ಬೆಂಗಳೂರು, ಮಾ. 6: ರಾಜ್ಯ ಬಜೆಟ್‌ನಲ್ಲಿ (Karnataka Budget 2026) ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿರುವುದು ಸ್ವಾಗತಾರ್ಹ. ಪ್ರವಾಸೋದ್ಯಮ ಸರ್ಕ್ಯೂಟ್ ಅಭಿವೃದ್ಧಿ, ರೋಪ್ ವೇ, ಹೆಲಿ ಟ್ಯಾಕ್ಸಿ, ಸೀಪ್ಲೇನ್ ಮೊದಲಾದ ಯೋಜನೆಗಳಿಂದ ಪ್ರವಾಸಿಗರನ್ನು ಆಕರ್ಷಿಸಲು ಅನುಕೂಲವಾಗಲಿದೆ ಎಂದು ಅಡಿಗಾಸ್ ಯಾತ್ರಾದ ಸ್ಥಾಪಕ ಕೆ. ನಾಗರಾಜ್ ಅಡಿಗ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಮಾರಕಗಳನ್ನು ರಕ್ಷಿಸಲು 1,000ಕ್ಕೂ ಹೆಚ್ಚು ಸ್ಮಾರಕ ಮಿತ್ರರಿಗೆ ತರಬೇತಿ ನೀಡುವ ಯೋಜನೆ ಕೂಡ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.
ಪ್ರಮುಖ ಪ್ರವಾಸಿ ತಾಣವಾದ ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅನ್ನು ಅಭಿವೃದ್ಧಿಪಡಿಸುವುದು ಉತ್ತಮ ಆಯ್ಕೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿಯಿಂದ ಕೈಮರದವರೆಗೆ PPP ಮಾದರಿಯಲ್ಲಿ ರೋಪ್-ವೇ ನಿರ್ಮಿಸುವುದು ಕೂಡ ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.
ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು 100 ಕೋಟಿ ರು. ವೆಚ್ಚದಲ್ಲಿ ಸಮಗ್ರವಾದ ಯೋಜನೆ, ಪ್ರಮುಖ ಪ್ರವಾಸಿ ತಾಣವಾದ ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಇದರಿಂದ ರಾಜ್ಯಕ್ಕೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಲಿದೆ ಎಂದು ನಾಗರಾಜ್ ಅಡಿಗ ವಿವರಿಸಿದ್ದಾರೆ.
ಮೆಟ್ರೋ ವಿಸ್ತರಣೆ, ಟ್ರಾಫಿಕ್ ಸಮಸ್ಯೆಗೆ ಬಜೆಟ್‌ನಲ್ಲಿ ಮಾಸ್ಟರ್ ಪ್ಲಾನ್
ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶೇಷ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ʻಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆʼಯನ್ನು ರೂಪಿಸಿರುವುದು, ಈ ತಾಣಗಳಲ್ಲಿ ವಾಯುಯಾನ ಹಾಗೂ ಜಲಸಾಹಸ ಪ್ರವಾಸೋದ್ಯಮ ಭಾಗೀದಾರರ ಸಹಯೋಗದೊಂದಿಗೆ Sea Plane ಹಾಗೂ Heli Taxiಗಳ ಮುಖಾಂತರ ಸಂಪರ್ಕ ಕಲ್ಪಿಸುವುದು, ಜತೆಗೆ Joy Ride ಹಾಗೂ River Cruise ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದು ಸ್ವಾಗತಾರ್ಹ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.