ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Karnataka Budget 2026: ಬೆಂಗಳೂರಿನಲ್ಲಿ 40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ: ಸಿಎಂ

ಮೊದಲನೇ ಹಂತದಲ್ಲಿ 17 ಕಿ.ಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಿಸಲಾಗುತ್ತದೆ. ಹೆಬ್ಬಾಳ-ಸಿಲ್ಕ್ ಬೋರ್ಡ್​ವರೆಗೂ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗೆ 17,780 ಕೋಟಿ ರೂಪಾಯಿ ಮೊತ್ತಕ್ಕೆ ಟೆಂಡರ್ ಕರೆಯಲಾಗುತ್ತದೆ. ಹೆಬ್ಬಾಳ-ಮೇಕ್ರಿ ಸರ್ಕಲ್​ವರೆಗೂ ಸುರಂಗ ಮಾರ್ಗ ನಿರ್ಮಿಸಲಾಗುತ್ತದೆ.

ಕರ್ನಾಟಕ ಬಜೆಟ್

ಬೆಂಗಳೂರು, ಮಾರ್ಚ್‌ 6 : ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಕೆ.ಆರ್.ಪುರಂನಿಂದ ಮೈಸೂರು ರಸ್ತೆವರೆಗೆ 40 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ. 40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಬಜೆಟ್‌ನಲ್ಲಿ (Karnataka Budget 2026) ಘೋಷಿಸಿದ್ದಾರೆ.

ಮೊದಲನೇ ಹಂತದಲ್ಲಿ 17 ಕಿ.ಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಿಸಲಾಗುತ್ತದೆ. ಹೆಬ್ಬಾಳ-ಸಿಲ್ಕ್ ಬೋರ್ಡ್​ವರೆಗೂ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗೆ 17,780 ಕೋಟಿ ರೂಪಾಯಿ ಮೊತ್ತಕ್ಕೆ ಟೆಂಡರ್ ಕರೆಯಲಾಗುತ್ತದೆ. ಹೆಬ್ಬಾಳ-ಮೇಕ್ರಿ ಸರ್ಕಲ್​ವರೆಗೂ ಸುರಂಗ ಮಾರ್ಗ ನಿರ್ಮಿಸಲಾಗುತ್ತದೆ. ಸುರಂಗ ಮಾರ್ಗ ಹಾಗೂ ಮೇಲ್ಸೇತುವೆ ರಸ್ತೆಗೆ 2,250 ಕೋಟಿ ಮೀಸಲಿಡಲಾಗುವುದು ಎಂದು ತಿಳಿಸಿದ್ದಾರೆ.

ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ, ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಐದು ನಗರ ಪಾಲಿಕೆಗಳಿಗೆ 1,233 ಕೋಟಿ ಮೊತ್ತದ ರಸ್ತೆ, 1800 ಕೋಟಿ ವೆಚ್ಚದಲ್ಲಿ 158 ಕಿಲೋಮೀಟರ್ ರಸ್ತೆ ವೈಟ್ ಟ್ಯಾಪಿಂಗ್, 1836 ಕೋಟಿ ವೆಚ್ಚದಲ್ಲಿ ಉಪಮುಖ್ಯ ರಸ್ತೆಗಳ ಅಭಿವೃದ್ಧಿ, 450 ಕೋಟಿ ರೂಪಾಯಿ ರಾಜ ಕಾಲುವೆಗಳ ಮೇಲ್ದರ್ಜೆಗೆ ಏರಿಸಲು 273 ಕೋಟಿ ಮೀಸಲು ಇಡಲಾಗಿದೆ ಎಂದರು.

2025 ಮತ್ತು 26 ನೇ ಸಾಲಿನಲ್ಲಿ 216 ಸೇತುವೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ರಾಜ್ಯದಲ್ಲಿ 60 ಕೋಟಿ ವೆಚ್ಚದಲ್ಲಿ 10 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತೆ. ರಾಜ್ಯದ ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಮೂಲಕ ಆಡಳಿತ ವ್ಯವಸ್ಥೆಯನ್ನು ಬಲಪಡಿಸುತ್ತಿದ್ದೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಂತೆ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ್ದೇವೆ ಈ ವರ್ಷ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದ್ದೇವೆ ಎಂದು ಘೋಷಿಸಿದರು.

Karnataka Budget 2026 Size: 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿಎಂ; ಯಾವ ಇಲಾಖೆಗೆ ಎಷ್ಟು ಅನುದಾನ?

7 ಲಕ್ಷ ರೈತರಿಗೆ ಹನಿ ನೀರಾವರಿ ಸ್ಥಾಪನೆ 3 ಲಕ್ಷ ರೈತರಿಗೆ ಕೃಷಿ ಯಂತ್ರೋಪಗಳ ವಿತರಣೆ 363 ಕೋಟಿ ವೆಚ್ಚದಲ್ಲಿ ಕೃಷಿ ಹೊಂಡ ಸ್ಥಾಪನೆ 468 ಕೋಟಿ ವೆಚ್ಚದಲ್ಲಿ ಬಿತ್ತನೆ ಬೀಜ ವಿತರಣೆ. ಬೆಳಗಾವಿ ಕಲ್ಬುರ್ಗಿಯಲ್ಲಿ ಕುರಿ ಸಾಕಾಣಿಕೆಗೆ ಪ್ರೋತ್ಸಾಹ ನೀಡಲಾಗುತ್ತದೆ.ಅಲ್ಲದೇ ಹಸು ಎಮ್ಮೆ ಖರೀದಿಸಲು ಪ್ರೋತ್ಸಾಹ ಧನಕ್ಕೆ 40 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ತಿಳಿಸಿದರು.

Karnataka Budget 2026: ಸಿಹಿ ಸುದ್ದಿ, 56,432 ಸರಕಾರಿ ಹುದ್ದೆಗಳ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಹರೀಶ್‌ ಕೇರ

View all posts by this author