ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನೀತಿ ಆಯೋಗದ ಸಭೆಯಲ್ಲಿ ಡಿಕೆಶಿ ಭಾಗಿ; ಮೋದಿ ಭೇಟಿ ಮಾಡಲಿರುವ ಸಿಎಂ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಿಎಂ ಡಿಕೆ ಶಿವಕುಮಾರ್‌ ಭಾಗವಹಿಸಿದ್ದಾರೆ. ಈ ಸಭೆಯಲ್ಲಿ ರಾಜ್ಯಗಳ ಆರ್ಥಿಕತೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚೆಯಾಗುವ ನಿರೀಕ್ಷೆಯಿದೆ. ಸಭೆ ಬಳಿಕ ಡಿಕೆ ಶಿವಕುಮಾರ್‌, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕೃತವಾಗಿ ಭೇಟಿ ಮಾಡಲಿದ್ದಾರೆ.

ಸಂಗ್ರಹ ಚಿತ್ರ

ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಿಎಂ ಡಿಕೆ ಶಿವಕುಮಾರ್‌ (CM DK Shivakumar) ಭಾಗವಹಿಸಿದ್ದಾರೆ. ಈ ಸಭೆಯಲ್ಲಿ ರಾಜ್ಯಗಳ ಆರ್ಥಿಕತೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚೆಯಾಗುವ ನಿರೀಕ್ಷೆಯಿದೆ. ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್, ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ, ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್, ಸೇರಿದಂತೆ ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದಾರೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಆಡಳಿತ ಮಂಡಳಿಯ ಚರ್ಚೆಗಳು ಆಡಳಿತ ವ್ಯವಸ್ಥೆ, ಡಿಜಿಟಲ್ ಪಬ್ಲಿಕ್ ಇನ್‌ಫ್ರಾಸ್ಟ್ರಕ್ಚರ್ (DPI), ಸಮನ್ವಯ, ಪಾಲುದಾರಿಕೆಗಳು ಮತ್ತು ದತ್ತಾಂಶ ಆಧಾರಿತ ವ್ಯವಸ್ಥೆಗಳಂತಹ ಪ್ರಮುಖ ಸಕ್ರಿಯಗೊಳಿಸುವ ಅಂಶಗಳನ್ನು ಬಳಸಿಕೊಂಡು ಅನುಷ್ಠಾನ ಮಾರ್ಗಸೂಚಿಯನ್ನು ರೂಪಿಸುವುದರ ಮೇಲೂ ಕೇಂದ್ರೀಕರಿಸಲಿವೆ. ಜೊತೆಗೆ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿಯ ಫಲಿತಾಂಶಗಳನ್ನು ಮೇಲ್ವಿಚಾರಣೆ ಮಾಡಲು ರಚನಾತ್ಮಕ ವ್ಯವಸ್ಥೆ ರೂಪಿಸಿ, ಜವಾಬ್ದಾರಿತನ ಹಾಗೂ ಅಳೆಯಬಹುದಾದ ಪರಿಣಾಮವನ್ನು ಖಚಿತಪಡಿಸುವುದಕ್ಕೂ ಒತ್ತು ನೀಡಲಾಗುತ್ತದೆ.

ಮೋದಿ ಭೇಟಿ

ಸಭೆ ಬಳಿಕ ಡಿಕೆ ಶಿವಕುಮಾರ್‌, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕೃತವಾಗಿ ಭೇಟಿ ಮಾಡಲಿದ್ದಾರೆ. “ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದರು. ಜೊತೆಗೆ ರಾಜ್ಯದ ಅಭಿವೃದ್ಧಿಗೆ ಅಗತ್ಯ ಸಹಕಾರ ಕೊಡುವುದಾಗಿಯೂ ಭರವಸೆ ನೀಡಿದ್ದರು. ನಾಳೆ ಅವರ ಭೇಟಿಗೆ ಸಮಯ ನಿಗದಿಯಾಗಿದ್ದು, ಪ್ರಧಾನಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಹಾಗೂ ಆರ್ಥಿಕ ಯೋಜನೆಗಳ ಕುರಿತು ಮಾತುಕತೆ ನಡೆಸಲಾಗುವುದು” ಎಂದು ಸಿಎಂ ತಿಳಿಸಿದ್ದಾರೆ.

ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನಕ್ಕೆ ಸಿಎಂ ಡಿಕೆ ಶಿವಕುಮಾರ್ ಸಂತಾಪ

ಭಾರತದತ್ತ ವಿಶ್ವದ ಗಮನ ಬೆಂಗಳೂರಿನ ಮೂಲಕ ಹರಿಯುತ್ತಿರುವ ಹಿನ್ನೆಲೆಯಲ್ಲಿ, ನೀತಿ ಆಯೋಗದ ಸಭೆಯಲ್ಲಿ ಕರ್ನಾಟಕದ ಸಮಸ್ಯೆಗಳು ಮತ್ತು ಅಗತ್ಯಗಳನ್ನು ಪ್ರಸ್ತಾಪಿಸಿ, ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಕೇಂದ್ರ ಸಹಾಯವನ್ನು ಕೋರುತ್ತೇನೆ ಎಂದು ಸಿಎಂ ಹೇಳಿದ್ದಾರೆ.

Vishakha Bhat Heggar

View all posts by this author