Karnataka High Court: ನಾಳೆಯಿಂದ ಮೇ 31ರವರೆಗೆ ಹೈಕೋರ್ಟ್‌ಗೆ ಬೇಸಿಗೆ ರಜೆ
ರಜೆ ಅವಧಿಯಲ್ಲಿ ಬೆಂಗಳೂರು ಮತ್ತು ಧಾರವಾಡ ಪೀಠಗಳು ಕೆಲವು ದಿನಗಳಂದು ಕಾರ್ಯ ನಿರ್ವಹಿಸಲಿವೆ. ರಜೆ ಅವಧಿಯಲ್ಲಿ ಯಾವುದೇ ಮೇಲ್ಮನವಿ ಹಾಗೂ ಹಳೆಯ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಕೇವಲ ತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸಲಾಗುವುದು.

ಕರ್ನಾಟಕ ಹೈಕೋರ್ಟ್

ಬೆಂಗಳೂರು : ಕರ್ನಾಟಕ ಹೈಕೋರ್ಟ್‌ಗೆ (Karnataka high court) ನಾಳೆಯಿಂದ (ಮೇ 5) ಮೇ 31ರವರೆಗೆ ಬೇಸಿಗೆ ರಜೆ (Summer Vacation) ಇರಲಿದ್ದು, ಕೋರ್ಟ್ ಕಲಾಪಗಳು ಜೂ.2ರಿಂದ ಪುನರಾರಂಭವಾಗಲಿವೆ. ರಜೆ ಅವಧಿಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗೆ ಬೆಂಗಳೂರಿನ (bengaluru) ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಮೇ 6, 8, 13, 15, 20, 22, 27 ಮತ್ತು 29ರಂದು ರಜಾಕಾಲದ ಪೀಠಗಳು ಕಾರ್ಯ ನಿರ್ವಹಿಸಲಿವೆ.
ರಜೆ ಅವಧಿಯಲ್ಲಿ ಬೆಂಗಳೂರು ಮತ್ತು ಧಾರವಾಡ ಪೀಠಗಳು ಬೆಳಗ್ಗೆ 10.30ರಿಂದ ಕಲಾಪ ಆರಂಭಿಸಿದರೆ, ಕಲಬುರಗಿ ಪೀಠ ಬೆಳಿಗ್ಗೆ 8ಕ್ಕೆ ಕಾರ್ಯಾರಂಭಗೊಳ್ಳಲಿದೆ. ಈ ಅವಧಿಯಲ್ಲಿ ಕಾರ್ಯ ನಿರ್ವಹಿಸುವ ರಜಾಪೀಠಗಳಿಗೆ ನ್ಯಾಯಮೂರ್ತಿಗಳನ್ನು ನಿಯೋಜಿಸಿ ಸಿಜೆ ಸೂಚನೆ ಮೇರೆಗೆ ರಿಜಿಸ್ಟ್ರಾರ್ ಜನರಲ್ ಆದೇಶ ಹೊರಡಿಸಿದ್ದಾರೆ.
ರಜೆ ಅವಧಿಯಲ್ಲಿ ಯಾವುದೇ ಮೇಲ್ಮನವಿ ಹಾಗೂ ಹಳೆಯ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳುವುದಿಲ್ಲ. ಕೇವಲ ತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆಗೆ ಪರಿಗಣಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಶೀಘ್ರದಲ್ಲೇ 19,000 ಶಿಕ್ಷಕರ ನೇಮಕಾತಿ
ಬೆಂಗಳೂರು: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ನಗರದ ಕ್ವೀನ್ಸ್ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಸರ್ಕಾರಿ ಶಾಲೆಗಳಲ್ಲಿ ಕೆಲ ಮೂಲಭೂತ ಸೌಕರ್ಯಗಳ ಅಭಾವವಿರುವುದು ನಿಜ, ಈ ಸಮಸ್ಯೆಯನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು. ಹಾಗೆಯೇ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ (Teachers Recruitment) ಕೊರತೆಯಿದ್ದು, ಶೀಘ್ರವೇ ರಾಜ್ಯದಲ್ಲಿ 19,000 ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಒಳ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ವರದಿ ನೀಡಿದ ಬಳಿಕ 19 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು. ರಾಜ್ಯದ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 5000 ಶಿಕ್ಷಕರು, ಉಳಿದ ಭಾಗದಲ್ಲಿ 5000 ಸೇರಿ ಒಟ್ಟು 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುವುದಾಗಿ ಈಗಾಗಲೇ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದರ ಜೊತೆಗೆ ಇನ್ನೂ ಒಂಬತ್ತು ಸಾವಿರ ಹುದ್ದೆಗಳು ಸೇರಿ 19 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಉದ್ದೇಶವಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Sonu Nigam: ಕನ್ನಡಿಗರ ಕುರಿತು ವಿವಾದಾತ್ಮಕ ಹೇಳಿಕೆ; ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲು