ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Budget 2026 LIVE: ಬಜೆಟ್‌ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ; 56 ಸಾವಿರ ಉದ್ಯೋಗ ಭರ್ತಿಗೆ ಚಾಲನೆ ಎಂದ ಸಿಎಂ

Karnataka Budget 2026 LIVE News in Kannada: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಸಿದ್ದರಾಮಯ್ಯ ಅವರು ಇವತ್ತು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರ ದಾಖಲೆಯ 17ನೇ ಆಯವ್ಯಯ ಮಂಡನೆಯಾಗಿದೆ.

Karnataka Budget 2026 LIVE News in Kannada

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ (Karnataka Budget 2026 LIVE) ಆಯವ್ಯಯವನ್ನು ಮಂಡನೆ ಮಾಡುತ್ತಿದ್ದಾರೆ. ಹಿಂದಿನ ಬಜೆಟ್​​ಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಲವು ಜನಪರ ಯೋಜನೆಗಳನ್ನು ಘೋಷಣೆ ಮಾಡಿದ್ದು, ಈ ಬಾರಿಯೂ ಅಭಿವೃದ್ದಿಯ ಕುರಿತು ಹಲವು ಯೋಜನೆಗಳನ್ನು ಘೋಷಣೆ ಮಾಡುವ ನಿರೀಕ್ಷೆಯಿದೆ. ಕಳೆದ ಸಾಲಿನ ಬಜೆಟ್ 4.09 ಲಕ್ಷ ಕೋಟಿ ಗಾತ್ರ ಹೊಂದಿತ್ತು. ಈ ಬಾರಿ ಬಜೆಟ್​ ಗಾತ್ರ 4.50 ಲಕ್ಷ ಕೋಟಿ ತಲುಪುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರಗತಿಯಲ್ಲಿರುವ ಬೃಹತ್ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ವಿಶೇಷ ಅನುದಾನ ಘೋಷಿಸುವ ಸಾಧ್ಯತೆಯಿದೆ.

Live News
March 6, 2026, 10:46 a.m.

56 ಸಾವಿರ ಉದ್ಯೋಗ ಭರ್ತಿ

ರಾಜ್ಯದಲ್ಲಿ ನಿರುದ್ಯೋಗಿಗಳಿಗೆ ಈ ಬಾರಿ ಬಜೆಟ್​​ನಲ್ಲಿ ಸಿಹಿ ಸುದ್ದಿ ಸಿಕ್ಕಿದೆ. 56 ಸಾವಿರ ಉದ್ಯೋಗ ಭರ್ತಿ ಮಾಡಲಾಗುತ್ತೆ ಎಂದು ಸಿಎಂ ಘೋಷಣೆ ಮಾಡಿದ್ದಾರೆ. ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

March 6, 2026, 10:43 a.m.

800 ಕರ್ನಾಟಕ ಪಬ್ಲಿಕ್​ ಶಾಲೆ ಘೋಷಣೆ

ರಾಜ್ಯದ 2026-27ನೇ ಸಾಲಿನ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿ ಒತ್ತು ನೀಡುವ ಉದ್ದೇಶದಿಂದ 800 ಕರ್ನಾಟಕ ಪಬ್ಲಿಕ್​ ಶಾಲೆ ಘೋಷಣೆ ಮಾಡಲಾಗಿದೆ.

March 6, 2026, 10:39 a.m.

ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ ತೆರೆಯಲಾಗುತ್ತದೆ, ಕುವೆಂಪು ವಿವಿಯಲ್ಲಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು ಎಂದು 2026-27ನೇ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಿಸಿದ್ದಾರೆ.

March 6, 2026, 10:26 a.m.

ಬಜೆಟ್‌ ಮಂಡನೆ ಆರಂಭ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ ಮಂಡನೆ ಪ್ರಾರಂಭಿಸಿದ್ದಾರೆ. 4.49 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಮಂಡಿಸಲಿದ್ದಾರೆ. ಕಳೆದ ವರ್ಷಕ್ಕಿಂತ 40 ಸಾವಿರ ಕೋಟಿ ಬಜೆಟ್‌ ಗಾತ್ರ ಹೆಚ್ಚಳವಾಗಿದೆ.

March 6, 2026, 9:57 a.m.

