Girish Mattannavar: ಧರ್ಮಸ್ಥಳದಲ್ಲಿ ವಿವಾಹವಾಗುವ ಯುವತಿಯರ ಕುರಿತು ಅಶ್ಲೀಲ ಹೇಳಿಕೆ, ಮಟ್ಟಣ್ಣವರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ
Dharmasthala case: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಮತ್ತು ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇರೆಗೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ದೂರು ಸಲ್ಲಿಸಲಾಗಿತ್ತು. ಬೆಂಗಳೂರಿನ ರಾಜಾಜಿನಗರದ ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.
ಗಿರೀಶ್ ಮಟ್ಟಣ್ಣವರ್ ವಿರುದ್ಧ ತನಿಖೆಗೆ ಹೈಕೋರ್ಟ್ ಸೂಚನೆ -
ಬೆಂಗಳೂರು: ಧರ್ಮಸ್ಥಳ (Dharmasthala) ವಿರೋಧಿ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್‌ಗೆ (Girish Mattannavar) ಕರ್ನಾಟಕ ಹೈಕೋರ್ಟ್ (Karnataka high court) ಬಿಗ್ ಶಾಕ್ ನೀಡಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹವಾಗುವ ಯುವತಿಯರ ಚಾರಿತ್ರ್ಯದ ಬಗ್ಗೆ ಅಶ್ಲೀಲ ಅರ್ಥ ಬರುವಂತೆ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಮತ್ತು ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇರೆಗೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ದೂರು ಸಲ್ಲಿಸಲಾಗಿತ್ತು. ಬೆಂಗಳೂರಿನ ರಾಜಾಜಿನಗರದ ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ. 3 ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಎಸ್. ರಾಜಶೇಖರ್, ''ಗಿರೀಶ್ ಮಟ್ಟಣ್ಣನವರ್ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಕುರಿತು ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಆ ಹೇಳಿಕೆ ವಿರುದ್ಧ 2025ರ ಆ.29 ರಂದು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದ ಕಾವೇರಿ ಕೇದಾರನಾಥ ನೇತೃತ್ವದ ನಿಯೋಗ ಮಟ್ಟಣ್ಣನವರ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು. ಆದರೆ, ದೂರಿನ ಸಂಬಂಧ ಮಹಿಳಾ ಆಯೋಗದಿಂದ ಈವರೆಗೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಅರ್ಜಿದಾರರು ಹೈಕೋರ್ಟ್‌ನ ಮೊರೆ ಹೋಗಿದ್ದಾರೆ,'' ಎಂದರು. ಅರ್ಜಿದಾರರು ಸಲ್ಲಿಸಿರುವ ದೂರು ಆಧರಿಸಿ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಕೋರ್ಟ್ ನಿರ್ದೇಶನ ನೀಡಿದೆ.
ಇದನ್ನೂ ಓದಿ: Dharmasthala: ಧರ್ಮಸ್ಥಳ ಪ್ರಕರಣ; ಯೂಟ್ಯೂಬರ್ ಸಮೀರ್, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವರಿಗೆ ಸಂಕಷ್ಟ
ಶಾಸಕರ ಭವನಕ್ಕೆ ಬಾಂಬ್ ಇಟ್ಟ ಪ್ರಕರಣಕ್ಕೂ ಮರುಜೀವ
ಜಧಾನಿಯ ಶಾಸಕರ ಭವನದ ಬಳಿ ಗಿರೀಶ್ ಮಟ್ಟಣ್ಣವರ್ (Girish mattannavar) ಬಾಂಬ್ (bomb threat) ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗಳಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ. ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಪ್ರಕರಣವನ್ನು ಮರುತನಿಖೆ ನಡೆಸಬೇಕು ಹಾಗೂ NIA ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿರುವ ಪ್ರಶಾಂತ್ ಸಂಬರಗಿ (Prashant sambargi) ತಾವೇ ಬಾಂಬ್ ತಯಾರಿಸಿ ಇಟ್ಟಿದ್ದಾಗಿ ಒಪ್ಪಿಕೊಂಡಿರುವ ರೀತಿಯಲ್ಲಿ ಗಿರೀಶ್ ಮಟ್ಟಣ್ಣವರ್ ಹೇಳಿರುವ ಹಲವು ವಿಡಿಯೋಗಳನ್ನು ದಾಖಲೆ ರೂಪದಲ್ಲಿ ನೀಡಿದ್ದಾರೆ.
ಪ್ರಕರಣ ಈಗಾಗಲೇ ಕೋರ್ಟ್‌ನಲ್ಲಿ ಖುಲಾಸೆಯಾಗಿದ್ದರೂ ಹೊಸ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿದೆ. ಪ್ರಕರಣ ಖುಲಾಸೆಯಾದ ಬಳಿಕವೂ ಹಲವು ಸಂದರ್ಭಗಳಲ್ಲಿ ಈ ಕುರಿತು ಮಟ್ಟಣ್ಣವರ್ ಮಾತನಾಡಿದ್ದಾರೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ತಿಳಿಸಿದ್ದಾರೆ.