ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ

Budget Session: ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ ಶುರು; ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ

ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ ಶುರುವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದ್ದು, ಮಾ.7ರಂದು ಬಜೆಟ್‌ ಮಂಡನೆಯಾಗಲಿದೆ.

ಇಂದಿನಿಂದ ರಾಜ್ಯ ಬಜೆಟ್‌ ಅಧಿವೇಶನ ಶುರು

Profile Rakshita Karkera Mar 3, 2025 9:08 AM

ಬೆಂಗಳೂರು: ಇಂದಿನಿಂದ ಬಜೆಟ್‌ ಅಧಿವೇಶನ(Budget Session)ಆರಂಭವಾಗುತ್ತಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮತ್ತೊಂದೆಡೆ ಮೊದಲ ದಿನವೇ ಪ್ರತಿಪಕ್ಷ ಬಿಜೆಪಿ ಪ್ರತಿಭಟನೆಗೆ ಸಜ್ಜಾಗಿದೆ. ರಾಜ್ಯಪಾಲರ ಅಧಿಕಾರಾವಧಿ ಕಡಿತಗೊಳಿಸುವ ಕಾಂಗ್ರೆಸ್ ಸರ್ಕಾರದ ನಡೆ ವಿರುದ್ಧ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸಲು ಯೋಜಿಸಿದೆ. ಇಂದಿನಿಂದ ಮಾ.6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದ್ದು, ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಇದಾದ ಬಳಿಕ ಮಾ.21ರವರೆಗೆ ಬಳಿಕ ಬಜೆಟ್ ಮೇಲಿನ ಚರ್ಚೆಗಳು ನಡೆಯಲಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದು ತಮ್ಮ 16 ನೇ ಬಜೆಟ್ ಮಂಡಿಸಲಿದ್ದಾರೆ. ಅದೇ ದಿನ, ಕೇಸರಿ ಪಕ್ಷವು ರಾಜ್ಯ ಸರ್ಕಾರದ "ಅಧಿಕ ಸಾಲಗಳ" ವಿರುದ್ಧ ಮತ್ತೊಂದು ಪ್ರತಿಭಟನಾ ಮೆರಣಿಗೆ ನಡೆಸಲು ಯೋಜಿಸಿದೆ. 2025-26ನೇ ಹಣಕಾಸು ವರ್ಷದಲ್ಲಿ ಸಿದ್ದರಾಮಯ್ಯನವರ ಬಜೆಟ್ 4 ಲಕ್ಷ ಕೋಟಿ ರೂಪಾಯಿಗಳನ್ನು ಮೀರುವ ಸಾಧ್ಯತೆಯಿದೆ ಎಂದು ಸಿಎಂ ಕಚೇರಿಯ ಮೂಲಗಳು ತಿಳಿಸಿವೆ. ಕಳೆದ ಬಾರಿ 3.71 ಲಕ್ಷ ಬಜೆಟ್ ಮಂಡಿಸಲಾಗಿತ್ತು.

ಇಂದು ಕಾಂಗ್ರೆಸ್‌ ಶಾಸಕಾಂಗ ಸಭೆ

ಇಂದು ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ಸಭೆಯಲ್ಲಿ ಶಾಸಕರಿಗೆ ಸಲಹೆ, ಸೂಚನೆ ನೀಡಲಾಗುತ್ತದೆ. ವಿಪಕ್ಷಗಳಿಗೆ ತಿರುಗೇಟು ಕೊಡುವ ಬಗ್ಗೆ ಶಾಸಕರಿಗೆ ಸಲಹೆ, ಸೂಚನೆ ನೀಡಲಿದ್ದಾರೆ. ಈ‌ ಸಂಬಂಧ ಇಂದು ಸಂಜೆ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಬಸ್, ಮೆಟ್ರೋ‌ ಪ್ರಯಾಣ ದರ, ವಿದ್ಯುತ್ ಬಿಲ್, ಕುಡಿಯುವ ನೀರು, ಹಾಲಿನ ಬಿಲ್ ದರ ಏರಿಕೆ ಸಮರ್ಥಿಸಿಕೊಳ್ಳುವ ನಿಟ್ಟಿನಲ್ಲಿ ಶಾಸಕರೊಂದಿಗೆ ಚರ್ಚೆ ಮಾಡಲಿದ್ದಾರೆ.

ಪ್ರತಿಪಕ್ಷಗಳಿಂದ ಪ್ರಬಲಾಸ್ತ್ರ ಪ್ರಯೋಗಕ್ಕೆ ಸಿದ್ಧತೆ

ಅಧಿಕಾರಕ್ಕಾಗಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಆಂತರಿಕ ಸಂಘರ್ಷ, ಭ್ರಷ್ಟಾಚಾರ ಆರೋಪಗಳು, ಮೈಕ್ರೋ ಫೈನಾನ್ಸ್​ ಕಿರುಕುಳ, ಮೈಸೂರು ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಳಿ ಪ್ರಕರಣ, ಬಸ್, ಮೆಟ್ರೋ ದರ ಏರಿಕೆ ಸೇರಿದಂತೆ ಪ್ರಮುಖ ವಿಷಯಗಳನ್ನು ಇಟ್ಟುಕೊಂಡು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಸಿದ್ಧತೆ ಮಾಡಿಕೊಂಡಿವೆ