ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Janaushadhi Kendra: ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರ (Janaushadhi Kendra) ಮುಚ್ಚುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರಾಕೇಶ್ ಮಹಾಲಿಂಗಪ್ಪ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ನಿರ್ದೇಶಿಸಿ ಮೇ 14 ರಂದು ಹೊರಡಿಸಲಾದ ಆದೇಶವನ್ನು ರದ್ದುಗೊಳಿಸಿ ಆದೇಶ ಆದೇಶಿಸಿದ್ದಾರೆ.

ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಜನೌಷಧಿ ಕೇಂದ್ರ -

ಹರೀಶ್‌ ಕೇರ
ಹರೀಶ್‌ ಕೇರ Dec 11, 2025 1:07 PM

ಬೆಂಗಳೂರು, ಡಿ.1‌1: ಕರ್ನಾಟಕದಲ್ಲಿ (Karnataka) ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು (Janaushadhi kendra) ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ (Karnataka High court) ಧಾರವಾಡ ಪೀಠ ರದ್ದುಗೊಳಿಸಿದೆ. ರಾಕೇಶ್ ಮಹಾಲಿಂಗಪ್ಪ ಎಲ್ ಮತ್ತು ಇತರರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಏಕಸದಸ್ಯ ಪೀಠ ಅಂಗೀಕರಿಸಿದ್ದು, ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ನಿರ್ದೇಶಿಸಿ ಮೇ 14 ರಂದು ಹೊರಡಿಸಲಾದ ಸರ್ಕಾರಿ ಆದೇಶವನ್ನು ರದ್ದುಗೊಳಿಸಿ ಮೌಖಿಕ ಆದೇಶ ಹೊರಡಿಸಿದೆ.

ವಾದ- ಪ್ರತಿವಾದ ಹೇಗಿತ್ತು?

ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರ ಮುಚ್ಚುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ರಾಕೇಶ್ ಮಹಾಲಿಂಗಪ್ಪ ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸರ್ಕಾರಿ ವಕೀಲರು ಸಹ ಆಕ್ಷೇಪಣೆ ಸಲ್ಲಿಸಿದ್ದು, ರಾಜ್ಯ ಸರ್ಕಾರವು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧವನ್ನು ಪೂರೈಸಲು ನಿರ್ಧರಿಸಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳ ಒಳಗೆ ಜನೌಷಧಿ ಕೇಂದ್ರಗಳ ಕಾರ್ಯಾಚರಣೆ ಅನಿವಾರ್ಯವಲ್ಲ ಎಂದು ವಾದಿಸಿದರು. ಅಲ್ಲದೇ ಆಸ್ಪತ್ರೆ ಆವರಣದೊಳಗಿದ್ದ ಜನೌಷಧಿ ಕೇಂದ್ರಗಳನ್ನು ಮುಚ್ಚಿಸಲಾಗಿದೆ. ಇನ್ನುಳಿದಂತೆ ಅದರಾಚೆಗೆ ಇರುವ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ ಎಂದು ತಿಳಿಸಿದರು.

ಬಳಿಕ ವಾದ ಮಾಡಿದ ಅರ್ಜಿದಾರರ ಪರ ವಕೀಲರು, ಈ ಬಗ್ಗೆ ಸಮಾಲೋಚಿಸದೆ ಅಥವಾ ಯಾವುದೇ ಮುಂಚಿತ ಮಾಹಿತಿ ನೀಡದ ತರಾತುರಿಯಲ್ಲಿ ಮುಚ್ಚಿಸಲಾಗಿದೆ. ಉಚಿತ ಔಷಧ ವಿತರಣೆಗೆ ಸಣ್ಣ ಕೇಂದ್ರವೊಂದು ಅಡ್ಡ ಬರುತ್ತಿದೆ ಎಂಬುದು ರಾಜ್ಯದ ವಾದವಾಗಲು ಸಾಧ್ಯವಿಲ್ಲ. ಸರ್ಕಾರ ಯಾವಾಗಲೂ ಉಚಿತವಾಗಿ ಔಷಧ ನೀಡುತ್ತಿದೆ. ನಾವಿಬ್ಬರೂ ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಕೋರ್ಟ್​​ಗೆ ತಿಳಿಸಿದರು.

ಕೇಂದ್ರ ಸರ್ಕಾರದಿಂದ ರೈತರಿಗೆ ಗುಡ್‌ ನ್ಯೂಸ್‌; ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ

ಮೂಲಸೌಕರ್ಯ ಅಭಿವೃದ್ಧಿ, ಔಷಧ ದಾಸ್ತಾನು, ಉಪಕರಣಗಳು ಮತ್ತು ಪೀಠೋಪಕರಣಗಳು, ಸಿಬ್ಬಂದಿ ವೇತನ, ಕೇಂದ್ರವನ್ನು ನಡೆಸುವ ಉದ್ದೇಶಕ್ಕಾಗಿ ಅಗತ್ಯ ಪರವಾನಗಿ ಪಡೆದಿರುವುದು ಕಾನೂನುಬದ್ಧವಾಗಿದೆ. ಆದಾಗ್ಯೂ ಸಂವಿಧಾನದ 19(1)(ಜಿ) ಅಡಿಯಲ್ಲಿ ಅವರ ಜೀವನೋಪಾಯದ ಹಕ್ಕನ್ನು ಮತ್ತು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಬದುಕುವ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಪ್ರಬಲ ವಾದ ಮಂಡಿಸಿದರು.

ಈ ವಾದ ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ನಿರ್ದೇಶಿಸಿ ಮೇ 14 ರಂದು ಹೊರಡಿಸಲಾದ ಆದೇಶವನ್ನು ರದ್ದುಗೊಳಿಸಿ ಆದೇಶ ಆದೇಶಿಸಿದ್ದಾರೆ.

ಜನೌಷಧಿ ಕೇಂದ್ರ ಮುಚ್ಚಿಲ್ಲ, ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಮಾತ್ರ ನಿರ್ಬಂಧ: ದಿನೇಶ್‌ ಗುಂಡೂರಾವ್ ಸ್ಪಷ್ಟನೆ