ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kambala: ಕಂಬಳ ಕ್ರೀಡೆಗೆ ರಾಜ್ಯದ ಅಧಿಕೃತ ಮಾನ್ಯತೆ, ಅಸೋಸಿಯೇಷನ್‌ ಸ್ಥಾಪನೆ

Dakshina kannada: ರಾಜ್ಯ ಕಂಬಳ ಅಸೋಸಿಯೇಷನ್‌ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಅ.15ರಂದು ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಂಬಳ ಅಸೋಸಿಯೇಷನ್‌ನ ಬೈಲಾದ ಕರಡು ಪ್ರತಿಗೆ ಅನುಮೋದನೆ ಸಿಗಲಿದೆ.

ಕಂಬಳ ಕ್ರೀಡೆಗೆ ರಾಜ್ಯದ ಅಧಿಕೃತ ಮಾನ್ಯತೆ, ಅಸೋಸಿಯೇಷನ್‌ ಸ್ಥಾಪನೆ

-

ಹರೀಶ್‌ ಕೇರ ಹರೀಶ್‌ ಕೇರ Oct 10, 2025 7:22 AM

ಮಂಗಳೂರು : ದಕ್ಷಿಣ ಕನ್ನಡ (Dakshina kannada) ಜಿಲ್ಲೆಯ ಜನಪ್ರಿಯ ಕ್ರೀಡೆಯಾದ ಕಂಬಳಕ್ಕೆ (Kambala) ಕರ್ನಾಟಕ ರಾಜ್ಯ ಸರ್ಕಾರ (Karnataka government) ಅಧಿಕೃತ ಮಾನ್ಯತೆ (official recognition) ನೀಡಿದ್ದು, ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿನೆಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಕಂಬಳ ಅಸೋಸಿಯೇಷನ್‌ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಅ.15ರಂದು ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಂಬಳ ಅಸೋಸಿಯೇಷನ್‌ನ ಬೈಲಾದ ಕರಡು ಪ್ರತಿಗೆ ಅನುಮೋದನೆ ಸಿಗಲಿದೆ.

ಅಸೋಸಿಯೇಷನ್ ಪ್ರತಿವರ್ಷ ಜೂ.30ರೊಳಗೆ ಕಾರ್ಯಚಟುವಟಿಕೆಗಳ ಆಡಳಿತ ವರದಿ, ವಾರ್ಷಿಕ ವಹಿವಾಟುವಿನ ಆಡಿಟ್ ವರದಿ, ವಾರ್ಷಿಕ ಸಾಮಾನ್ಯ ಸಮಿತಿ ಮತ್ತು ಕಾರ್ಯಕಾರಿ ಸಮಿತಿ ಸಭೆಗಳ ನಡವಳಿ ಪ್ರತಿ, ಕ್ಯಾಲೆಂಡರ್ ಆಫ್ ಇವೆಂಟ್, ಸಂಘಗಳ ನೋಂದಣಿ ಕಾಯಿದೆ 1960ರಡಿ ಸಕ್ಷಮ ಪ್ರಾಧಿಕಾರದಿಂದ ರಾಜ್ಯ ಕಂಬಳ ಅಸೋಸಿಯೇಷನ್ ನವೀಕರಿಸಿರುವ ಪ್ರತಿ ಒದಗಿಸಲು ಆದೇಶದಲ್ಲಿ ತಿಳಿಸಲಾಗಿದೆ. ಸಂಸ್ಥೆಯ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ: Kantara: Chapter 1: ನೀವು ದೈವಗಳ ಅನುಕರಣೆ ಮಾಡೋದು ಸರೀನಾ?; ಕಾಂತಾರ-1 ಚಿತ್ರತಂಡದ ವಿರುದ್ಧ ನೆಟ್ಟಿಗರ ಆಕ್ರೋಶ

