಮಂಗಳೂರು ಭಾಗದಲ್ಲಿ ತಾಪಮಾನ ಕಡಿಮೆಯಾಗಿದೆ.
ಕನಿಷ್ಠ ತಾಪಮಾನ ಎಲ್ಲೆಲ್ಲಿ?
ಕರ್ನಾಟಕದ ದಕ್ಷಿಣ ಒಳನಾಡಿನ ಹಾಸನದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದೆ. ಉತ್ತರ ಒಳನಾಡಿನ ಬೀದರ್, ವಿಜಯಪುರ, ರಾಯಚೂರು, ಬೆಳಗಾವಿ ವಿಮಾನ ನಿಲ್ದಾಣ ಮತ್ತು ಗದಗ ಮತ್ತು ದಕ್ಷಿಣ ಒಳನಾಡಿನ ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಕಡಿಮೆಯಾಗಿದ್ದವು. ಕರಾವಳಿ ಕರ್ನಾಟಕದ ಹೊನ್ನಾವರ ಮತ್ತು ಕಾರವಾರ, ಉತ್ತರ ಒಳನಾಡಿನ ಧಾರವಾಡ ಮತ್ತು ಹಾವೇರಿ ಮತ್ತು ದಾವಣಗೆರೆ ಮತ್ತು ದಕ್ಷಿಣ ಒಳನಾಡಿನ ಮಂಡ್ಯದಲ್ಲೂ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆಯಾಗಿದ್ದವು. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಮುಂದುವರಿದಿದೆ.
Winter Hoodie Fashion: ಚಳಿ-ಗಾಳಿಗೆ ಹೂಡಿ ಫ್ಯಾಷನ್ ತಮ್ಮದಾಗಿಸಿಕೊಳ್ಳಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಶುಭ್ರ ಆಕಾಶ ಇರಲಿದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟವಾದ ಮಂಜು ಕವಿಯುವ ಸಾಧ್ಯತೆ ಇದೆ. ಈ ವೇಳೆ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಮತ್ತು 16 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಕಳೆದ 24 ಗಂಟೆಗಳಲ್ಲಿ, ಬೆಂಗಳೂರಿನ ದಕ್ಷಿಣ ಒಳನಾಡಿನ ಬೆಂಗಳೂರು ಏರ್‌ಪೋರ್ಟ್ ವ್ಯಾಪ್ತಿಯಲ್ಲಿ ತಾಪಮಾನ ಗಣನೀಯವಾಗಿ ಏರಿಕೆ ಕಂಡುಬಂದಿದೆ. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.