ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Budget 2025: ಸಾಮಾಜಿಕ ಕಳಕಳಿ, ಉದ್ಯಮಸ್ನೇಹಿ ಬಜೆಟ್: ಎಂ.ಬಿ.ಪಾಟೀಲ್‌

Karnataka Budget 2025: ಸಿದ್ದರಾಮಯ್ಯ ಅವರು 1995ರಲ್ಲಿ ಮೊದಲ ಬಾರಿ ಬಜೆಟ್ ಮಂಡಿಸಿದಾಗ ಅದರ ಗಾತ್ರ 12 ಸಾವಿರ ಕೋಟಿ ರೂ.ಗಳಿತ್ತು. ಈ ವರ್ಷ ಇದು 4.09 ಲಕ್ಷ ಕೋಟಿ ರೂ.ಗಳಿಗೆ ಏರಿದೆ. ಇದು ಅವರ ಆರ್ಥಿಕ ಚಿಂತನೆಯನ್ನು ಪ್ರತಿಫಲಿಸುತ್ತದೆ. ಜತೆಗೆ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ಮಾಡುತ್ತಿರುವ ಅನ್ಯಾಯದ ಬಗ್ಗೆಯೂ ಅವರು ಹೇಳಿದ್ದಾರೆ. ಇದು ಒಂದು ಹೊಸ ಚರ್ಚೆಗೆ ನಾಂದಿ ಹಾಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಸಾಮಾಜಿಕ ಕಳಕಳಿ, ಉದ್ಯಮಸ್ನೇಹಿ ಬಜೆಟ್- ಎಂ.ಬಿ.ಪಾಟೀಲ್‌

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ.

