ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Budget 2026 LIVE: ಕರ್ನಾಟಕ ಬಜೆಟ್‌ ಮಂಡನೆಗೆ ಕ್ಷಣಗಣನೆ; ದಾಖಲೆಯ 17ನೇ ಬಜೆಟ್ ಮಂಡಿಸಲಿರುವ ಸಿಎಂ

Karnataka Budget 2026 LIVE News in Kannada: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಸಿದ್ದರಾಮಯ್ಯ ಅವರು ಇವತ್ತು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿದ್ದರಾಮಯ್ಯ ಅವರ ದಾಖಲೆಯ 17ನೇ ಆಯವ್ಯಯ ಮಂಡನೆಗೆ ಕ್ಷಣಗಣನೆ ಶುರುವಾಗಿದೆ.

ಕರ್ನಾಟಕ ಬಜೆಟ್‌  ಮಂಡನೆಗೆ ಕ್ಷಣಗಣನೆ

Karnataka Budget 2026 LIVE News in Kannada -

Vishakha Bhat Heggar
Vishakha Bhat Heggar Mar 6, 2026 7:12 AM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ (Karnataka Budget 2026 LIVE) ಆಯವ್ಯಯವನ್ನು ಮಂಡಿಸಲಿದ್ದಾರೆ. ಹಿಂದಿನ ಬಜೆಟ್​​ಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಲವು ಜನಪರ ಯೋಜನೆಗಳನ್ನು ಘೋಷಣೆ ಮಾಡಿದ್ದು, ಈ ಬಾರಿಯೂ ಅಭಿವೃದ್ದಿಯ ಕುರಿತು ಹಲವು ಯೋಜನೆಗಳನ್ನು ಘೋಷಣೆ ಮಾಡುವ ನಿರೀಕ್ಷೆಯಿದೆ. ಕಳೆದ ಸಾಲಿನ ಬಜೆಟ್ 4.09 ಲಕ್ಷ ಕೋಟಿ ಗಾತ್ರ ಹೊಂದಿತ್ತು. ಈ ಬಾರಿ ಬಜೆಟ್​ ಗಾತ್ರ 4.50 ಲಕ್ಷ ಕೋಟಿ ತಲುಪುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರಗತಿಯಲ್ಲಿರುವ ಬೃಹತ್ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ವಿಶೇಷ ಅನುದಾನ ಘೋಷಿಸುವ ಸಾಧ್ಯತೆಯಿದೆ.

Live News
March 6, 2026, 8:54 a.m.

ಆರ್‌. ಅಶೋಕ್‌ ಕಿಡಿ

ರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗುರುವಾರ ರಾಜ್ಯ ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು, ಸರ್ಕಾರ 1.15 ಲಕ್ಷ ಕೋಟಿ ರೂ. ಸಾಲ ಪಡೆಯುವ ನಿರೀಕ್ಷೆಯಿದೆ ಮತ್ತು ಜನರ ಮೇಲೆ ಹೊಸ ತೆರಿಗೆಗಳನ್ನು ಹೇರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಬಜೆಟ್‌ನಲ್ಲಿ ಹೊಸದೇನೂ ಇರುವುದಿಲ್ಲ ಎಂದು ಹೇಳಿದ್ದಾರೆ.

March 6, 2026, 8:49 a.m.

ಯಾವುದರ ಬೆಲೆ ಹೆಚ್ಚಳವಾಗಲಿದೆ?

ಈ ಬಾರಿ ಬಜೆಟ್​​ನಲ್ಲಿ ಹಲವು ವಸ್ತುಗಳ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ಅಬಕಾರಿ ಸುಂಕ, ನೋಂದಣಿ ಮತ್ತು ಮುಂದ್ರಾಂಕ ಶುಲ್ಕ, ಮೋಟಾರು ವಾಹನ ತೆರಿಗೆ ಸೇರಿದಂತೆ ಇತರೆರ ತೆರಿಗೆ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

March 6, 2026, 8:45 a.m.

ಬಜೆಟ್ ಅಧಿವೇಶನ

ಬಜೆಟ್ ಅಧಿವೇಶನವು ಮಾರ್ಚ್ 6 ರಿಂದ ಮಾರ್ಚ್ 27 ರವರೆಗೆ ನಡೆಯಲಿದ್ದು, ಉಭಯ ಸದನಗಳಲ್ಲಿ 14 ದಿನಗಳ ಚರ್ಚೆ ನಡೆಯಲಿದೆ. 14 ದಿನಗಳ ಕಾಲ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಎರಡೂ ಸದನಗಳಲ್ಲಿ ಚರ್ಚೆ ನಡೆಯಲಿದೆ.

March 6, 2026, 8:37 a.m.

ಬಜೆಟ್‌ ಮೇಲಿನ ನಿರೀಕ್ಷೆಯೇನು?

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರಗತಿಯಲ್ಲಿರುವ ಬೃಹತ್ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ವಿಶೇಷ ಅನುದಾನ ಘೋಷಿಸುವ ಸಾಧ್ಯತೆಯಿದೆ.

March 6, 2026, 8:03 a.m.

ಈ ಬಾರಿ ಸಿದ್ದರಾಮಯ್ಯರಿಂದ ದಾಖಲೆಯ ಬಜೆಟ್‌ ಮಂಡನೆ

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ 17ನೇ ದಾಖಲೆಯ ಬಜೆಟ್​ ಮಂಡಿಸಲಿದ್ದಾರೆ. ಸರ್ಕಾರ ಈ ಬಾರಿ ಗ್ಯಾರಂಟಿ ಜೊತೆಗೆ ದೀರ್ಘಕಾಲೀನ ಜನಪರ ಯೋಜನೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆಯಿದೆ.

March 6, 2026, 8:03 a.m.

ಬಜೆಟ್‌ ಗಾತ್ರವೇನು?

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಈ ಬಾರಿ ಬಜೆಟ್ ಗಾತ್ರವನ್ನು ಗಣನೀಯವಾಗಿ ಹೆಚ್ಚಿಸುವ ಸಾಧ್ಯತೆಯಿದೆ. ಕಳೆದ ವರ್ಷ ಬಂಡವಾಳ ವೆಚ್ಚಕ್ಕಾಗಿ 55,877 ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಈ ಬಾರಿ ಅದು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.