ಅಪಚಾರ ಮಾಡುವವರಿಗೆ ಹುಚ್ಚು ಹಿಡಿಸುತ್ತೇನೆ: ದೈವದ ನುಡಿ

ಮಂಗಳೂರು: ದೈವಾರಾಧನೆಯನ್ನು ʼಕಾಂತಾರ ಚಾಪ್ಟರ್‌ 1ʼ (Kantara Chapter 1) ಸಿನಿಮಾದಲ್ಲಿ ಬಿಂಬಿಸಿರುವ ಹಾಗೂ ಅದನ್ನು ನೋಡಿ ಅನುಕರಣೆ ಮಾಡುತ್ತಿರುವವರ ಬಗ್ಗೆ ದೈವದ ಮುಂದೆ ಭಕ್ತರು ಅಳಲು ತೋಡಿಕೊಂಡಿದ್ದು, ʼನನ್ನನ್ನು ಅಪಚಾರ ಮಾಡುವವರಿಗೆ ಬುದ್ಧಿ ಕಲಿಸುತ್ತೇನೆ, ಹುಚ್ಚು ಹಿಡಿಯುವಂತೆ ಮಾಡುತ್ತೇನೆʼ ಎಂದು ದೈವ ನುಡಿ ನೀಡಿದೆ. ಮಂಗಳೂರು (Mangaluru) ಬಳಿ ಪೆರಾರ ಕ್ಷೇತ್ರದಲ್ಲಿ ನಡೆದ ಪಿಲಿಚಂಡಿ ದೈವದ ನೇಮದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ʼಕಾಂತಾರ ಚಾಪ್ಟರ್ 1ʼ ಸಿನಿಮಾ ಬಿಡುಗಡೆ ಆದ ಬಳಿಕ ಸಿನಿಮಾ ಥಿಯೇಟರ್‌ಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ದೈವದ ಅನುಕರಣೆ ಮಾಡುತ್ತಿರುವವರ ವಿಡಿಯೋ ಹರಿದಾಡುತ್ತಿವೆ. ‘ಕಾಂತಾರ’ ಸಿನಿಮಾದಲ್ಲಿ ದೈವದ ಚಿತ್ರಣ ಮತ್ತು ವಿವಿಧೆಡೆ ದೈವದ ಅಪಹಾಸ್ಯ ಮಾಡುತ್ತಿರುವುದು ದೈವಾರಾಧಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಪೆರಾರ ಕ್ಷೇತ್ರದಲ್ಲಿ ನಡೆದ ಪುದರ್‌ ಮೆಚ್ಚಿ ನೇಮದಲ್ಲಿ ಪಿಲಿಚಂಡಿ ಹಾಗೂ ಬಲವಂಡಿ ದೈವದ ಮುಂದೆ ಪ್ರಾರ್ಥನೆ ಮಾಡಲಾಗಿದೆ. ಸಾಮೂಹಿಕ ಪ್ರಾರ್ಥನೆ ವೇಳೆ ಭಕ್ತರಿಗೆ ಸಮಾಧಾನದ ನುಡಿಯನ್ನು ಪಿಲಿಚಂಡಿ ದೈವದ ನುಡಿ ನುಡಿದಿದೆ.

ʼನನ್ನನ್ನು ಅಪಚಾರ ಮಾಡುವವರಿಗೆ ಬುದ್ಧಿ ಕಲಿಸುತ್ತೇನೆ. ಅವರಿಗೆ ಹುಚ್ಚು ಹಿಡಿಯುವಂತೆ ಮಾಡುತ್ತೇನೆ. ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ. ಅವರಿಗೆ ಬುದ್ಧಿ ಬರುವಂತೆ ಮಾಡುತ್ತೇನೆ. ಅವರು ಸಂಗ್ರಹಿಸಿದ ಹಣವೆಲ್ಲ ಆಸ್ಪತ್ರೆ ಸೇರುವಂತೆ ಮಾಡುತ್ತೇನೆʼ ಎಂದು ದೈವ ನುಡಿದಿದೆ. ʼಇನ್ನು ಮುಂದೆ ಎಲ್ಲಾ ದೇವಸ್ಥಾನಗಳಲ್ಲಿ ನಡೆಯು ನೇಮಗಳಲ್ಲಿ ಚಿತ್ರೀಕರಣ ನಿಲ್ಲಿಸಿ. ನೀವು ಹೋರಾಟವನ್ನು ಮುಂದುವರಿಸಿ. ನಾನು ನಿಮ್ಮ ಬೆನ್ನ ಹಿಂದೆ ಇದ್ದೇನೆʼ ಎಂದು ದೈವ ಆಕ್ರೋಶಪೂರ್ವಕವಾಗಿ ನುಡಿದಿದೆ ಎಂದು ತಿಳಿದುಬಂದಿದೆ.