ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka Assembly Bypoll: ವಿಧಾನಸಭೆ ಉಪಚುನಾವಣೆ: ಬಾಗಲಕೋಟೆಗೆ ವೀರಣ್ಣ, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ್ ಟಿ. ಬಿಜೆಪಿ ಅಭ್ಯರ್ಥಿ

ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿಯಾಗಿ ಬಿಜೆಪಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್​ ನೀಡಿದೆ. ಆದರೆ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ಹೆಸರು ಇನ್ನೂ ಅಂತಿಮವಾಗಿಲ್ಲ.

ವೀರಣ್ಣ ಚರಂತಿಮಠ, ಶ್ರೀನಿವಾಸ್‌ ದಾಸಕರಿಯಪ್ಪ

ಬೆಂಗಳೂರು, ಮಾ.19: ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿರುವ ಬಾಗಲಕೋಟೆ (Bagalakote) ಮತ್ತು ದಾವಣಗೆರೆ (Davanagere) ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ (Karnataka Assembly Bypoll) ಬಿಜೆಪಿ (BJP) ತನ್ನ ಅಭ್ಯರ್ಥಿಗಳ (Cadidates) ಪಟ್ಟಿಯನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಹುಲಿ ಮತ್ತು ಹೊಸ ಮುಖಕ್ಕೆ ಅವಕಾಶ ನೀಡಿದೆ. ಬಾಗಲಕೋಟೆಯಲ್ಲಿ ವೀರಣ್ಣ ಚರಂತಿಮಠ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿಯಾಗಿ ಬಿಜೆಪಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್​ ನೀಡಿದೆ.

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರಿಗೆ ಬಿಜೆಪಿ ಮತ್ತೆ ಮಣೆ ಹಾಕಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ ಬಿಜೆಪಿ ಈ ನಿರ್ಧಾರ ತೆಗೆದುಕೊಂಡಿದೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನ ನಂತರ ಉಪಚುನಾವಣೆ ಘೋಷಣೆಯಾದ ನಂತರ ಕಾಂಗ್ರೆಸ್​​​​ನಲ್ಲಿ ಭಾರೀ ಗದ್ದಲ ಉಂಟಾಗಿದೆ. ಇದರ ನಡುವೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡುವ ಮೂಲಕ ರಾಜಕೀಯ ನೇರ ಪೈಪೋಟಿಗೆ ವೇದಿಕೆ ಸಿದ್ಧ ಮಾಡಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿಯಾಗಿ ಬಿಜೆಪಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್​ ನೀಡಿದೆ. ಇಲ್ಲಿ ಬಿಜೆಪಿ ‘ವಾಲ್ಮೀಕಿ’ (ST) ಸಮುದಾಯಕ್ಕೆ ಆದ್ಯತೆ ನೀಡಿದೆ. ಎಸ್.ಟಿ ಮತಗಳನ್ನು ಸೆಳೆಯುವ ಉದ್ದೇಶದಿಂದ ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ಕಣಕ್ಕಿಳಿಸಲಾಗಿದ್ದು, ಕ್ಷೇತ್ರದಲ್ಲಿ ಸಾಮಾಜಿಕ ಸಮತೋಲನ ಕಾಪಾಡಲು ಬಿಜೆಪಿ ಪ್ರಯತ್ನಿಸಿದೆ ಎಂದು ಹೇಳಲಾಗಿದೆ. ಇಲ್ಲಿಯೂ ಕೂಡ ಈ ಹಿಂದೆ ಕಾಂಗ್ರೆಸ್​​​ ಪ್ರಬಲ್ಯ ಇತ್ತು. ಕಾಂಗ್ರೆಸ್​​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನವಾದ ನಂತರ ಇಲ್ಲಿಯೂ ಕೂಡ ಕಾಂಗ್ರೆಸ್​​​ಗೆ ಇಲ್ಲಿ ಅಭ್ಯರ್ಥಿ ಆಯ್ಕೆ ತಲೆನೋವಾಗಿದೆ.

BJP Karnataka: ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ

ದಾವಣಗೆರೆ ಕಾಂಗ್ರೆಸ್ ತೆಕ್ಕೆಯಲ್ಲಿ ಇತ್ತು. ಈ ಕಾರಣಕ್ಕೆ ಕಾಂಗ್ರೆಸ್​​ ಮತ್ತು ಬಿಜೆಪಿ ನಡುವೆ ಭಾರೀ ಜಿದ್ದಾಜಿದ್ದಿ ನಡೆಯಲಿದೆ. ಇಲ್ಲಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರಿಗೆ ಟಿಕೆಟ್​​ ನೀಡುವ ಮೂಲಕ ಬಿಜೆಪಿ ಹೊಸ ಪ್ರಯೋಗವೊಂದನ್ನು ಮಾಡಲು ಮುಂದಾಗಿದೆ. ಕ್ಷೇತ್ರದಲ್ಲಿ ಎಸ್‌ಟಿ ಮತಗಳು ನಿರ್ಣಾಯಕವಾಗಿರುವುದರಿಂದ ಬಿಜೆಪಿ ಈ ತಂತ್ರ ಹೂಡಿದೆ ಎಂದು ಹೇಳಲಾಗಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದ ತಂಡ ಅಜಯಕುಮಾರ್ ಅವರಿಗೆ ಟಿಕೆಟ್ ಕೊಡಿಸಲು ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಠಿಕಾಣಿ ಹೂಡಿತ್ತು. ಆದರೆ, ಹೈಕಮಾಂಡ್ ರೇಣುಕಾಚಾರ್ಯ ಅವರ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ದಾಸ ಕರಿಯಪ್ಪ ಪ್ರಸ್ತುತ ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾದ ಉಪಾಧ್ಯಕ್ಷರಾಗಿದ್ದಾರೆ.

ಕಾಂಗ್ರೆಸ್​​​ನಲ್ಲಿ ಇನ್ನೂ ಗೊಂದಲ

ಕಾಂಗ್ರೆಸ್​​​ನ ಅಭ್ಯರ್ಥಿ ಆಯ್ಕೆಯಲ್ಲಿ ಮುಸುಕಿನ ಗುದ್ದಾಟಗಳು ನಡೆಯುತ್ತಿವೆ. ದಾವಣಗೆರೆಯಲ್ಲಿ, ಸಚಿವರಾದ ಜಮೀರ್ ಅಹಮ್ಮದ್ ಖಾನ್, ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರೆ ಇನ್ನೊಂದೆಡೆ ಎಸ್​​ಎಸ್​ ಮಲ್ಲಿಕಾರ್ಜುನ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಜಿ ಶಾಸಕ ಎಚ್.ವೈ. ಮೇಟಿ ಅವರ ನಿಧನದ ನಂತರ ಅವರ ಕುಟುಂಬದಲ್ಲೇ ಗೊಂದಲಗಳು ಶುರುವಾಗಿದೆ. ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ, ಮಹಾದೇವಿ ಅವರು ನಮ್ಮ ಕುಟುಂಬಕ್ಕೆ ಟಿಕೆಟ್​​ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಹರೀಶ್‌ ಕೇರ

View all posts by this author