ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Bandh: ಅಖಂಡ ಕರ್ನಾಟಕ ಬಂದ್‌ ಆರಂಭ, ಅಂಗಡಿ ಮುಂಗಟ್ಟುಗಳು ಕ್ಲೋಸ್

ಬಂದ್ ಹಿನ್ನೆಲೆ ಬೆಂಗಳೂರಲ್ಲಿ ಖಾಸಗಿ ಬಸ್, ವಾಹನಗಳು, ಓಲಾ ಉಬರ್ ಹಾಗೂ ಆಟೋಗಳ ಓಡಾಟ ಸ್ಥಗಿತವಾಗಿದೆ. ಕೆಎಸ್ಆರ್ಟಿಸಿ ಬಿಎಂಟಿಸಿಗಳು ಎಂದಿನಂತೆ ಸಂಚಾರ ನಡೆಸಿದವಾದರೂ ಜನರ ಸಂಖ್ಯೆ ಕಡಿಮೆಯಾಗಿತ್ತು. ಮಧ್ಯಾಹ್ನದವರೆಗೆ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಗಳು ಕ್ಯಾನ್ಸಲ್ ಆಗಿವೆ. ಟೌನ್ ಹಾಲಿನಿಂದ ಬೆಳಿಗ್ಗೆ 6 ಗಂಟೆಯಿಂದ ಬೃಹತ್ ರ‍್ಯಾಲಿ ನಡೆಯಲಿದೆ. ಹಾಗಾಗಿ ಬೆಳಿಗ್ಗೆಯಿಂದಲೇ ಸಾರ್ವಜನಿಕರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ.

ಅಖಂಡ ಕರ್ನಾಟಕ ಬಂದ್‌ ಆರಂಭ, ಅಂಗಡಿ ಮುಂಗಟ್ಟುಗಳು ಕ್ಲೋಸ್

ಹರೀಶ್‌ ಕೇರ ಹರೀಶ್‌ ಕೇರ Mar 22, 2025 7:01 AM

ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ನೇತೃತ್ವದಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್‌ಗೆ (Karnataka bandh) ಕರೆ ನೀಡಲಾಗಿದೆ. ಬಂದ್‌ ಹಿನ್ನೆಲೆಯಲ್ಲಿ ಇಂದು ಬೆಂಗಳೂರು, ಮೈಸೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಮುಂಜಾನೆ ಯಾವುದೇ ಹೆಚ್ಚಿನ ಚಟುವಟಕೆ ಕಂಡುಬರಲಿಲ್ಲ. ಅಂಗಡಿ ಮುಂಗಟ್ಟುಗಳು (Shops closed) ಮುಚ್ಚಿದ್ದವು. ಅಗತ್ಯ ಸೇವೆಗಳು (essential service) ಮಾತ್ರ ತೆರೆದಿದ್ದವು.

ಬಂದ್ ಹಿನ್ನೆಲೆ ಬೆಂಗಳೂರಲ್ಲಿ ಖಾಸಗಿ ಬಸ್, ವಾಹನಗಳು, ಓಲಾ ಉಬರ್ ಹಾಗೂ ಆಟೋಗಳ ಓಡಾಟ ಸ್ಥಗಿತವಾಗಿದೆ. ಕೆಎಸ್ಆರ್ಟಿಸಿ ಬಿಎಂಟಿಸಿಗಳು ಎಂದಿನಂತೆ ಸಂಚಾರ ನಡೆಸಿದವಾದರೂ ಜನರ ಸಂಖ್ಯೆ ಕಡಿಮೆಯಾಗಿತ್ತು. ಮಧ್ಯಾಹ್ನದವರೆಗೆ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಗಳು ಕ್ಯಾನ್ಸಲ್ ಆಗಿವೆ. ಟೌನ್ ಹಾಲಿನಿಂದ ಬೆಳಿಗ್ಗೆ 6 ಗಂಟೆಯಿಂದ ಬೃಹತ್ ರ‍್ಯಾಲಿ ನಡೆಯಲಿದೆ. ಹಾಗಾಗಿ ಬೆಳಿಗ್ಗೆಯಿಂದಲೇ ಸಾರ್ವಜನಿಕರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ.

