D.K. Shivakumar: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್; ಕರ್ನಾಟಕ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯಾದ್ಯಂತ ಉಚಿತ ಬಸ್
ಕರ್ನಾಟಕ ಪಬ್ಲಿಕ್ ಶಾಲೆ ಶಾಲೆಯಲ್ಲಿ ಓದುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಆ ಮೂಲಕ ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕರ್ನಾಟಕ ಪಬ್ಲಿಕ್ ಶಾಲೆ (KPS) ಶಾಲೆಯಲ್ಲಿ ಓದುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿದೆ. ಹೌದು, ಎಲ್‌ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಸಾರಿಗೆ ಸೌಲಭ್ಯವನ್ನು ಘೋಷಿಸುವ ಮೂಲಕ ಮಹತ್ವದ ಯೋಜನೆಯನ್ನು ಪ್ರಕಟಿಸಿದೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಆ ಮೂಲಕ ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಹೆಚ್ಚಿಸಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ಶುಕ್ರವಾರ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಡಿಕೆಶಿ ಘೋಷಿಸಿದ್ದು, ʼʼಕೆಪಿಎಸ್ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಉಚಿತ ಸಾರಿಗೆ ಭಾಗ್ಯʼʼ ಎಂದು ಅವರು ಬರೆದುಕೊಂಡಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಸರ್ಕಾರ ಬದ್ಧ!
— DK Shivakumar (@DKShivakumar) July 11, 2025
ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್'ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ.#KarnatakaPublicSchool pic.twitter.com/tnvwFFEMij
ಈ ಸುದ್ದಿಯನ್ನೂ ಓದಿ: CM Siddaramaiah: ʼʼಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ; ಡಿಕೆಶಿ ಕೂಡ ಇದನ್ನೇ ಹೇಳಿದ್ದಾರೆʼʼ: ಸಿದ್ದರಾಮಯ್ಯ ಸ್ಪಷ್ಟನೆ
ಉದ್ದೇಶವೇನು?
ಸರ್ಕಾರಿ ಶಾಲೆಯ ಮಕ್ಕಳ ಹಾಜರಾತಿ, ಗುಣಮಟ್ಟ ಹೆಚ್ಚಿಸಲು ಸರ್ಕಾರದಿಂದ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಜತೆಗೆ ಕೆಪಿಎಸ್ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಎಲ್‌ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ಮಾಡುವ ಮಕ್ಕಳು ಉಚಿತ ಬಸ್ ವ್ಯವಸ್ಥೆಯನ್ನು ಸದುಪಯೋಗ ಪಡಿಸಬಹುದು ಎಂದು ತಿಳಿಸಿದ್ದಾರೆ.
ಅಲ್ಲದೆ ಬಡವರ ಮಕ್ಕಳಿಗೆ ಶೈಕ್ಷಣಿಕ, ಆರ್ಥಿಕವಾಗಿ ಬಲ ನೀಡಲು ಸರ್ಕಾರದಿಂದ ಮಹತ್ವದ ಚಿಂತನೆ ನಡೆದಿದೆ. ಇದು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸರ್ಕಾರದ ದಿಟ್ಟ ನಿರ್ಧಾರ ಎಂದು ಡಿಕೆಶಿ ತಿಳಿಸಿದ್ದಾರೆ.