ಬಾಗಲಕೋಟೆ/ದಾವಣಗೆರೆ, ಮೇ 4: ರಾಜ್ಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಬಾಗಲಕೋಟೆ (Bagalkote Bypoll Results), ದಾವಣಗೆರೆ ದಕ್ಷಿಣ (Davanagere South Constituency Bypoll Results) ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ (Bypoll Results) ಮತ ಎಣಿಕೆ ಕಾರ್ಯ ಸೋಮವಾರ ನಡೆಯಲಿದೆ. ಎರಡು ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಮಧ್ಯಾಹ್ನದ ವೇಳೆಗೆ ಹೊರಬೀಳುವ ನಿರೀಕ್ಷೆ ಇದೆ. ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದೊಳಗೆ ಅಭ್ಯರ್ಥಿಗಳು ಹಾಗೂ ಸಂಬಂಧಪಟ್ಟ ರಾಜಕೀಯ ಪಕ್ಷಗಳ ಏಜೆಂಟರನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶವಿಲ್ಲದಂತೆ ನಿರ್ಬಂಧ ವಿಧಿಸಲಾಗಿದೆ.
ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಏಪ್ರಿಲ್ 9ರಂದು ಮತದಾನ ನಡೆದಿತ್ತು. ಈ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಉಮೇಶ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ಸ್ಪರ್ಧಿಸಿದ್ದರು. ಉಳಿದಂತೆ ಏಳು ಅಭ್ಯರ್ಥಿಗಳು ಕಣದಲ್ಲಿದ್ದರು.
ಡಿಸಿಎಂ ಡಿಕೆಶಿ, ನಟ ಸುದೀಪ್ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಅನಾಹುತ
ಮತ ಎಣಿಕೆ ಕಾರ್ಯವು ಬೆಳಗ್ಗೆ 8 ಗಂಟೆಗೆ ಸರಿಯಾಗಿ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಆರಂಭವಾಗಲಿದೆ. ಇದಕ್ಕಾಗಿ 14 ಟೇಬಲ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. 23 ಸುತ್ತುಗಳಲ್ಲಿ ಎಣಿಕೆ ಕಾರ್ಯ ನಡೆಯಲಿದೆ. ಅಂಚೆ ಮತ ಪತ್ರಗಳ ಎಣಿಕೆಗೆ ಪ್ರತ್ಯೇಕ ಟೇಬಲ್ ವ್ಯವಸ್ಥೆಯನ್ನು ಮಾಡಲಾಗಿದೆ.
ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ಸಹ ಕೈದಿಗಳಿಂದ ನಿಂದನೆ, ಬೆದರಿಕೆ! ಜಾಮೀನು ಅರ್ಜಿಯಲ್ಲಿ ನೋವು ತೋಡಿಕೊಂಡ ದಾಸ
ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಹಾಗೂ ಬಿಜೆಪಿ ಉಮೇದುವಾರ ಟಿ. ಶ್ರೀನಿವಾಸ ದಾಸಕರಿಯಪ್ಪ ಸೇರಿ 25 ಅಭ್ಯರ್ಥಿಗಳು ಕಣದಲ್ಲಿದ್ದರು. ಇಲ್ಲಿನ ಮತ ಎಣಿಕೆ ಕಾರ್ಯವು ನಗರದ ಡಿಆರ್‌ಆರ್ ಕಾಲೇಜಿನಲ್ಲಿ ನಡೆಯಲಿದೆ. ಇದಕ್ಕಾಗಿ ಒಟ್ಟು 14 ಟೇಬಲ್‌ಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಒಟ್ಟು 21 ಸುತ್ತುಗಳಲ್ಲಿ ಎಣಿಕೆ ಪ್ರಕ್ರಿಯೆ ನಡೆಯಲಿದೆ.