ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

Karnataka 2nd PUC Exam 2 Result: ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶವನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುರುವಾರ (ಮೇ 21) ಪ್ರಕಟಿಸಿದೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ಒಟ್ಟು 80,535 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 21: ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶವನ್ನು (Karnataka 2nd PUC Exam 2 Result) ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುರುವಾರ (ಮೇ 21) ಪ್ರಕಟಿಸಿದೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ಒಟ್ಟು 80,535 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 36,764 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆ ಮೂಲಕ ಶೇಕಡ 45.65 ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ - 2 ಏಪ್ರಿಲ್‌ 30ರಿಂದ ಮೇ 13ರವರೆಗೆ 253 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. 2ನೇ ಪರೀಕ್ಷೆಯಲ್ಲಿ ಶೇಕಡ 44.72 ಬಾಲಕರು ಉತ್ತೀರ್ಣರಾದರೆ, ಬಾಲಕಿಯ ಪ್ರಮಾಣ ಶೇಕಡ 45.74ರಷ್ಟು.

ಫಲಿತಾಂಶ ಹೀಗೆ ಪರಿಶೀಲಿಸಿ

ಶಿಕ್ಷಣ ಮಂಡಳಿಯ ಅಧಿಕೃತ ವೆಬ್ ಸೈಟ್kseab.karnataka.gov.in ಮತ್ತುkarresults.nic.inನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಹಾಕುವ ಮೂಲಕ ವೀಕ್ಷಿಸಬಹುದು. ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಫಲಿತಾಂಶ ನೋಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಇನ್ನು ಶೇಕಡ 85ಕ್ಕಿಂತ ಹೆಚ್ಚು ಅಂಕಗಳನ್ನು 62 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದವರು 8,086 ಅಭ್ಯರ್ಥಿಗಳು. 16,940 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಪಡೆದುಕೊಂಡಿದ್ದಾರೆ. ಶೇಕಡ 50ಕ್ಕಿಂತ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳ ಸಂಖ್ಯೆ 11,676.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್; ಜಿಲ್ಲಾವಾರು ಪಟ್ಟಿ ಇಲ್ಲಿದೆ

ಮೊದಲ ಪ್ರಯತ್ನದಲ್ಲಿ ಶೇ. 86.48 ವಿದ್ಯಾರ್ಥಿಗಳು ತೇರ್ಗಡೆ

2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್‌ 9ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿತ್ತು. ಈ ಬಾರಿ ಶೇಕಡ 86.48 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷಕ್ಕಿಂತ ಶೇಕಡ12.50 ಫಲಿತಾಂಶ ಏರಿಕೆ ಕಂಡಿತ್ತು.

ಕಳೆದ ವರ್ಷ 73.45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಅದು ಶೇಕಡ 86.48ಕ್ಕೆ ಏರಿಕೆಯಾಗಿತ್ತು. ಉಡುಪಿ ಜಿಲ್ಲೆ ಶೇಕಡ 96.39 ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಶೇಕಡ 96.35 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿತ್ತು. ಇನ್ನು ಶೇ. 71.21 ರಿಸಲ್ಟ್‌ನೊಂದಿಗೆ ಯಾದಗಿರಿ ಕೊನೆಯ ಸ್ಥಾನದಲ್ಲಿತ್ತು.

ಈ ಬಾರಿ ಒಟ್ಟು 6,48,853 ಮಂದಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಎಂದಿನಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದು, ಶೇಕಡ 88.70 ಬಾಲಕಿಯರು ಉತ್ತೀರ್ಣರಾಗಿದ್ದು, ಶೇಕಡ 83.65 ಬಾಲಕರು ಉತ್ತೀರ್ಣರಾಗಿದ್ದರು.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author