ಬಂದ್ ವೇಳೆಯಲ್ಲಿ ಹೋಟೆಲ್‌ಗಳು ಕ್ಲೋಸ್ ಆದ ಕಾರಣ ಇವುಗಳನ್ನೇ ನಂಬಿದ ಜನರು ಪರದಾಡಿದರು. ಸಿನಿಮಾ ಥಿಯೇಟರ್ ಬಂದ್ ಆಗಿದ್ದು, ಸರ್ಕಾರಿ ಕಚೇರಿಗಳು ತೆರೆದಿರುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಖಾಸಗಿ ಸಾರಿಗೆ ಬಸ್ ಸಂಚಾರ ಕಂಡುಬಂದಿಲ್ಲ. ಓಲಾ, ಉಬರ್, ಆಟೋ, ಲಾರಿ ಸಂಚಾರ ಬಹುತೇಕ ಸ್ಥಗಿತವಾಗಿದ್ದು, ಮಾಲ್‌ಗಳು ಕ್ಲೋಸ್ ಆಗಿವೆ.

ಮೆಡಿಕಲ್ ಶಾಪ್‌ಗಳು, ಹಾಲಿನ ಬೂತ್‌ಗಳು ತೆರೆದಿದ್ದವು. ಹಣ್ಣು-ತರಕಾರಿ ಅಂಗಡಿಗಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಅಗತ್ಯ ವಸ್ತುಗಳ ಪೂರೈಕೆ ಸೇವೆ ಎಂದಿನಂತೆ ಇರಲಿದೆ. ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ ಆಗದು.

ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ‘ಕನ್ನಡ ಒಕ್ಕೂಟ- ಕರ್ನಾಟಕ ರಾಜ್ಯ’ದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ‘ಕರ್ನಾಟಕ ಬಂದ್‌’ಗೆ ಕರೆ ನೀಡಿದ್ದರು. ಅಖಂಡ ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ ಎಂದು ಚಾಲಕರ ಒಕ್ಕೂಟ ತಿಳಿಸಿದೆ. ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದ ಸ್ವಾಮಿ ಮತ್ತು ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ಅಧ್ಯಕ್ಷ ಸಂತೋಷ್ ಕುಮಾರ್ ಅವರು ಬಂದ್‌ಗೆ ಬೆಂಬಲ ಇಲ್ಲ ಎಂದಿದ್ದಾರೆ.

ಈ ಬಂದ್ ಚಾಲಕರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುವಂತಿದೆ. ಬೆಂಗಳೂರಿನಲ್ಲಿ 75 ಸಾವಿರಕ್ಕೂ ಅಧಿಕ ಆಟೋಗಳು ಸಂಚರಿಸುತ್ತಿವೆ. 2.5 ಲಕ್ಷಕ್ಕೂ ಅಧಿಕ ಕುಟುಂಬಗಳು ಚಾಲಕ ವೃತ್ತಿಯನ್ನು ಅವಲಂಬಿಸಿದ್ದಾರೆ. ಬಂದ್‌ನಿಂದ ಇವರ ಬದುಕು ದುಸ್ತರವಾಗಲಿದೆ. ಔಷಧ, ತರಕಾರಿ, ಹಾಲು, ಅಗತ್ಯ ವಸ್ತುಗಳ ಸಾಗಣೆ, ಶಾಲಾ ವಾಹನಗಳು ಸೇವೆ ಸ್ಥಗಿತಗೊಳಿಸಿದರೆ ಜೀವನ ನಿರ್ವಹಣೆ ಕಷ್ಟವಾಗುತ್ತದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ: Karnataka bandh: ಕರ್ನಾಟಕ ಬಂದ್‌; ನಾಳೆ ಶಾಲೆಗಳಿಗೆ ರಜೆ ಇರುತ್ತಾ? ಶಿಕ್ಷಣ ಸಚಿವರು ಹೇಳಿದ್ದೇನು?