Basangouda Patil Yatnal: ಶಾಸಕನಾಗಿ ಈ ಥರ ಮಾತಾಡಬಾರದು: ಯತ್ನಾಳ್‌ಗೆ ಹೈಕೋರ್ಟ್ ಛೀಮಾರಿ
ಕೊಪ್ಪಳ ಟೌನ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಯತ್ನಾಳ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾ.ಎಂ.ಐ. ಅರುಣ್ ಅವರ ನ್ಯಾಯಪೀಠ ನಡೆಸಿದೆ. ಇದೇ ವೇಳೆ ಪೊಲೀಸರು ಬಲವಂತದ ಕ್ರಮ ಜರುಗಿಸಬಾರದು. ತನಿಖೆಗೆ ಯತ್ನಾಳ್ ಸಹಕರಿಸಬೇಕು ಎಂದು ಮಧ್ಯಂತರ ಆದೇಶ ನೀಡಿತು.

-

ಬೆಂಗಳೂರು : ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ಐದು ಲಕ್ಷ ರು. ನೀಡುವುದಾಗಿ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ( Basangouda Patil Yatnal ) ನಡೆಯನ್ನು ಕರ್ನಾಟಕ ಹೈಕೋರ್ಟ್ (karnataka high court) ಆಕ್ಷೇಪಿಸಿದ್ದು, ಯತ್ನಾಳ್ ಅವರ ಮಾತಿಗೆ ಛೀಮಾರಿ ಹಾಕಿದೆ. ರಾಜಕಾರಣಿಗಳು ವಿವಿಧ ಧರ್ಮೀಯರ ಮಧ್ಯೆ ಸಹ ಬಾಳ್ವೆ ಮೂಡಿಸುವಂಥ ಕ್ರಾಂತಿಕಾರಕ ಕೆಲಸ ಮಾಡ ಬೇಕೇ ಹೊರತು ದ್ವೇಷ ಭಾವನೆ ಮೂಡಿಸುವ ಕೆಲಸವನ್ನಲ್ಲ ಎಂದಿದೆ.
ಕೊಪ್ಪಳ ಟೌನ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಯತ್ನಾಳ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಂ.ಐ. ಅರುಣ್ ಅವರ ಪೀಠ ಹೀಗೆ ನುಡಿಯಿತು. ಇದೇ ವೇಳೆ ಪೊಲೀಸರು ಬಲವಂತದ ಕ್ರಮ ಜರುಗಿಸಬಾರದು. ತನಿಖೆಗೆ ಯತ್ನಾಳ್ ಸಹಕರಿಸಬೇಕು ಎಂದು ಮಧ್ಯಂತರ ಆದೇಶ ನೀಡಿತು.
ಪ್ರಕರಣದ ಹಿನ್ನೆಲೆ
ಕೊಪ್ಪಳದಲ್ಲಿ ಹಿಂದೂ ಯುವಕನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊಪ್ಪಳ ನಗರಕ್ಕೆ ಭೇಟಿ ನೀಡಿದಾಗ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ಬಹುಮಾನ ನೀಡುವುದಾಗಿ ವಿವಾದಿತ ಹೇಳಿಕೆ ನೀಡಿದರು. ಈ ಹೇಳಿಕೆಯ ವಿರುದ್ಧ ಕೊಪ್ಪಳ ಕಲಬುರ್ಗಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯತ್ನಾಳ್ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿತ್ತು.
ಇದನ್ನೂ ಓದಿ: ಮುಸ್ಲಿಂ ಯುವತಿಯ ಮದುವೆಯಾಗುವ ಹಿಂದೂ ಯುವಕನಿಗೆ 5 ಲಕ್ಷ ರೂ.: ಯತ್ನಾಳ್ ಘೋಷಣೆ