ವಿಧಾನ ಸಭೆಗೆ ಆಗಮಿಸಿದ ಸಿಎಂ

ಕೆಂಪು ಸೂಟ್​ಕೇಸ್​ನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧಕ್ಕೆ ಬಂದಿದ್ದು, ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ. ಬಜೆಟ್ ಮಂಡನೆಗೆ ಅನುಮೋದನೆ ಪಡೆಯಲಿದ್ದಾರೆ.\

Budget 2026 (6)

March 6, 2026, 8:54 a.m.

ಆರ್‌. ಅಶೋಕ್‌ ಕಿಡಿ

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗುರುವಾರ ರಾಜ್ಯ ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು, ಸರ್ಕಾರ 1.15 ಲಕ್ಷ ಕೋಟಿ ರೂ. ಸಾಲ ಪಡೆಯುವ ನಿರೀಕ್ಷೆಯಿದೆ ಮತ್ತು ಜನರ ಮೇಲೆ ಹೊಸ ತೆರಿಗೆಗಳನ್ನು ಹೇರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಬಜೆಟ್‌ನಲ್ಲಿ ಹೊಸದೇನೂ ಇರುವುದಿಲ್ಲ ಎಂದು ಹೇಳಿದ್ದಾರೆ.

March 6, 2026, 8:49 a.m.

ಯಾವುದರ ಬೆಲೆ ಹೆಚ್ಚಳವಾಗಲಿದೆ?

ಈ ಬಾರಿ ಬಜೆಟ್​​ನಲ್ಲಿ ಹಲವು ವಸ್ತುಗಳ ಬೆಲೆ ಹೆಚ್ಚಳವಾಗುವ ಸಾಧ್ಯತೆ ಇದೆ. ಅಬಕಾರಿ ಸುಂಕ, ನೋಂದಣಿ ಮತ್ತು ಮುಂದ್ರಾಂಕ ಶುಲ್ಕ, ಮೋಟಾರು ವಾಹನ ತೆರಿಗೆ ಸೇರಿದಂತೆ ಇತರೆರ ತೆರಿಗೆ ಪ್ರಮಾಣವನ್ನು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

March 6, 2026, 8:45 a.m.

ಬಜೆಟ್ ಅಧಿವೇಶನ

ಬಜೆಟ್ ಅಧಿವೇಶನವು ಮಾರ್ಚ್ 6 ರಿಂದ ಮಾರ್ಚ್ 27 ರವರೆಗೆ ನಡೆಯಲಿದ್ದು, ಉಭಯ ಸದನಗಳಲ್ಲಿ 14 ದಿನಗಳ ಚರ್ಚೆ ನಡೆಯಲಿದೆ. 14 ದಿನಗಳ ಕಾಲ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಎರಡೂ ಸದನಗಳಲ್ಲಿ ಚರ್ಚೆ ನಡೆಯಲಿದೆ.

March 6, 2026, 8:37 a.m.

ಬಜೆಟ್‌ ಮೇಲಿನ ನಿರೀಕ್ಷೆಯೇನು?

ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರಗತಿಯಲ್ಲಿರುವ ಬೃಹತ್ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ವಿಶೇಷ ಅನುದಾನ ಘೋಷಿಸುವ ಸಾಧ್ಯತೆಯಿದೆ.

March 6, 2026, 8:03 a.m.

ಈ ಬಾರಿ ಸಿದ್ದರಾಮಯ್ಯರಿಂದ ದಾಖಲೆಯ ಬಜೆಟ್‌ ಮಂಡನೆ

ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ 17ನೇ ದಾಖಲೆಯ ಬಜೆಟ್​ ಮಂಡಿಸಲಿದ್ದಾರೆ. ಸರ್ಕಾರ ಈ ಬಾರಿ ಗ್ಯಾರಂಟಿ ಜೊತೆಗೆ ದೀರ್ಘಕಾಲೀನ ಜನಪರ ಯೋಜನೆಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆಯಿದೆ.

March 6, 2026, 8:03 a.m.

ಬಜೆಟ್‌ ಗಾತ್ರವೇನು?

ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಈ ಬಾರಿ ಬಜೆಟ್ ಗಾತ್ರವನ್ನು ಗಣನೀಯವಾಗಿ ಹೆಚ್ಚಿಸುವ ಸಾಧ್ಯತೆಯಿದೆ. ಕಳೆದ ವರ್ಷ ಬಂಡವಾಳ ವೆಚ್ಚಕ್ಕಾಗಿ 55,877 ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಈ ಬಾರಿ ಅದು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.

Vishakha Bhat Heggar

View all posts by this author