ಬಸವಕಲ್ಯಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರಿಗೆ ಬಸವಕಲ್ಯಾಣ ಕ್ಷೇತ್ರದಲ್ಲಿ ಕೆಲವು ಬೇಡಿಕೆಗಳನ್ನು ಇಟ್ಟಿದ್ದೆವು. ನಮ್ಮ ಕ್ಷೇತ್ರದ ಬೇಡಿಕೆಗಳು ಈಡೇರಿದ್ದಕ್ಕೆ ತುಂಬಾ ಹರ್ಷವಾಗಿದೆ ಎಂದು ಮಾಜಿ ಎಂಎಲ್‌ಸಿ ವಿಜಯ್ ಸಿಂಗ್, ಬಜೆಟ್ (Karnataka Budget 2025) ಮಂಡನೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆಯಡಿ ಬಸವಕಲ್ಯಾಣದ ತಾಲೂಕು ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಅಲ್ಲದೇ ತಾಲೂಕಿನ ಕೊಂಗಳಿ ಕೆರೆ ತುಂಬಿಸುವ ಯೋಜನೆ ಘೋಷಣೆ ಮಾಡಲಾಗಿದೆ. ಬೀದರ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸಿದ್ದಾರೆ. ನೂತನ ಹುಲಸೂರು ತಾಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕಾಗಿ ಅನುಮೋದನೆ ನೀಡಿದ್ದಾರೆ. ಬಸವಕಲ್ಯಾಣದ ಅನುಭವ ಮಂಟಪ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಈಗಾಗಲೇ ಭರವಸೆ ನೀಡಿದ್ದಾರೆ.
ಕ.ಕ ಭಾಗದಲ್ಲಿ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳು. ನಗರ ಆರೋಗ್ಯ ಕೇಂದ್ರಗಳು. ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಮೇಲ್ದರ್ಜೆಗೇರಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಸಮಾಜಮುಖಿ ಬಜೆಟ್ ಆಗಿದೆ. ಎಲ್ಲ ವರ್ಗಗಳು, ಸಮುದಾಯಕ್ಕೂ ಅನುದಾನ ಕೊಟ್ಟಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಅನೇಕ ಯೋಜನೆ ಘೋಷಣೆ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳು ಇದ್ದರೂ ಇಷ್ಟು ದೊಡ್ಡ ಮೊತ್ತದ ಬಜೆಟ್ ಕೊಟ್ಟಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Namma Metro: ನಾಳೆ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ಸ್ಥಗಿತ: ವಿವರ ಇಲ್ಲಿದೆ