Profile Siddalinga Swamy Mar 7, 2025 3:43 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು 16ನೇ ಬಾರಿಗೆ ಮಂಡಿಸಿರುವ ಬಜೆಟ್ (Karnataka Budget 2025) ಸಾಮಾಜಿಕ ಕಳಕಳಿ ಹೊಂದಿರುವ ಕಲ್ಯಾಣ ಕಾರ್ಯಕ್ರಮಗಳು ಮತ್ತು ಆರ್ಥಿಕ ಬೆಳವಣಿಗೆಗೆ ಇಂಬು ನೀಡುವ ಕೈಗಾರಿಕಾ ಬೆಳವಣಿಗೆ ಎರಡಕ್ಕೂ ಸಮಾನ ಪ್ರಾತಿನಿಧ್ಯ ನೀಡಿರುವ ಸಮಗ್ರ ದೃಷ್ಟಿಕೋನದ ಬಜೆಟ್ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ (MB Patil) ಹೇಳಿದ್ದಾರೆ. ಸಿದ್ದರಾಮಯ್ಯನವರು 1995ರಲ್ಲಿ ಮೊದಲ ಬಾರಿ ಬಜೆಟ್ ಮಂಡಿಸಿದಾಗ ಅದರ ಗಾತ್ರ 12 ಸಾವಿರ ಕೋಟಿ ರೂ.ಗಳಿತ್ತು. ಈ ವರ್ಷ ಇದು 4.09 ಲಕ್ಷ ಕೋಟಿ ರೂ.ಗಳಿಗೆ ಏರಿದೆ. ಇದು ಅವರ ಆರ್ಥಿಕ ಚಿಂತನೆಯನ್ನು ಪ್ರತಿಫಲಿಸುತ್ತದೆ. ಜತೆಗೆ ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಕೇಂದ್ರ ಸರ್ಕಾರವು ಮಾಡುತ್ತಿರುವ ಅನ್ಯಾಯದ ಬಗ್ಗೆಯೂ ಅವರು ಹೇಳಿದ್ದಾರೆ. ಇದು ಒಂದು ಹೊಸ ಚರ್ಚೆಗೆ ನಾಂದಿ ಹಾಡಲಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳಕ್ಕೆ ಮುಖ್ಯಮಂತ್ರಿಗಳು ಕೃಷಿ ಸಂಶೋಧನಾ ಕೇಂದ್ರ ಮತ್ತು ಮುಧೋಳಕ್ಕೆ ಹೆರಿಗೆ ಆಸ್ಪತ್ರೆ ಘೋಷಿಸಿದ್ದಾರೆ. ಇದು ಪ್ರಾದೇಶಿಕ ಸಮತೋಲನೆಯನ್ನು ನಿವಾರಣೆ ಮಾಡುವ ಕ್ರಮವಾಗಿದೆ. ಹಾಗೆಯೇ, ತಿಡಗುಂದಿಯಲ್ಲಿ ಪ್ಲೇ & ಪ್ಲಗ್ ಮಾದರಿಯ ಕೈಗಾರಿಕಾ ಪಾರ್ಕ್ ಸ್ಥಾಪನೆ ಘೋಷಿಸಿರುವುದು ಆ ಜಿಲ್ಲೆಯ ಉಸ್ತುವಾರಿ ಸಚಿವನಾಗಿರುವ ತಮಗೆ ಖುಷಿ ತಂದಿದೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳು ಬಂಡವಾಳ ಹೂಡಿಕೆಸ್ನೇಹಿ ವಾತಾವರಣ ಸೃಷ್ಟಿಯ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ಇ.ವಿ.ಕ್ಲಸ್ಟರ್ ಸ್ಥಾಪನೆಗೆ 25 ಕೋಟಿ ರೂ. ಕೊಟ್ಟಿರುವುದು ಒಳ್ಳೆಯ ಕ್ರಮವಾಗಿದೆ. ಬೆಂಗಳೂರು ಉಪನಗರ ರೈಲು ಯೋಜನೆಗೆ 15,767 ಕೋಟಿ ರೂ. ಅನುದಾನ ನೀಡುತ್ತಿರುವುದು ಮತ್ತು ನಗರದಲ್ಲಿ ಸಂಪರ್ಕ ವ್ಯವಸ್ಥೆಯನ್ನು ಸುಗಮಗೊಳಿಸಿರುವ ಮೆಟ್ರೋ ರೈಲು ಯೋಜನೆಯನ್ನು ದೇವನಹಳ್ಳಿಯವರೆಗೂ ವಿಸ್ತರಿಸಿರುವುದು ಸಕಾಲಿಕ ಕ್ರಮಗಳಾಗಿವೆ ಎಂದು ಸಚಿವ. ಎಂ.ಬಿ. ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Karnataka Budget 2025: ಒಲಿಂಪಿಕ್ಸ್‌ ಪದಕ ಯೋಜನೆಯಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಘೋಷಿಸಿದ ಸಿಎಂ

ರಾಜ್ಯದ ಸಮಗ್ರ ಅಭಿವೃದ್ಧಿ ಎಂದರೆ, ಕೃಷಿ ಮತ್ತು ಕೈಗಾರಿಕೆ ಎರಡಕ್ಕೂ ಗಮನ ಹರಿಸಬೇಕಾಗುತ್ತದೆ. ಇದಕ್ಕೆ ತಕ್ಕಂತೆ ಹನಿ ನೀರಾವರಿ, ಯಾಂತ್ರೀಕೃತ ಕೃಷಿ, ಸಾವಯವ ಕೃಷಿ, ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳು ರಚನಾತ್ಮಕವಾಗಿವೆ. ಇದರಿಂದ ರೈತರ ಸಬಲೀಕರಣ ಸಾಧ್ಯವಾಗಲಿದೆ. ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮಕ್ಕಾಗಿ ನೂತನ ಯೋಜನೆ ಪ್ರಾರಂಭಿಸಿ, ಅದಕ್ಕೆ 8,000 ಕೋಟಿ ರೂ. ಅನುದಾನ ಕೊಡುತ್ತಿರುವುದು ಗ್ರಾಮೀಣ ಭಾಗಗಳಲ್ಲಿ ಸೌಕರ್ಯಗಳ ಸುಧಾರಣೆಗೆ ದಾರಿ ಮಾಡಿಕೊಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.